ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಿ


Team Udayavani, Oct 22, 2022, 2:54 PM IST

tdy-11

ರಾಮನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳ ಪರಿಹಾರಕ್ಕೆ ಸಮರ್ಪಕ ಕ್ರಮ ಕೈಗೊಂಡು ಸಂಬಂಧಿಸಿದ ಇಲಾಖೆಗಳ ವತಿಯಿಂದ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದರೊಂದಿಗೆ ಸಮಸ್ಯೆಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಅವಿನಾಶ್‌ ಮೆನನ್‌ ರಾಜೇಂದ್ರನ್‌ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ದೌರ್ಜನ್ಯ ಪ್ರತಿಬಂಧ ತಿದ್ದುಪಡಿ ಅಧಿನಿಯಮ 2015ರ ಅನುಷ್ಟಾನ ಸಂಬಂಧ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಸ್ಮಶಾನಕ್ಕೆ ಜಾಗ ನೀಡುವ ಪ್ರಕ್ರಿಯೆ ನಡೆದಿದೆ. ಜಮೀನು ಲಭ್ಯವಿರುವ ಕಡೆಗಳಲ್ಲಿ ನೀಡುವುದು ಮತ್ತು ಇಲ್ಲದಿರುವ ಕಡೆಗಳಲ್ಲಿ ಖರೀದಿ ಮಾಡಲಾಗುವುದು. ಈಗಾಗಲೇ ಲಭ್ಯವಿರುವ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುವುದು. ಜಮೀನು ಸಕ್ರಮಕ್ಕೆ ಸರ್ಕಾರದ ಹಂತದಲ್ಲಿ ನಿರ್ಧಾರ ಮಾಡಿದಾಗ ಮಾತ್ರ, ಸ್ಥಳೀಯವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಅವಕಾಶ ಬರುವವರೆಗೂ ಕಾಯಬೇಕು ಎಂದು ಭರವಸೆ ನೀಡಿದರು.

ಅರ್ಹರಿಗೆ ನಿವೇಶನ ನೀಡಿ: ನಗರಸಭಾ ವ್ಯಾಪ್ತಿಯಲ್ಲಿ ಬರುವಂತಹ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ವರ್ಗದವರಿಗೆ ನಿವೇಶನ ಮತ್ತು ಮನೆ ಇಲ್ಲದವರಿಗೆ ಸರ್ಕಾರಿ ಜಾಗವನ್ನು ಗುರುತಿಸಿ, ಕಾನೂನು ರೀತಿಯಲ್ಲಿ ನಿವೇಶನ ನೀಡಬೇಕು ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಅಂಗಡಿ ಮಳಿಗೆಗಳ ವಿರುದ್ಧ ಕ್ರಮ ಕೈಗೊಂಡು, ಅಂಗಡಿಗಳನ್ನು ತೆರವುಗೊಳಿಸಬೇಕು. ಮಾಗಡಿ ತಾಲೂಕಿನಲ್ಲಿ ವಾಸಿಸುತ್ತಿರುವ ಇರುಳಿಗರು, ಬೆಟ್ಟಗಳ ಮೇಲೆ ನೆಲೆಸಿರುವ ಇರುಳಿಗರ ಬುಡಕಟ್ಟು ಜನಾಂಗಕ್ಕೆ ನಿವೇಶನ, ಕುಡಿಯುವ ನೀರು, ರಸ್ತೆ, ವಿದ್ಯುತ್‌ ಸಂಪರ್ಕ ಮುಂತಾದ ಮೂಲಭೂತ ಸೌಲಭ್ಯ ಮತ್ತು ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿ: ಜಿಲ್ಲಾ ಪೊಲೀಸ್‌ ವರಷ್ಠಾಧಿಕಾರಿ ಸಂತೋಷ್‌ ಬಾಬು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಅಲಿಸಿ, ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತವಾಗಿ ಎಫ್‌ಐಆರ್‌ ದಾಖಲಿಸಿ, ವರದಿ ಸಲ್ಲಿಸಲು ಠಾಣಾಧಿಕಾರಿಗಳು ಕ್ರಮವಹಿಸಬೇಕು. ಜೊತೆಗೆ ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಈ ಕುರಿತಂತೆ ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ: ಜಿಲ್ಲೆಯಾದ್ಯಂತ ದಲಿತ ಕಾಲೋನಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಒಂದು ವೇಳೆ ಮದ್ಯ ಮಾರಾಟ ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಕಿರಣ್‌ ಎಂಬ ಯುವಕನ ಮೇಲೆ ಹಲ್ಲೆಯಾಗಿರುವುದನ್ನು ಖಂಡಿಸಿ, ಸಭೆಯಲ್ಲಿ ಅಸಮಾಧಾನ ವ್ಯಕ್ತ ಪಡಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ದಿಗ್ವಿಜಯ್‌, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಮಂಜುನಾಥ್‌ ಮತ್ತು ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲೆ ದೌರ್ಜನ್ಯ ತಡೆಗೆ ಜಿಲ್ಲಾಡಳಿತ ಸಿದ್ಧವಿದೆ. ಅಂತಹ ಯಾವುದೇ ಘಟನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಎಫ್‌ಐಆರ್‌ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. – ಡಾ.ಅವಿನಾಶ್‌ ಮೆನನ್‌ ರಾಜೇಂದ್ರನ್‌, ಜಿಲ್ಲಾಧಿಕಾರಿ, ರಾಮನಗರ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.