ಬಿಸಿಯೂಟಕ್ಕೆ ತಾತ್ಕಾಲಿಕ ತಡೆ

ಸರ್ಕಾರದಿಂದ ಆದೇಶ ,ಕ್ಷೀರ ಭಾಗ್ಯ ಯೋಜನೆಯೂ ಬಂದ್‌

Team Udayavani, Nov 4, 2020, 2:55 PM IST

ಬಿಸಿಯೂಟಕ್ಕೆ ತಾತ್ಕಾಲಿಕ ತಡೆ

ರಾಮನಗರ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಣೆ ಯಾಗಬೇಕಿದ್ದ ಆಹಾರ ಪದಾರ್ಥಗಳನ್ನು ಜೋಡಿಸಿಇಟ್ಟಿರುವುದು. (ಸಂಗ್ರಹ ಚಿತ್ರ ),ಸಾಂದರ್ಭಿಕ ಚಿತ್ರ

ರಾಮನಗರ: ಕೋವಿಡ್‌ ಸೋಂಕು ಹೆಚ್ಚಳದಿಂದ ಸರ್ಕಾರ ವಿಧಿಸಿದ್ದ ಲಾಕ್‌ಡೌನ್‌ ನಿಂದಾಗಿ ಶಾಲೆಗಳು ಮುಚ್ಚಿದ್ದು, ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಮಕ್ಕಳಿಗೆ ಲಭ್ಯವಾಗುತ್ತಿಲ್ಲ.

ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ತಲುಪಿಸುವ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯ್ತಿ ಮಾಡಿತ್ತು. ಆದರೆ ಜೂನ್‌ನಲ್ಲಿ ಸರ್ಕಾರದ ಆದೇಶವಾಗಿದ್ದು, ಬಿಸಿಯೂಟಕ್ಕೆ ಬೇಕಾದ ಆಹಾರ ಪದಾರ್ಥಗಳ ದಾಸ್ತಾನನ್ನು ಶಾಲೆಗಳು ಪಡೆದುಕೊಂಡಿಲ್ಲ. ಲಾಕ್‌ಡೌನ್‌ ಕಾರಣದಿಂದಸರ್ಕಾರವೇ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಪಡಿತರ ವ್ಯವಸ್ಥೆಯ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಸರ್ಕಾರಿ ಶಾಲೆಗಳ ಮೂಲಕವೂ ಮತ್ತೆ ಅದೇ ಕುಟುಂಬಗಳಿಗೆ ಆಹಾರ ಪದಾರ್ಥಗಳು ವಿತರಣೆಯಾಗುತ್ತವೆ ಎಂಬ ಕಾರಣಕ್ಕೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಯನ್ನು ತತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆಹಾರ ಪದಾರ್ಥಗಳು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳು ಆರಂಭವಾದ ತಕ್ಷಣದಲ್ಲೇ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಆರಂಭಿಸುವಂತೆ ಕರ್ನಾಟಕ ಸರ್ಕಾರದ ವಿತ್ತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ಬೇಸಿಗೆ ರಜೆಯ 57 ದಿನಗಳ ಪಡಿತರ ಅಕ್ಕಿ ಮತ್ತು ಬೇಳೆಯನ್ನು (ಏಪ್ರಿಲ್‌ ಮತ್ತು ಮೇ ತಿಂಗಳು) ಮಕ್ಕಳಿಗೆ ವಿತರಿಸಲಾಗಿದೆ. ಕೋವಿಡ್‌ ರಜೆಯ (ಜೂನ್‌ ತಿಂಗಳಿಂದ ನಂತರ) ಪಡಿತರವನ್ನು ವಿತರಿಸಬಾರದು ಎಂದು ಸರ್ಕಾರ ಆದೇಶಿಸಿದ್ದರಿಂದ ಅಕ್ಕಿ ಮತ್ತು ಬೇಳೆಯನ್ನು ಶಾಲೆಗಳು ಆಹಾರ ಇಲಾಖೆಯ ಗೋದಾಮುಗಳಿಂದ ಪಡೆದುಕೊಂಡಿಯೇ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 76,752 ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ದೂರೆಯಬೇಕಿದೆ.

ಹಾಲಿನ ಪುಡಿ ಖರೀದಿ ಸ್ಥಗೀತ: ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಜೊತೆಗೆ ಕ್ಷೀರಭಾಗ್ಯ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ. ಹೀಗಾಗಿ ಹಾಲು ಒಕ್ಕೂಟಗಳಿಂದ ಹಾಲಿನ ಪುಡಿ ಖರೀದಿಯೂ ನಿಂತಿದೆ. ಆದರೆ ಕೆಲವು ಸರ್ಕಾರಿ ಶಾಲೆಗಳಲ್ಲಿ ಹಾಲಿನ ಪುಡಿ ದಾಸ್ತಾನು ಇದೆ. ಇದನ್ನು ಸಂರಕ್ಷಿಸಿ ಇಡಲಾಗಿದೆ. ಕ್ಷೀರಭಾಗ್ಯ ಯೋಜನೆಗೂ ತಡೆಯಾಗಿರುವುದರಿಂದ ಹಾಲಿನ ಒಕ್ಕೂಟಗಳಲ್ಲಿ ಟನ್‌ಗಟ್ಟಲೆ ಹಾಲಿನ ಪುಡಿ ಶೇಖರಣೆಯಾ ವಾಲಿ ಗಿದೆ ಎಂದು ಬಮೂಲ್‌ನ ಸದಸ್ಯರು ತಿಳಿಸಿದ್ದಾರೆ.

2020-21ನೇ ಸಾಲಿನ ಜೂನ್‌, ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಮಧ್ಯಾಹ್ನದ ಉಪಾಹಾರ ಯೋಜನೆ ಮತ್ತು ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ಆಹಾರ ಪದಾರ್ಥಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸರ್ಕಾರದ ಆದೇಶವಾಗಿರುವುದರಿಂದ ಅಕ್ಕಿ, ಬೇಳೆ ಮುಂತಾದವುಗಳನ್ನು ಆಹಾರ ಇಲಾಖೆಯ ಗೋದಾಮುಗಳಿಂದಲೇ ಶಾಲೆಗಳು ಪಡೆದುಕೊಂಡಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಆಹಾರ ಪದಾರ್ಥಗಳ ದಾಸ್ತಾನು ಇಲ್ಲ. ನಟರಾಜ್‌, ಶಿಕ್ಷಣ ಅಧಿಕಾರಿ,  ಅಕ್ಷರ ದಾಸೋಹ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.