ನಗರದ ಮಿನಿ ವಿಧಾನಸೌಧ ಇಂದಿನಿಂದ ಕಾರ್ಯಾರಂಭ
Team Udayavani, May 20, 2019, 3:49 PM IST
ಕನಕಪುರ: ನಗರದ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧದಲ್ಲಿ ಭಾನುವಾರ ಕಾರ್ಯಾರಂಭ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಿನಿ ವಿಧಾನಸೌಧ ಕಟ್ಟಡವನ್ನುಉದ್ಘಾಟನೆ ಮಾಡಲಾಗಿತ್ತು. ಕಟ್ಟಡ ನಿರ್ಮಾಣ ವಾಗಿ ಬರೋಬ್ಬರಿ ಒಂದು ವರ್ಷ 5 ತಿಂಗಳು ಬಳಿಕ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ. ಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನಾ ಮಿನಿವಿಧಾನ ಸೌಧವನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಮಗಾರಿ ಅಪೂರ್ಣಗೊಂಡಿದ್ದರೂ ಉದ್ಘಾಟನೆ ಮಾಡಿದ್ದರು. ಉದ್ಘಾಟನೆ ನಾಮಫಲಕದಲ್ಲಿ ಹೆಸರು ಬರಬೇಕೆಂಬ ಉದ್ದೇಶ ವನ್ನಿಟ್ಟುಕೊಂಡು ಕಾಮಗಾರಿ ಅಪೂರ್ಣಗೊಂಡಿದ್ದರೂ ಉದ್ಘಾಟನೆಮಾಡಾಯಿತು ಎಂಬ ಮಾತುಗಳು ಕೇಳಿದವು.
ವಿಶೇಷವೆಂದರೆ ಕಟ್ಟಡದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ತಳಮಹಡಿಯಲ್ಲಿ ತಾಲೂಕು ಕಚೇರಿ, ಉಪ ಖಜಾನೆ, ಸರ್ವೇ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ ಇರಲಿವೆ. ಮೊದಲನೆ ಮಹಡಿಯಲ್ಲಿ ತಾಲೂಕು ಪಂಚಾಯ್ತಿ ಸೇರಿದಂತೆ ಇನ್ನಿತರೆ ಕಚೇರಿಗಳು ಒಂದೇ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ. ಸೋಮವಾರ ದಿಂದಲೇ ಮಿನಿವಿಧಾನಸೌಧದಲ್ಲಿ ಕಾರ್ಯರಂಭ ಮಾಡುವ ಇಂಗಿತವನ್ನು ತಹಸೀಲ್ದಾರ್ ಕುನಾಲ್ ವ್ಯಕ್ತಪಡಿಸಿದ್ದಾರೆ.ಭಾನುವಾರ ನಡೆದ ಪೂಜೆ ಮತ್ತು ಹೋಮಹವನದ ಮೂಲಕ ಕಚೇರಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣೆ ಅಧಿಕಾರಿ ಶಿವ ರಾಮು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.