ಮೂವರು ಕಾರ್ಮಿಕರ ಸ್ಥಿತಿ ಗಂಭೀರ


Team Udayavani, May 9, 2019, 4:23 PM IST

ram-2

ಕನಕಪುರ: ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಾಟ ನಡೆಸಿದ್ದಾರೆ.

ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶದಲ್ಲಿರುವ ಮಂಡ್ಯ ಜಿಲ್ಲೆಯ ಕೊಪ್ಪ ಗ್ರಾಮದ ಮಾಸ್ತೀಗೌಡ ಎಂಬುವರಿಗೆ ಸೇರಿದ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದ ರಾಜೇಶ್‌, ಶಿಲ್ಪ ಮತ್ತು ಕುಮಾರ್‌ ಅಗ್ನಿ ಅವಘಡದಲ್ಲಿ ಸಿಲುಕಿದ ದುರ್ದೈವಿಗಳಾಗಿದ್ದಾರೆ. ಈ ಮೂವರು ಬುಧವಾರ ಕೆಲಸ ಆರಂಬಿಸುತ್ತಿದ್ದಂತೆ ಈ ಅವಘಡ ನಡೆದಿದೆ ಎನ್ನಲಾಗಿದ್ದು, ಮತ್ತೂಬ್ಬ ಆಪರೇಟರ್‌ ಗಾಯಗೊಂಡವರಲ್ಲಿ ಇದ್ದಾರೆ ಎನ್ನಲಾಗಿದೆ. ಸುದ್ಧಿ ತಿಳಿದ ತಕ್ಷಣ ಕಾರ್ಖಾನೆ ಮಾಲಿಕರೇ ಮೂವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಅವಘಡಕ್ಕೆ ಕಾರಣ: ಕೈಗಾರಿಕಾ ಪ್ರದೇಶದಲ್ಲಿ ಚಿಕ್ಕದಾಗಿ ನಿರ್ಮಿಸಿರುವ ಕೊಠಡಿಯಲ್ಲಿ ಸೋಡಿಯಂ ಮೆಟಲ್ಗಳನ್ನು ಕಟ್ ಮಾಡುವ ವೇಳೆ, ಸೋಡಿಯಂ ಮೇಲೆ ನೀರು ಬಿದ್ದು ಬೆಂಕಿ ಹೊತ್ತಿಕೊಂಡಿರುಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ 2 ಪಾಳಿಯಲ್ಲಿ ಮೂವರು ಕೆಲಸ ಮಾಡುತ್ತಾರೆ. ಒಬ್ಬರು ಆಪರೇಟರ್‌, ಹೌಸ್‌ಕೀಪರ್‌ ಮತ್ತು ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಾರೆ. ಬುಧವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಆಪರೇಟರ್‌ ರಾಜೇಶ್‌ ಸೋಡಿಯಂ ಮೆಟಲ್ ಕತ್ತರಿಸುವಾಗ ಬೆವರಿನ ಹನಿ ಸೋಡಿಯಂ ಮೆಟಲ್ ಮೇಲೆ ಬಿದ್ದು ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮಾಹಿತಿ ತಿಳಿದ ತಕ್ಷಣ ಹಾರೋಹಳ್ಳಿ ಎಸ್‌ಐ ಧರ್ಮೇಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಂಭೀರವಾಗಿ ಗಾಯಗೊಂಡಿರುವ ಮೂವರಿಗೂ ಮಾಲಿಕರೇ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರಿಂದ ಅಥವಾ ಕಾರ್ಖಾನೆ ಮಾಲಿಕರಿಂದ ದೂರು ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಧರ್ಮೇಗೌಡ ಪ್ರತಿಕ್ರಿಯಿಸಿದ್ದಾರೆ.

ನಿರ್ಲಕ್ಷ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಾರ್ಖಾನೆಗಳು ತಲೆ ಎತ್ತುತ್ತಿವೆ. ಆದರೆ ಯಾವ ಕಾರ್ಖಾನೆಯಲ್ಲೂ ಕೈಗಾರಿಕಾ ನೀತಿ ನಿಯಮಗಳನ್ನು ಪಾಲಿಸುತ್ತಿಲ್ಲ .ಕಾರ್ಮಿಕ ಇಲಾಖೆ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಕೆಲಸ ಅರಸಿ ಬರುವ ಕಾರ್ಮಿಕರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ಉದ್ಯಮಿಗಳು ಕಾರ್ಮಿಕರ ಜೀವಕ್ಕೆ ರಕ್ಷಣೆ ಒದಗಿಸದೆ ನಿರ್ಲಕ್ಷ ಮನೋಬಾವ ಹೊಂದಿದ್ದಾರೆ ಎಂಬ ಮಾತುಗಳು ಕೇಳತ್ತಿವೆ.

ಜೀವಕ್ಕೆ ಬೆಲೆಯಿಲ್ಲ-ಸಾವಿಗೆ ಬೆಲೆ: ಈ ಪ್ರದೇಶದಲ್ಲಿ ವರ್ಷದಲ್ಲಿ ಇಂತಹ ಹಲವು ಅವಘಡಗಳು ಸಂಭವಿಸುತ್ತವೆ. ಆದರೂ ಕಾರ್ಮಿಕರ ಸುರಕ್ಷತೆಗೆ ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿಲ್ಲ. ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ರಕ್ಷಣೆಯಿಲ್ಲದಿದ್ದರೂ ಕಾರ್ಮಿಕರು ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿದ್ದಾರೆ. ಕೊನೆಗೆ ಘಟನೆಯಲ್ಲಿ ಸತ್ತವರ ಜೀವಕ್ಕೆ ಬೆಲೆ ಕಟ್ಟಿ ವ್ಯಾಪಾರ ಮುಗಿಸುತ್ತಾರೆ.

ಮಾಲಿಕರೆಲ್ಲಾ ಒಂದು: ಹಾರೋಹಳ್ಳಿ ಕೈಗಾರಿಕಾ ಪ್ರದೇಶವು ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ 1ರಿಂದ 4 ಹಂತಗಳಲ್ಲಿ ವಿಸ್ತರಿಸಿಕೊಂಡಿದೆ. ಇಲ್ಲಿಗೆ ಬರುವ ಉದ್ಯಮಿಗಳು ಕಾರ್ಖಾನೆ ಪ್ರಾರಂಭಿಸುತ್ತಿದ್ದಂತೆ ಕಾರ್ಖಾನೆಗಳ ಒಕ್ಕೂಟ ಮಾಡಿಕೊಂಡಿದ್ದು ಅದರಲ್ಲಿ ಸದಸ್ಯರಾಗುತ್ತಾರೆ. ಕಾರ್ಖಾನೆಯಲ್ಲಿ ಯಾವುದೆ ಅವಘಡ ಸಂಭವಿಸಿದರೂ ಎಲ್ಲಾ ಮಾಲಿಕರು ಒಂದಾಗಿ ಇಂತಹ ವಿಚಾರಗಳು ಹೊರ ಹೋಗದಂತೆ ನೋಡಿಕೊಳ್ಳುತ್ತಾರೆ. ಸತ್ತವರ ಕುಟುಂಬದಿಂದಲೂ ದೂರು ದಾಖಲಾಗದಂತೆ ಎಚ್ಚರ ವಹಿಸಿ ಮಾತುಕತೆಯಲ್ಲೇ ಮುಗಿಸುತ್ತಾರೆ.

ಆಟಕ್ಕುಂಟು ಲೆಕ್ಕಕ್ಕಿಲ್ಲ: ಕೈಗಾರಿಕಾ ಪ್ರದೇಶದಲ್ಲಿ ನಡೆಸುವ ಪ್ರತಿಯೊಂದು ಕಾರ್ಖಾನೆಯು ಪರಿಸರ ಇಲಾಖೆ, ಕಾರ್ಮಿಕ ಇಲಾಖೆ, ಇಂಡಸ್ಟ್ರೀಸ್‌ ಅಂಡ್‌ ಬಾಯ್ಲರ್‌ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ. ಕಾರ್ಖಾನೆಗಳಲ್ಲಿ ಯಾವ ಕೆಲಸ ನಡೆಯುತ್ತಿದೆ, ಎಷ್ಟು ಕಾರ್ಮಿಕರಿದ್ದಾರೆ. ಏನು ಉತ್ಪಾದನೆ (ತಯಾರು) ಮಾಡುತ್ತಿದ್ದಾರೆ ಎಂಬ ಮಾಹಿತಿಗಳು ಈ ಇಲಾಖೆಗಳಿಗೆ ಇಲ್ಲವಾಗಿದೆ. ಅಲ್ಲದೆ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳುವ ಕುತೂಹಲವೂ ಇಲಾಖೆಗಳಿಗೆ ಇದ್ದಂತಿಲ್ಲ.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.