ಶಿಕ್ಷಣಕ್ಕೆ ಒತ್ತು ನೀಡುವುದೇ ಮುಖ್ಯ ಉದ್ದೇಶ
Team Udayavani, Jun 23, 2020, 6:32 AM IST
ರಾಮನಗರ: ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಕಾರ, ಶಾಲೆಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವುದು, ಬಡ ರೋಗಿಗಳಿಗೆ ಔಷಧೋಪಚಾರ, ಹೀಗೆ ವಿವಿಧ ಸಾಮಾಜಿಕ ಕಳಕಳಿ ಇರಿಸಿಕೊಂಡು ಇಂಜಿನಿಯರಿಂಗ್ ಪದವಿ ಪಡೆದ ಯುವಕರ ಗುಂಪೊಂದು ಇದೀಗ ಟ್ರಸ್ಟ್ ರಚಿಸಿಕೊಂಡು ಸಮಾಜ ಸೇವೆಗೆ ಮುಂದಾಗಿದೆ.
ಯುವಕರು ಸ್ಥಾಪಿಸಿರುವ ಕನ್ಜ್-ಉಲ್-ಉಮ್ಮಾ ಎಜುಕೇಷನಲ್ ಆಂಡ್ ಚಾರಿಟಬಲ್ ಟ್ರಸ್ಟ್ ಅನ್ನು ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಉದ್ಘಾಟಿಸಿ ದರು. ಈ ವೇಳೆ ಮಾತನಾಡಿ, ಟ್ರಸ್ಟ್‌ನ ಧ್ಯೇಯೋದ್ದೇಶ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಟ್ರಸ್ಟ್‌ನ ಚಟುವಟಿ ಕೆಗಳಿಗೆ ತಮ್ಮ ಸಹಕಾರ ಸದಾ ಇರಲಿದೆ. ಸರ್ಕಾರದ ವತಿಯಿಂದ ಸಹಕಾರಕ್ಕೂ ತಾವು ಟ್ರಸ್ಟ್ ಪದಾಧಿಕಾರಿಗಳ ಜೊತೆ ನಿಲ್ಲುವುದಾಗಿ ತಿಳಿಸಿದರು.
ಗೌಸಿಯಾ ಕಾಲೇಜಿನ ಪದವೀಧರರ ಸಂಘಟನೆ: ಟ್ರಸ್ಟ್ ಅಧ್ಯಕ್ಷ ಎಸ್.ಕೆ.ಮುಯಿನುದ್ದೀನ್ ಮಾತನಾಡಿ, ಗೌಸೀಯಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ಇಂಜಿನಿಯರ್‌ಗಳು ಸಂಘಟಿತರಾಗಿ ಸಮಾಜ ಸೇವೆ ಉದ್ದೇಶದಿಂದ ನೂತನ ಟ್ರಸ್ಟ್ ರಚಿಸಿಕೊಂಡಿರುವು ದಾಗಿ ತಿಳಿಸಿದರು. ಎಲ್ಲ ವರ್ಗಗಗಳ ಬಡವರಿಗೆ ಕೈಲಾದ ಸಹಾಯ ಮಾಡುವುದು ಟ್ರಸ್ಟ್‌ನ ಮೂಲ ಉದ್ದೇಶ ಎಂದರು. ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಉದ್ದೇಶವಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಹುಡುಕಿ ಪುನಃ ಶಾಲೆಗೆ ಸೇರಿಸುವುದು,
ಬಡ ವಿದ್ಯಾ ರ್ಥಿಗಳಿಗೆ ಶೈಕ್ಷಣಿಕವಾಗಿ ಸ್ಪಂದಿಸುವುದು, ಅಗತ್ಯವಿದ್ದವರಿಗೆ ವಿದ್ಯಾರ್ಥಿ ವೇತನ, ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಸಹಕಾರ ಇತ್ಯಾದಿ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಟ್ರಸ್ಟ್‌ನ ಕಾರ್ಯದರ್ಶಿ ಜುಲ್‌ಫೀಕರ್ ಅಹಮದ್ ಖಾನ್ ಸ್ವಾಗತಿಸಿ ವಂದಿಸಿದರು. ಪ್ರಮುಖರಾದ ಮೊಹಮ ದ್ ಖಲೀಲ್, ಮೊಹಸಿನ್ ಆಲಿ ಖಾನ್, ಮುಯಿ ನುಲ್ಲಾ ಖಾನ್, ಸೈಯದ್ ಜಮೀರ್, ಶೋಯಬ್ ಪಾಷ, ಮುದಸ್ಸಿರ್, ತೌಖೀರ್, ಮೆಹರಾಜ್ ಮುಂತಾ ದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.