ರಾಗಿ ಕೇಂದ್ರದಲ್ಲಿ ಮೂಲ ಸೌಲಭ್ಯವೇ ಮರೀಚಿಕೆ


Team Udayavani, Mar 16, 2019, 7:36 AM IST

raagikendra.jpg

ಕುದೂರು: ರಾಗಿ ಖರೀದಿ ಕೇಂದ್ರ ನಿರ್ಜನ ಪ್ರದೇಶದಲ್ಲಿ ಪ್ರಾರಂಭಿಸಿದ್ದು, ಮೂಲಕ ಸೌಲಭ್ಯವೇ ಮರೀಚಿಕೆಯಾಗಿದೆ. ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಗ್ರಾಮ, ಹೋಟೆಲ್‌ ಇಲ್ಲದೆ ರೈತರು ಊಟ, ತಿಂಡಿಗಾಗಿ ಪರದಾಡ ನಡೆಸುತ್ತಿದ್ದಾರೆ. ಇಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲದೇ ಬಯಲು ಪ್ರದೇಶದಲ್ಲಿ ರೈತರು ತಮ್ಮ ನಿತ್ಯ ಕರ್ಮಗಳನ್ನು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಮೂಟೆಗಳನ್ನು ಜೋಡಿಸಲು ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ರೈತ ವಲಯದಲ್ಲಿ ಕೇಳಿ ಬರುತ್ತಿದೆ.

ರಾಗಿ ಖರೀದಿಸುವ ಪ್ರಕ್ರಿಯೆ ಆರಂಭ: ಸರ್ಕಾರ ರಾಗಿಗೆ ಬೆಂಬಲ ಬೆಲೆ ನೀಡಿ, ರೈತರಿಂದ ರಾಗಿಯನ್ನು ಖರೀದಿಸಲು ಎಲ್ಲಾ ತಾಲೂಕಿನಲ್ಲಿಯೂ ರಾಗಿ ಖರೀದಿ ಕೇಂದ್ರವನ್ನು ಪ್ರಾರಂಭಿಸಿದೆ. ಅದೇ ರೀತಿ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಗದ್ದುಗೆ ಮಠಕ್ಕೆ ತೆರಳುವ ರಸ್ತೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರದಿದೆ. ಫೆ.26ರಿಂದಲೂ ಇಲ್ಲಿ ರೈತರಿಂದ ರಾಗಿಯನ್ನು ಖರೀದಿಸುವ ಪ್ರಕ್ರಿಯೆ ಆರಂಭವಾಗಿರುವುದರಿಂದ ಪ್ರತಿದಿನ ನೂರಕ್ಕೂ ಹೆಚ್ಚು ರೈತರು ರಾಗಿಯನ್ನು ತರುತ್ತಿದ್ದಾರೆ. 

ರೈತರಿಂದ ಹಣ ವಸೂಲಿ: ರೈತರು ಕೇಂದ್ರಕ್ಕೆ 50 ಕೆ.ಜಿ. ಮೂಟೆಗಳಲ್ಲಿ ರಾಗಿಯನ್ನು ತರುತ್ತಿದ್ದು, ಮೂಟೆಯ ತೂಕವೂ ಸೇರಿ 51 ಕೆ.ಜಿ. ರಾಗಿಯನ್ನು ಪೂರೈಸಬೇಕಿದೆ. ಅದರೆ, ಖರೀದಿ ಕೇಂದ್ರದ ನೌಕರರು ಐವತ್ತೂಂದುವರೆ ಕೆ.ಜಿ. ರಾಗಿಯನ್ನು ತರಬೇಕು ಎಂದು ರೈತರಿಗೆ ಸೂಚಿಸಿರುವ ಕಾರಣ ಪ್ರತಿಯೊಬ್ಬ ರೈತರು ಚೀಲ ಸೇರಿ 51.500 ಕೆ.ಜಿ. ರಾಗಿಯನ್ನು ಕೇಂದ್ರಕ್ಕೆ ತರುತ್ತಿದ್ದಾರೆ. ರಾಗಿ ಖರೀದಿ ಕೇಂದ್ರಕ್ಕೆ ರಾಗಿಯ ಮೂಟೆಗಳನ್ನು ತರುವ ರೈತರು ತೂಕ ಮಾಡುವುದು ಸೇರಿದಂತೆ ಮೂಟೆಗಳನ್ನು ಜೋಡಿಸುವುದಕ್ಕೆ ಹಣವನ್ನು ಪಡೆಯುತ್ತಿರುವುದು ರೈತರಿಗೆ ಬಹಳಷ್ಟು ಹೊರೆಯಾಗುತ್ತಿದೆ.

ಕಾಯುವ ಪರಿಸ್ಥಿತಿ ನಿರ್ಮಾಣ: ರಾಗಿ ಖರೀದಿ ಕೇಂದ್ರಕ್ಕೆ ಪ್ರತಿ ದಿನ ನೂರಾರು ರೈತರು ತಮ್ಮ ವಾಹನಗಳಲ್ಲಿ ರಾಗಿಯನ್ನು ತರುತ್ತಿರುವುದರಿಂದ ಎಲ್ಲರಿಗೂ ಕ್ರಮ ಸಂಖ್ಯೆಯನ್ನು ನೀಡಲಾಗುತ್ತಿದೆ. ತಮ್ಮ ಸರದಿ ಬರುವವರೆಗೂ ರೈತರು ಒಂದೊಂದು ಬಾರಿ ಬೆಳಗ್ಗೆಯಿಂದ ರಾತ್ರಿಯವರೆಗೂ ಕಾಯುತ್ತಾ ಕೂರಬೇಕಿದೆ. ಕೆಲವು ರೈತರು ರಾತ್ರಿ ಸಮಯದಲ್ಲಿಯೇ ಕೇಂದ್ರಕ್ಕೆ ರಾಗಿಯನ್ನು ತರುತ್ತಾರೆ.

ಆಹಾರ, ಶೌಚಾಲಯಕ್ಕೆ ಸಮಸ್ಯೆ: ರಾಗಿ ಖರೀದಿ ಕೇಂದ್ರವನ್ನು ನಿರ್ಜನ ಪ್ರದೇಶದಲ್ಲಿ ಪ್ರಾರಂಭಿಸಿದ್ದು, ಇದರ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಗ್ರಾಮಗಳಾಗಲಿ, ಹೋಟೆಲ್‌ ಆಗಲಿ ಇಲ್ಲ. ಇದರಿಂದ ರೈತರಿಗೆ ಊಟ, ತಿಂಡಿಗೆ ಬಹಳಷ್ಟು ಸಮಸ್ಯೆಯಾಗಿದೆ. ಅಲ್ಲದೆ, ಇಲ್ಲಿ ಶೌಚಾಲಯ ವ್ಯವಸ್ಥೆಯೂ ಸಹ ಇಲ್ಲವಾಗಿದೆ. ಕೇಂದ್ರದಲ್ಲಿ ಮೂಲ ಸೌಲಭ್ಯವೇ ಇಲ್ಲದೇ ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಕಾಲವಾಗಿರುವುದರಿಂದ ಬಿಸಿಲಿನ ತಾಪಮಾನಕ್ಕೆ ರೈತರು ಬಳಲುವಂತಾಗಿದೆ.

ಪ್ರತಿದಿನ 70 ರೈತರು ರಾಗಿ ತರುವಂತೆ ಸೂಚನೆ: ತಾಲೂಕಿನ ಗದ್ದಿಗೆ ಮಠಕ್ಕೆ ತೆರಳುವ ರಸ್ತೆಯಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಪ್ರತಿದಿನ 70 ರೈತರು ರಾಗಿ ತರುವಂತೆ ಸೂಚಿಸಲಾಗಿದೆ. ಆದರೂ ಸಹ 100ಕ್ಕೂ ಹೆಚ್ಚು ರೈತರು ಬರುವುದರಿಂದ ಅವರಿಗೆ ಕ್ರಮ ಸಂಖ್ಯೆಯನ್ನು ನೀಡಲಾಗಿದೆ. ರೈತರಿಂದ ಪಹಣಿ, ಖಾತೆ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ,ರಾಗಿಯನ್ನು ಖರೀದಿಸಿ ಅದನ್ನು ಆನ್‌ಲೈನ್‌ನಲ್ಲಿ ನಮೂದಿಸಲಾಗುತ್ತಿದೆ.

ವಾಹನಗಳ ಜೊತೆಯಲ್ಲಿ ರಾಗಿ ಮೂಟೆಗಳನ್ನು ತೆಗೆದುಕೊಂಡು ಒಬ್ಬ ರೈತರು ಮಾತ್ರ ಬರುವುದರಿಂದ ಅವರು ಮೂಟೆಗಳನ್ನು ತೂಕ ಮಾಡಿಸಿ, ಜೋಡಿಸಿಡಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣದಿಂದ ಕೂಲಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದೇವೆ. ಇದರಿಂದ ಒಂದು ಮೂಟೆಗೆ ಇಂತಿಷ್ಟು ಎಂದು ಹಣವನ್ನು ಪಡೆಯಲಾಗುತ್ತಿದೆ ಎಂದು ಮಾಗಡಿ ಆಹಾರ ಇಲಾಖೆ ಅಧಿಕಾರಿ ಶ್ರೀಧರ್‌ ತಿಳಿಸಿದ್ದಾರೆ.

ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿಯೊಂದು ಮೂಟೆಯನ್ನು ಜೋಡಿಸಲು ಹಣ ಪಡೆಯುತ್ತಿದ್ದು, 500 ಗ್ರಾಂ ರಾಗಿ ಹೆಚ್ಚಾಗಿ ತರುವಂತೆ ತಿಳಿಸಿದ್ದಾರೆ. ಇಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಲ್ಲ. ರೈತರು ಊಟ, ತಿಂಡಿ, ಕಾಫಿ, ಟೀ ಕುಡಿಯಲು ಹಾಗೂ ಶೌಚಾಲಯಕ್ಕೆ ತೆರಳಲು ಪರದಾಡುವ ಸ್ಥಿತಿ ಇದೆ.
-ಹನುಮಂತ, ಹೊಸಹಳ್ಳಿ ರೈತ

ಪ್ರತಿದಿನ ನಿಗದಿಗಿಂತ ಹೆಚ್ಚಿನ ರೈತರು ಬರುತ್ತಿರುವುದರಿಂದ ತಮ್ಮ ಸರದಿಗಾಗಿ ಕಾಯುವ ಪರಿಸ್ಥಿತಿ ಇದೆ. ಎಷ್ಟೇ ರೈತರು ಬಂದರೂ ಸಹ ಅವರನ್ನು ಹಿಂದಕ್ಕೆ ಕಳುಹಿಸದೇ ಎಲ್ಲರಿಂದ ರಾಗಿಯನ್ನು ಖರೀದಿಸಲಾಗುತ್ತಿದೆ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸಂಗ್ರಹಣಾ ಕೇಂದ್ರದಲ್ಲಿಯೇ ರಾಗಿಯ ತೂಕ ಕಡಿಮೆಯಾಗುವುದರಿಂದ ಒಂದು ಮೂಟೆಗೆ 500 ಗ್ರಾಂ ಹೆಚ್ಚು ತರುವಂತೆ ರೈತರಲ್ಲಿ ಮನವಿ ಮಾಡಲಾಗಿದೆ. ಖರೀದಿ ಕೇಂದ್ರದಲ್ಲಿ ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ.
-ನಾಗರಾಜ್‌, ಖರೀದಿ ಕೇಂದ್ರದ ವ್ಯವಸ್ಥಾಪಕ

* ಕೆ.ಎಸ್‌.ಮಂಜುನಾಥ್‌ ಕುದೂರು

ಟಾಪ್ ನ್ಯೂಸ್

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.