ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತ


Team Udayavani, Aug 26, 2019, 3:33 PM IST

rn-tdy-1

ರಾಮನಗರದಲ್ಲಿ ನಡೆದ ಜೀತ ಕಾರ್ಮಿಕರು ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ, ನ್ಯಾಯಧೀಶರಾದ ಮರುಳ ಸಿದ್ದಾರಾಧ್ಯ, ಸಿದ್ದಲಿಂಗ ಪ್ರಭು ಉಪಸ್ಥಿತರಿದ್ದರು.

ರಾಮನಗರ: ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ ಕಳವಳ ವ್ಯಕ್ತಪಡಿಸಿದರು.

ಪ್ಯಾನಲ್ ವಕೀಲರು, ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗಾಗಿ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಇಂಟರ್‌ ನ್ಯಾಷನಲ್ ಜಸ್ಟೀಸ್‌ ಮಿಷನ್‌ (ಐ.ಜೆ.ಎಂ) ಮತ್ತು ಜಿಲ್ಲಾ ವಕೀಲರ ಸಂಘದಿಂದ ನಡೆದ ಜೀತ ಕಾರ್ಮಿಕರು ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಜೀತ ಕಾರ್ಮಿಕ ಪದ್ಧತಿಯ ಬಗ್ಗೆ ಸಮಾಜ ನಿರ್ಲಕ್ಷ್ಯ ಹೊಂದಿರುವುದರಿಂದಲೇ ಈ ಪದ್ಧತಿ ಇನ್ನೂ ಜೀವಂತ ವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾನೂನಿದ್ದರೂ ಅನಿಷ್ಟ ಪದ್ಧತಿ ಇದೆ: 1975-76ರಲ್ಲಿ ಜೀತ ಕಾರ್ಮಿಕ ಪದ್ಧತಿ ನಿಷೇಧ ಕಾನೂನು ಜಾರಿಯಾದ ನಂತರ ಈ ಅನಿಷ್ಟ ಪದ್ಧತಿಯಿಂದ ಸಮಾಜ ಮುಕ್ತಿಯಾಗಿದೆ ಎಂಬ ಭಾವನೆ ನಾಗರಿಕರಲ್ಲಿದೆ. ಆದರೆ, ಈ ಘೋರ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಹಲವು ಅಧ್ಯಯನಗಳು ತಿಳಿಸಿವೆ. ಸಂವಿಧಾನದ 123ನೇ ವಿಧಿಯಲ್ಲಿ ಬಲವಂತ ದುಡಿಮೆ ಮತ್ತು ಬಿಕ್ಷಾಟನೆಯನ್ನು ನಿಷೇಧಿಸಿದೆ. ಸಂವಿಧಾನದ ಆಶಯಗಳನ್ನು ಈಡೇರಿಸುವ ಉದ್ದೇಶದಿಂದಲೇ ಜೀತ ಕಾರ್ಮಿಕ ಪದ್ಧತಿಯನ್ನು ನಿಷೇಧಿಸಿ ಕಾನೂನು ಜಾರಿಯಾಗಿದೆ. ಕಾನೂನು ಜಾರಿಯಾಗಿ ಇಷ್ಟು ವರ್ಷಗಳು ಕಳೆದರು ಈ ಅನಿಷ್ಟ ಪದ್ಧತಿಯ ಘೋರ ಮುಖ ಇನ್ನು ಇದೆ ಎಂದರು.

ಅಧ್ಯಯನದಲ್ಲಿ ಭಯಾನಕ ಅಂಶ ಬಯಲು: ರಾಮನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಈ ಅನಿಷ್ಟ ಪದ್ಧತಿ ಇನ್ನು ಜೀವಂತವಾಗಿದೆ ಎಂದು ಐಜೆಎಂ ಅಧ್ಯಯನ ತಿಳಿಸಿದೆ. ಇದು ಕಳವಳಕಾರಿ ಅಂಶ. ಸಮಾಜದಲ್ಲಿ ಇನ್ನು ಶೇ.40ರಷ್ಟು ಮಂದಿ ಜೀತ ಪದ್ಧತಿಯಲ್ಲೇ ದುಡಿಯುತ್ತಿದ್ದಾರೆ. ಈ ಪೈಕಿ ಶೇ.92ರಷ್ಟು ಮಂದಿ ಜೀತ ಕಾರ್ಮಿಕರು ಪ.ಜಾತಿ ಮತ್ತು ಪ.ಪಂಗಡಗಳ ಸಮುದಾಯದವರಿದ್ದಾರೆ ಎಂಬ ಭಯಾನಕ ಅಂಶವನ್ನು ಅಧ್ಯಯನಗಳು ಬರಂಗ ಪಡಿಸಿವೆ. ಶೇ.44ರಷ್ಟು ಮಂದಿ ಹೊರರಾಜ್ಯಗಳ ಕಾರ್ಮಿಕರಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸಹಕಾರದಿಂದ ಈ ಪದ್ಧತಿ ನಿರ್ಮೂಲನೆ: ವಿಶೇಷವಾಗಿ ಇಟ್ಟಿಗೆ ಗೂಡು, ಕಲ್ಲುಗಣಿ, ಕೃಷಿ ಮತ್ತು ಮೆನೆಗೆಲಸ ದುಡಿಮೆಯಲ್ಲಿ ಈ ಪದ್ಧತಿ ಹೆಚ್ಚಾಗಿದೆ ಎನ್ನಲಾಗಿದೆ. ನಾಗರಿಕರ ಸಹಕಾರವಿದ್ದರೆ ಈ ಪದ್ಧತಿಯನ್ನು ನಿರ್ಮೂಲನೆ ಮಾಡಬಹದು. ವಕೀಲರು ಮತ್ತು ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೂ ಈ ಪದ್ಧತಿಯ ಬಗ್ಗೆ ಸಂವೇಧನೆಯ ಒಂದು ಸಭೆ ಅಗತ್ಯವಿತ್ತು. ಅದು ಇಂದು ನೆರವೇರಿದೆ ಎಂದರು.

ಜೀತ ಪದ್ಧತಿ ಮುಖ ಬದಲು: ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಮಾತನಾಡಿ, ಜೀತ ಪದ್ಧತಿಯ ಮುಖಗಳು ಇಂದು ಬದಲಾಗಿದೆ. ಹೊಸ ರೂಪಗಳಲ್ಲಿ ಈ ಪದ್ಧತಿ ಇನ್ನು ಜೀವಂತವಾಗಿದೆ. ಇದನ್ನು ಪತ್ತೆ ಹಚ್ಚಿ ಅವರನ್ನು ಬಿಡುಗಡೆಗೊಳಿಸಬೇಕಾಗಿದೆ. ಈ ಪದ್ಧತಿಯ ನಿರ್ಮೂಲನೆಗೆ ಕಂದಾಯ ಇಲಾಖೆಯ ಹೊಣೆಯು ಇದ್ದು, ಇಲಾಖೆಯ ಅಧಿಕಾರಿಗಳಿಗೂ ಇಂತಹ ಸಂವೇಧನಾ ಕಾರ್ಯಗಾರದ ಅಗತ್ಯವಿದೆ ಎಂದು ಹೇಳಿದರು.

ಈ ವೇಳೆ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮರುಳ ಸಿದ್ದಾರಾಧ್ಯ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಲ್ಕಣಿ, 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ, ಐಜೆಎಂ ನಿರ್ದೇಶಕ ಇಂದ್ರಜಿತ್‌ ಪವಾರ್‌, ಪ್ರಧಾನ ಹಿರಿಯ ಸಿಲ್ ನ್ಯಾಯಾಧೀಶ ಎನ್‌.ಎಸ್‌.ಕುಲಕರ್ಣಿ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಹಾಜರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ (ಬೆಂಗಳೂರು) ಎಸ್‌.ಆರ್‌.ಸೋಮ ಶೇಖರ್‌ ಮತ್ತು ಐಜೆಎಂನ ಅಸೋಸಿಯೇಟ್ ಡೈರಕ್ಟರ್‌ ಲಿಯಂ ಕ್ರಿಷ್ಟೋಪರ್‌ ಭಾಗವಹಿಸಿದ್ದರು. ಅಪರ ಹಿರಿಯ ಸಿಲ್ ನ್ಯಾಯಾಧೀಶರಾದ ಅನುಪಮ ಲಕ್ಷ್ಮೀ ಸ್ವಾಗತಿಸಿದರು. ಪ್ರಧಾನ ಸಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ಮಿಲನ ವಂದಿಸಿದರು.

ಟಾಪ್ ನ್ಯೂಸ್

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.