ಸಮಸ್ಯೆ ನೀಗಿಸುವಂತೆ ಗ್ರಾಮಸ್ಥರ ಒತ್ತಾಯ
Team Udayavani, Nov 9, 2019, 4:53 PM IST
ಕನಕಪುರ: ತಾಲೂಕಿನ ಕೋಡಿಹಳ್ಳಿ ಗ್ರಾಪಂ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಚರ್ಚೆ ನಡೆಸಲಾಯಿತು.
ಸಿಬ್ಬಂದಿಯ ನಿರ್ಲಕ್ಷ್ಯ, ಹೂಳು ತುಂಬಿಕೊಂಡಿರುವ ಚರಂಡಿಗಳ ದುರಸ್ಥಿ, ಬೀದಿ ದೀಪಗಳು ಬಸವ ಪುರದಲ್ಲಿ 25 ಕುಟುಂಬಗಳು ವಾಸವಿದ್ದು, ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ನೀರಿನ ಸಮಸ್ಯೆ ಎದುರಾಗುವ ಮುನ್ನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಅನುದಾನ ವಿಳಂಬವಾಗುತ್ತಿದೆ ಇದರಿಂದ ಬೇರೆ ಕಾಮಗಾರಿ ಕೈಗೊಳ್ಳಲು ಸಮಸ್ಯೆ ಯಾಗುತ್ತಿದೆ. ಸಭೆಗಳು ಚರ್ಚೆಗೆ ಮಾತ್ರ ಸೀಮಿತವಾಗದೆ ಕಾರ್ಯಗತ ವಾಗಬೇಕು ಎಂದು ಸದಸ್ಯರು ಅಧಿಕಾರಿ ಗಳನ್ನು ಒತ್ತಾಯಿಸಿದರು. ಪಿಡಿಒ ಕೃಷ್ಣಮೂರ್ತಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆಯ ಕುಂದು ಕೊರತೆಗಳನ್ನು ಚರ್ಚೆ ಮಾಡಿ. ಸವಲತ್ತುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಬಗ್ಗೆ ಪರಾಮರ್ಶಿಸುವುದು ಕೆಡಿಪಿ ಸಭೆಯ ಉದ್ದೇಶ. ನೀರು ಗಂಟಿಗಳ ನೇಮಕದ ಬಗ್ಗೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಯ ಗಮನಕ್ಕೆ ತರಲಾಗಿದ್ದು, ಡಿ.1ರಿಂದ ಕಾಯಂ ನೀರು ಗಂಟಿಯನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಸಿಕ್ಕಿದೆ. ಎಂದರು.
ಚರಂಡಿ ಹೂಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು. ಸಂಸದರು ನರೇಗಾದಲ್ಲಿ ಬರುವ ಅನುದಾನ ಮತ್ತು ಗ್ರಾಪಂ ಅನುದಾನದಿಂದ ಹಳೆ ಬಸ್ ನಿಲ್ದಾಣ ತೆರವುಗೊಳಿಸಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಲೋಕೇಶ್ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.