ಗ್ರಾಮೀಣರು ನರೇಗಾ ಯೋಜನೆ ಬಳಸಿಕೊಳ್ಳಿ
ನರೇಗಾ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಳ್ಳಲು ಅವಕಾಶ: ಚಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ
Team Udayavani, Jul 6, 2019, 2:54 PM IST
ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಪಂನಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಜಿಲ್ಲಾ ಸಂಯೋಜಕ ಶ್ರೀನಿವಾಸಮೂರ್ತಿ ಮಾತನಾಡಿದರು.
ಮಾಗಡಿ: ನರೇಗಾ ಯೋಜನೆಯನ್ನು ಗ್ರಾಮೀಣ ಜನತೆ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಹಳ್ಳಿಗಳ ಚಿತ್ರಣವೇ ಒದಲಾಗುತ್ತದೆ ಎಂದು ಚಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ ಬಿ.ಅಶೋಕ್ ತಿಳಿಸಿದರು.
ತಾಲೂಕಿನ ಚಾಚೇನಹಟ್ಟಿ ಗ್ರಾಪಂನಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿ, ನರೇಗಾ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ದನ, ಕುರಿ, ಮೇಕೆ, ಹಂದಿ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಬಹುದು. ನರೇಗಾ ಯೋಜನೆಯಡಿ ಉದ್ಯೋಗಕ್ಕೆ ಕಡ್ಡಾಯವಾಗಿ ಜಾಬ್ ಕಾರ್ಡ್ ಹೊಂದಿರಬೇಕು. ತಮಗೆ ಕೂಲಿ ಕೆಲಸಬೇಕೆಂದು ಗ್ರಾಪಂಗೆ ಅರ್ಜಿ ಸಲ್ಲಿಸಿದರೆ 15 ದಿನದೊಳಗಾಗಿ ತಮಗೆ ನರೇಗಾ ಯೋಜನೆಯಡಿ ಕೂಲಿ ಕೊಡಲು ಪಂಚಾಯ್ತಿ ಸಿದ್ಧವಿದೆ ಎಂದರು.
ಜನರಿಗೆ ಸೌಲಭ್ಯದ ಮಾಹಿತಿ ನೀಡಿ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್ ಮಾತನಾಡಿ, ಗ್ರಾಮಸಭೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಿಯಿಂದ ಜನರ ಸಮಸ್ಯೆ ಬಗೆಹರಿಯುತ್ತಿಲ್ಲ. ಮುಂದಿನ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಜನರಿಗೆ ಸರ್ಕಾರಿ ಸೌಲಭ್ಯಗಳ ಸಂಪೂರ್ಣ ಮಾಹಿತಿ ನೀಡಬೇಕಿದೆ. ಜಲಮೃತ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ನರೇಗಾ ದುರ್ಬಳಕೆ ಬೇಡ: ನರೇಗಾವನ್ನು ದುರ್ಬಳಕೆ ಮಾಡಿಕೊಂಡರೆ ತಪ್ಪಿಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ. ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒ ಅವರು ಪ್ರಮುಖರಾಗಿರುತ್ತಾರೆ. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳಬೇಡಿ. ಜಿಲ್ಲೆಯ ಇತಿಹಾಸದಲ್ಲೇ ಅಜ್ಜನಹಳ್ಳಿ, ಹುಳ್ಳೇನಹಳ್ಳಿ, ಬಿಸ್ಕೂರು ಗ್ರಾಪಂ ನರೇಗಾ ದುರ್ಬಳಕೆ ಮಾಡಿಕೊಡಿದೆ. ಗ್ರಾಪಂ ಅಧಿಕಾರಿಗಳು, ಅಧ್ಯಕ್ಷರು ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಅಕ್ಟೋಬರ್‌ನಿಂದ ಮಾರ್ಚ್‌ವರೆವಿಗೂ ನಾಲ್ಕು ಹಂತದಲ್ಲಿ ಲೆಕ್ಕಪರಿಶೋಧನೆ ನಡೆಯುತ್ತದೆ. 6 ತಿಂಗಳಲ್ಲಿ ಗ್ರಾಪಂ ಅಧಿಕಾರಿಗಳು ಗ್ರಾಮಾಭಿವೃದ್ಧಿ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ಪಟ್ಟಿ ಮಾಡಿ ಅನುಮೋದನೆಗೆ ಸಭೆಗೆ ಇಡಬೇಕಿರುತ್ತದೆ. ಸಾಮಾಜಿಕ ಲೆಕ್ಕ ಪರಿಶೋಧನೆ ಸಾರ್ವಜನಿಕ ಸಮ್ಮುಖದಲ್ಲೇ ನಡೆಯುತ್ತದೆ. ಆದ್ದರಿಂದ ಗ್ರಾಮೀಣ ಜನರು ಕಡ್ಡಾಯವಾಗಿ ಸಭೆಗೆ ಹಾಜರಿದ್ದು, ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಲು ಅವಕಾಶವಿದೆ ಎಂದರು.
ತಾಲೂಕು ಸಾಮಾಜಿಕ ಲೆಕ್ಕಪರಿಶೋಧನಾ ಸಂಯೋಜಕ ವಿ.ನಾಗರಾಜು ಮಾತನಾಡಿದರು. ಮಾರ್ಗದರ್ಶಿ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಎಇಇ ರಾಮಣ್ಣ, ಗ್ರಾಪಂ ಪಿಡಿಒ ಕಾಂತರಾಜು, ಉಪಾಧ್ಯಕ್ಷ ಮರಿಯಪ್ಪ, ಸದಸ್ಯರಾದ ಮುನಿರತ್ನಮ್ಮ ಗಣೇಶ್, ರಂಗನರಸಿಂಹಯ್ಯ, ಜಯಮ್ಮ ಕೆಂಚಪ್ಪ, ನಾರಾಯಣ, ಮಂಜುನಾಥ್, ರಂಗಸ್ವಾಮಿ, ತಿಮ್ಮಕ್ಕ, ಯೋಗೇಶ್, ಪಾರ್ವತಿಬಾಯಿ, ಯಶೋಧ, ಭಾನುಮತಿ ಪ್ರಕಾಶ್, ದೈತಪ್ಪ, ಮಂಜುಳ ನಾಗರಾಜು, ಲಕ್ಕಿಬಾಯಿ, ಅಶ್ವಿನಿಬಾಯಿ, ಕಾರ್ಯದರ್ಶಿ ಪಿ.ರಾಮಚಂದ್ರಯ್ಯ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.