ಟಿಪ್ಪು ಜಯಂತಿ ರದ್ದತಿಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ

ಪಾರ್ಲಿಮೆಂಟ್ ಆವರಣದಲ್ಲಿ ಟಿಪ್ಪು ಪ್ರತಿಮೆಗೆ ಒತ್ತಾಯ,ತನ್ನ ನಿರ್ಧಾರವನ್ನು ಸರ್ಕಾರ ತಕ್ಷಣ ವಾಪಸ್ಸು ಪಡೆಯಲಿ

Team Udayavani, Aug 3, 2019, 2:21 PM IST

rn-tdy-1

ಟಿಪ್ಪು ಜಯಂತಿ ರದ್ದತಿ ಖಂಡಿಸಿ ರಾಮನಗರದಲ್ಲಿ ಪ್ರತಿಭಟನೆ ನಡೆಯಿತು.

ರಾಮನಗರ: ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನಗರದಲ್ಲಿ ಕಪ್ಪು ಬಾವುಟ ಪ್ರದರ್ಶಸಿ ಪ್ರತಿಭಟಿಸಿದರು.

ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ತಮ್ಮ ಸಂಘಟನೆಯ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ ಅವರು, ಟಿಪ್ಪು ಜಯಂತಿಯನ್ನು ರದು ್ದಮಾಡಿ ರಾಜ್ಯ ಸರ್ಕಾರ ಅಪಚಾರವೆಸಗಿದೆ. ಸರ್ಕಾರ ತನ್ನ ಸಣ್ಣ ತನ ತೋರದೆ ತಕ್ಷಣ ತನ್ನ ಆದೇಶವನ್ನು ಹಿಂಪಡೆಯಬೇಕು. ಸರ್ಕಾರದಿಂದಲೇ ಟಿಪ್ಪು ಜಯಂತಿಯನ್ನು ಆಚರಿಸಬೇಕು ಎಂದರು.

ಟಿಪ್ಪು ಸುಲ್ತಾನ ತನ್ನ ಆಳ್ವಿಕೆಯಲ್ಲಿ ಶ್ರೀರಂಗ ಪಟ್ಟಣದ ದೇವಾಲಯ, ಶೃಂಗೇರಿಯ ದೇಗುಲಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ರೇಷ್ಮೆ ಕೃಷಿಯನ್ನು ಪರಿಚಯಿಸಿದ್ದು ಸಹ ಆತನೆ. ಅಲ್ಲದೆ, ಆಂಗ್ಲರ ವಿರುದ್ಧ ಹೋರಾಡಿದ್ದ. ಇತಿಹಾಸದ ಪುಟಗಳಲ್ಲಿ ಇವೆಲ್ಲ ದಾಖಲಾಗಿದೆ. ದೇಶ ಕಂಡ ಅಪ್ರತಿಮ ವೀರನ ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಟ್ಟಿದ್ದು ತಪ್ಪು, ತಕ್ಷಣ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಪಾರ್ಲಿಮೆಂಟ್‌ನ ಆವರಣದಲ್ಲಿ ಟಿಪ್ಪು ಪ್ರತಿಮೆ ಸ್ಥಾಪಿಸಿ: ರಾಷ್ಟ್ರಪತಿಗಳಾಗಿದ್ದ ಅಬ್ದುಲ್ ಕಲಾಂ ಮತ್ತು ಹಾಲಿ ರಾಷ್ಟ್ರಪತಿ ಕೋವಿಂದ್‌ ಸಹ ಟಿಪ್ಪು ಸುಲ್ತಾನನ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ. ಟಿಪ್ಪು ಒಂದು ಸಮುದಾಯದ ವ್ಯಕ್ತಿಯಲ್ಲ, ಆತ ಇಡೀ ದೇಶದ ಆಸ್ತಿ. ಹೀಗಾಗಿ ಟಿಪ್ಪು ಸುಲ್ತಾನನ ಪ್ರತಿಮೆಯನ್ನು ದೆಹಲಿಯ ಪಾರ್ಲಿಮೆಂಟ್ ಭವನದ ಆವರಣದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಸ್ಮರಣೆಯಲ್ಲಿ ದೇವನಹಳ್ಳಿ ಅಭಿವೃದ್ಧಿ: ಟಿಪ್ಪು ಸುಲ್ತಾನ ಜನಿಸಿದ ದೇವನಹಳ್ಳಿಯಲ್ಲಿ ಆತನ ಸ್ಮರಣೆಯಲ್ಲಿ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಉತ್ತಮ ಪ್ರವಾಸಿ ತಾಣವನ್ನಾಗಿ ರೂಪಿಸಬೇಕು. ಬೆಂಗಳೂರಿನಿಂದ ದೇವನಹಳ್ಳಿ ರಸ್ತೆಗೆ ಟಿಪು ಹೆಸರು ನಾಮಕರಣ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ತಮಗಿಷ್ಟ ಬಂದಹಾಗೆ ಆಡಳಿತ: 5 ವರ್ಷ ಆಡಳಿತ ಕೊಡುವ ಮುಖ್ಯಮಂತ್ರಿಗಳು ಅಧಿಕಾರ ಹಿಡಿಯಬೇಕು. ಆದರೆ, ಈಗ 3 ತಿಂಗಳಿಗೊಮ್ಮೆ ಹೊಸ ಮುಖ್ಯಮಂತ್ರಿ ಬರುವಂತಾಗಿದೆ. ಪ್ರತಿಭಾರಿ ಮುಖ್ಯಮಂತ್ರಿಗಳು ಬದಲಾದರೆ ಹಿಂದಿನ ಸಿಎಂ ಆದೇಶಗಳನ್ನೆಲ್ಲ ಬದಲಾಯಿಸಲಾಗುತ್ತಿದೆ. ಟಿಪು ಜಯಂತಿ ವಿಚಾರದಲ್ಲಿ ಆಗಿದ್ದು ಇದೆ. ಪ್ರತಿ ಮುಖ್ಯಮಂತ್ರಿಯೂ ತನಗಿಷ್ಟ ಬಂದಹಾಗೆ ಆಡಳಿತ ನಡೆಸುತ್ತಿದ್ದಾರೆ. ಜಯಂತಿ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ಸು ಪಡೆದು ಆತನ ಜಯಂತಿಯನ್ನು ವೈಭವವಾಗಿ ಆಚರಿಸದಿದ್ದರೆ, ತಮ್ಮ ಸಂಘಟನೆಯವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಇದೇ ಭಾನುವಾರ ಟಿಪ್ಪು ಸುಲ್ತಾನನ ಸಮಾಧಿಯ ಬಳಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ತಮಿಳುನಾಡಿಗೆ ನೀರು ಕೊಡಬೇಡಿ: ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿದಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ ಹೀಗೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಪರದಾಟ ಇದೆ. 20 ದಿನಗಳಿಗೊಮ್ಮೆ ನೀರು ಪೂರೈಸುವ ಪರಿಸ್ಥಿತಿ ಇದೆ. ಕಾವೇರಿ ಕಣಿವೆಯಲ್ಲಿ ಕೆರೆ, ಕಟ್ಟೆಗಳು ಒಣಗಿವೆ. ಕೃಷಿಗೆ ನಿರಿಲ್ಲದಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು. ರಾಜ್ಯ ಸರ್ಕಾರ ಇಲ್ಲಿನ ಗಂಭೀರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ರಾಜ್ಯದಲ್ಲಿ ನಡೆದ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಲ ಸಚಿವರು ಸಹ ಮೇಕೆದಾಟು ಯೋಜನೆ ವಿಚಾರವನ್ನು ಮರೆತರು. ರಾಜ್ಯ ಸರ್ಕಾರದ ಗಮನ ಸೆಳೆಯಲು ತಾವು ಮುಂದಿನ ವಾರ ಮೇಕೆದಾಟಿನಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.