![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 28, 2019, 9:12 AM IST
ರಾಮನಗರದಲ್ಲಿ ಜಿಲ್ಲಾಧಿಕರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ರಾಮನಗರ: ಶೀಘ್ರದಲ್ಲೇ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಅದ್ಧೂರಿಯಾಗಿ ಕೆಂಪೇಗೌಡರ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ನಗರದ ಸರ್ಕಾರಿ ಕಚೇರಿಗಳ ಸಂಕಿರ್ಣದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕಿರ್ಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿರುವ ಕೆಂಪೇಗೌಡರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಸಚಿವರು ಹಾಗೂ ಇತರ ಮುಖಂಡರು ಭಾಗವಹಿಸುತ್ತಿರುವುದರಿಂದ ಕೆಂಪೇಗೌಡರ ಜಯಂತಿಯನ್ನು ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ, ವಿಜೃಂಭಣೆಯಿಂದ ಕೆಂಪೇಗೌಡರ ಉತ್ಸವ ನಡೆಸಲಾಗುವುದು ಎಂದರು.
ಕೆರೆ, ಕಟ್ಟೆ ಉಳಿಸುವ ಕಾರ್ಯವಾಗಲಿ: ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಾಣದ ಜೊತೆಗೆ ಜನಸಾಮಾನ್ಯರಿಗಾಗಿ ಕೆರೆ, ಕಟ್ಟೆಗಳನ್ನು ಕಟ್ಟಿದ್ದಾರೆ. ಮರ ಗಿಡಗಳನ್ನು ಬೆಳೆಸಿದ್ದಾರೆ. ವ್ಯವಸಾಯಕ್ಕೆ ಹೆಚ್ಚು ಒತ್ತನ್ನು ನೀಡಿದ್ದರು. ಅವರು ಕಟ್ಟಿದ ಕೆರೆ ಕಟ್ಟೆಗಳನ್ನು, ಕಟ್ಟಡಗಳನ್ನು ಉಳಿಸುವ ಕಾರ್ಯ ಆಗಬೇಕು. ವ್ಯವಸಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಎಂ.ಪಿ.ಮುಲ್ಲೈ ಮುಹಿಲನ್, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಮುಖರಾದ ಚಂದ್ರಯ್ಯ, ಎ.ಬಿ.ಚೇತನ್ ಕುಮಾರ್ ವåತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ರಾಜು ಸ್ವಾಗತಿಸಿ, ವಂದಿಸಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.