ಅರಣ್ಯಾಧಿಕಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
Team Udayavani, Jun 17, 2020, 6:48 AM IST
ರಾಮನಗರ: ಸರ್ಕಾರ ಗ್ರಾಮಸ್ಥರಿಗೆ ಕೊಟ್ಟಿರುವ ಜಮೀನು ಅರಣ್ಯ ಇಲಾಖೆಯವರು ತಮ್ಮ ಇಲಾಖೆಗೆ ಸೇರಿದ ಜಮೀನು ಎಂದು ಪದೇ ಪದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಬಿಡದಿ ಹೋಬಳಿಯ ಭೈರಾಗಿ ಕಾಲೋನಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಭೈರಾಗಿ ಕಾಲೋನಿಯಲ್ಲಿ ಕಾಲೋನಿ ಮತ್ತು ವಾಜರ ಹಳ್ಳಿ ಗ್ರಾಮಸ್ಥರು ಜಮಾಯಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ವಾಜರಹಳ್ಳಿ ಗ್ರಾಮದಲ್ಲಿ ಸರ್ವೇ ಸಂಖ್ಯೆ 28, 30, 31 ಹಾಗೂ 34 ಇಲ್ಲಿ ಸರ್ಕಾರ 50 ವರ್ಷಗಳ ಹಿಂದೆಯೇ ಅಂದರೆ, ತಮ್ಮ ತಾತ, ತಂದೆಯಂದಿರ ಕಾಲದಲ್ಲಿಯೇ ಭೂಮಿ ಮಂಜೂರು ಮಾಡಿದೆ.
ತಮ್ಮ ಪೂರ್ವಜರು 80 ವರ್ಷಗಳಿಂದ ಭೈರಾಗಿ ಕಾಲೋನಿ ಹಾಗೂ ವಾಜರಹಳ್ಳಿ ಯಲ್ಲಿ ವಾಸವಿದ್ದರು. ಆದರೆ ಅರಣ್ಯ ಇಲಾಖೆ ಈ ಭೂಮಿ ತಮ್ಮದು ಎಂದು ಹೇಳಿ ಎಲ್ಲರನ್ನು ಒಕ್ಕಲೆಬ್ಬಿ ಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು. ಕಾಲೋನಿಯಲ್ಲಿ ಬಹುತೇಕ ಪರಿಶಿಷ್ಟ ಜಾತಿ ಹಾಗೂ ಪಂಗಡದವರೇ ವಾಸಿಸುತ್ತಿದ್ದು, ಸಣ್ಣ, ಅತೀ ಸಣ್ಣ ರೈತ ರಾಗಿ ಭೂ ಹಿಡುವಳಿ ಮಾಡಿಕೊಂಡು ಜೀವನ ಸಾಗಿಸು ತ್ತಿದ್ದು, ತಮಗೆ ಈ ತುಂಡು ಭೂಮಿಯೇ ಜೀವನಾಧಾರವಾಗಿದೆ.
ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳ ಉಪಟಳಕ್ಕೆ ನೊಂದಿರುವುದಾಗಿ ತಿಳಿಸಿದರು. ಒಂದು ವೇಳೆ ಅರಣ್ಯ ಇಲಾಖೆ ತಮ್ಮನ್ನು ಒಕ್ಕಲೆಬ್ಬಿಸಿದರೆ ಇಲಿ ವಾಸಿಸುತ್ತಿರುವ ಎಲ್ಲಾ 450 ಕುಟುಂಬಗಳು ಅಕ್ಷರಶಃ ಬೀದಿಗೆ ಬೀಳುತ್ತವೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ತಕ್ಷಣ ಮಧ್ಯಪ್ರವೇಶಿಸಿ ತಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.