ನರೇಗಾದಿಂದ ಗ್ರಾಮಗಳ ಅಭಿವೃದ್ಧಿ
Team Udayavani, Sep 14, 2020, 1:07 PM IST
ಮಾಗಡಿ: ಈ ವರ್ಷ ಜಲಾನಯನ ಅಭಿವೃದ್ಧಿ ಯೋಜನೆಯಡಿ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಿಸುವ ಉದ್ದೇಶದಿಂದ ಕೆರೆ- ಕಟ್ಟೆ ಗಳಲ್ಲಿ ಹೂಳು ತೆಗೆಸುವ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ನರೇಗಾ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ನೋಡಲ್ ಅಧಿಕಾರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಎಚ್.ಗಂಗಾಧರಯ್ಯ ತಿಳಿಸಿದರು.
ತಾಲೂಕಿನ ತಿಪ್ಪಸಂದ್ರ ಹೋಬಳಿ ಚಿಕ್ಕಮುದಿಗೆರೆ ಗ್ರಾಪಂ ಕಚೇರಿಯಲ್ಲಿ 2020-2021ನೇ ಸಾಲಿನ ಮೊದಲನೇ ಸುತ್ತಿನ ಸಾಮಾಜಿಕ ಲೆಕ್ಕ ತಪಾಸಣಾ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಮಾತನಾಡಿದರು. ಈ ಯೋಜನೆಯಡಿ ರಸ್ತೆ, ಚರಂಡಿ, ಕೃಷಿ ಹೊಂಡ, ಕೈತೋಟ, ಬಚ್ಚಲು ಗುಂಡಿ ನಿರ್ಮಿಸಿಕೊಳ್ಳಲು ಸಹಾಯಧನ ಲಭಿಸುತ್ತದೆ. ಹೀಗಾಗಿ ಗ್ರಾಮಸ್ಥರೂ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು.
ಲೆಕ್ಕ ಪರಿಶೋಧಕ ನಾಗರಾಜು ಮಾತನಾಡಿ, ಕಳೆದ 6 ತಿಂಗಳ ಅವಧಿಯಲ್ಲಿ ನೆಡೆದಿರುವ ಕಾಮಗಾರಿಗಳ ಬಗ್ಗೆ ಆಕ್ಷೇ ಪಣೆಗಳಿದ್ದರೆ ಸಭೆಯಲ್ಲಿ ತಿಳಿಸಬಹುದು. ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 117 ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ. ಎಂ.ಬಿ ಬರೆಯದ ಕಾರಣದಿಂದ ಕಾಮಗಾರಿ ನಡೆದಿರುವ ಸ್ಥಳ ಪರಿಶೀಲನೆ ಮಾಡಿಲ್ಲ, ನರೇಗಾ ಯೋಜನೆಯಡಿ ಬದು ನಿರ್ಮಾಣ, ಜಮೀನು ಸಮತಟ್ಟು, ಅಣಬೆ ಬೇಸಾಯ, ಶೆಡ್ ನಿರ್ಮಿಸಿಕೊಳ್ಳಲು ಗ್ರಾಮಸ್ಥರಿಗೆ ಸಹಾಯಧನ ದೊರೆಯುತ್ತದೆ ಎಂದು ತಿಳಿಸಿದರು.
ಗ್ರಾಪಂ ಆಡಳಿತಾಧಿಕಾರಿ ಎನ್.ಬಿ.ನಾಗರಾಜು, ಮಾಜಿ ಅಧ್ಯಕ್ಷೆ ಪ್ರಮೀಳಾ, ಪಿಡಿಒ ಕೆ.ನರಸಿಂಹಯ್ಯ, ನೌಕರರಾದ ಲೋಕೇಶ್, ರಂಗಸ್ವಾಮಯ್ಯ, ಶ್ರೀನಿವಾಸ್, ಹನುಮಂತ ರಾಜು, ಅಂಜನಮೂರ್ತಿ, ಆರೋಗ್ಯ ಇಲಾಖೆ ಸಾವಿತ್ರಮ್ಮ, ಪಶು ಇಲಾಖೆ ಡಾ.ಮಂಜುನಾಥ್, ಯಶೋಧಾ, ಅಂಗನ ವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.