ನರೇಗಾ ಯೋಜನೆ ನಿಯಮ ಉಲ್ಲಂಘನೆ
Team Udayavani, May 25, 2020, 7:47 AM IST
ಕನಕಪುರ: ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹರಿಸಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನರೇಗಾ ನಿಯಮಗಳನ್ನು ಗಾಳಿಗೆ ತೂರಿದ್ದು, ಕೂಲಿಕಾರ್ಮಿಕರ ಉದ್ಯೋಗ ಕಸಿದಿದ್ದಾರೆ ಎಂದು ತೋಕಸಂದ್ರ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲೂಕಿನ ಮರಳವಾಡಿ ಹೋಬಳಿ ತೋಕಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೊಳಿಸಿಲ್ಲ.
ಸೂಕ್ತ ಚರಂಡಿಯಿಲ್ಲದೇ ಕೊಳಚೆ ನೀರು, ರಸ್ತೆಯಲ್ಲೇ ಹರಿಯುತ್ತಿದೆ. ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದರೂ ಗ್ರಾಪಂ ಅಧಿಕಾರಿಗಳು ತಮಗೆ ಲಾಭ ತರುವ ಕಾಮಗಾರಿಗಳನ್ನು ಯಂತ್ರಗಳ ಮೂಲಕ ಮಾಡಿಕೊಂಡು, ಕಾರ್ಮಿಕರ ಉದ್ಯೋಗ ಕಸಿದಿದ್ದಾರೆ ಎಂಬ ಆರೋಪಗಳು ಕೇಳಿವೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿಗೆಂದು ಕೇಂದ್ರ ಸರ್ಕಾರದಿಂದ ಗ್ರಾಪಂಗಳಗೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ.
ಚರಂಡಿ ನೀರು ರಸ್ತೆ ಕೆರೆಕುಂಟೆಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಗ್ರಾಮದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಬೇಕು ಎಂಬ ನಿಯಮವಿದೆ. ಆದರೆ ರಾಜಕಾರಣಿಗಳ ಬೆಂಬಲವಿರುವ ಪ್ರಭಾವಿ ಸದಸ್ಯರು ಗ್ರಾಮದಲ್ಲಿ ಮೂಲ ಸೌಕರ್ಯಗಳಂತಹ ಅಭಿವೃದ್ಧಿ ಕಾಮಗಾರಿ ಗಳಿಗೆ ಆದ್ಯತೆ ನೀಡುತ್ತಿಲ್ಲ. ಜತೆಗೆ ಕಾಮಗಾರಿಗಳನ್ನು ಯಂತ್ರಗಳಿಂದ ಮಾಡಿಸುತ್ತಿರುವುದಕ್ಕೆ, ಮೇಲಧಿಕಾರಿ ಗಳು ಬೆಂಬಲವಾಗಿದ್ದಾರೆ ಎಂಬ ಆರೋಪಗಳಿವೆ.
ಲಾಕ್‌ಡೌನ್‌ನಿಂದ ಸಂದಂರ್ಭದಲ್ಲೂ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ಸರ್ಕಾರದ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ. ಈ ಬಗ್ಗೆ ಇಒ ಮತ್ತು ಸಿಇಒ ಅವರಿಗೆ ದೂರು ನೀಡಲಾಗಿದ್ದು, ನಿಯಮ ಉಲ್ಲಂ ಸಿ ನಡೆಸಿರುವ ಕಾಮಗಾರಿ ತಡೆದು ಕ್ರಮಕೈಗೊಳ್ಳಬೇಕು ಎಂದು ರಾಜೇಶ್ ಸೆರಿದಂತೆ ಆನೇಕ ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.