ರಸ್ತೆ ದುರಸ್ತಿಗೆ ಆಗ್ರಹಿಸಿ ಪಾದಯಾತ್ರೆ ಮಾಡಲು ಸಿದ್ಧತೆ
Team Udayavani, Feb 6, 2022, 12:31 PM IST
ಕನಕಪುರ: ಮೇಕೆದಾಟು ಪಾದಯಾತ್ರೆ ಮಾದರಿಯಲ್ಲೇ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ರಸ್ತೆಗಾಗಿ ನಮ್ಮ ನಡಿಗೆ ಎಂಬ ಪಾದಯಾತ್ರೆ ನಡೆಸಲು ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ಸಿದ್ಧತೆ ನಡೆಸಿದೆ.
ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಅನೇಕ ಬಾರಿ ಮನವಿ ಒತ್ತಾಯ ಮಾಡಿದರು. ಎಚ್ಚೆತ್ತುಕೊಳ್ಳದ ಸರ್ಕಾರ ಮತ್ತು ಗುತ್ತಿಗೆದಾರರವಿರುದ್ಧ ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿಹೋರಾಟಕ್ಕೆ ಸಿದ್ಧತೆ ನಡೆಸಿದ್ದು ಈಗಾಗಲೇ ಪಾದ ಯಾತ್ರೆಗೆ ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಮೂಡಿಸಲು ಮುಂದಾಗಿದೆ.
40 ಕಿ.ಮೀ. ರಸ್ತೆ ಕಾಮಗಾರಿ ಸ್ಥಗಿತ: ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಾಗಿ ಐದಾರು ವರ್ಷ ಕಳೆದರೂ ಬೆಂಗಳೂರಿನ ನೈಸ್ ರೋಡ್ ಜಂಕ್ಷನ್‌ನಿಂದ ಕನಕಪುರದ ತುಗಣಿ ಗ್ರಾಮದವರೆಗೂ ಸುಮಾರು 40 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ಸ್ಥಗಿತಗೊಂಡು ರಸ್ತೆ ಸಂಪೂರ್ಣವಾಗಿ ಹಳ್ಳ ಗುಂಡಿಗಳು ಬಿದ್ದು ವಾಹನ ಸವಾರರು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ನರಕ ಸದೃಶ್ಯವಾಗಿ ಪರಿಣಮಿಸಿದೆ.
ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ: ಇದೇ ರಸ್ತೆಯಲ್ಲಿ ಓಡಾಡುವ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಶಾಸಕರು ಮತ್ತು ಸಂಸದರು ಹಾಗೂ ಜನಪ್ರತಿನಿಧಿಗಳು ರಾಜ್ಯದ ಅಭಿವೃದ್ಧಿ ಮತ್ತು ಇತರ ವಿಚಾರಗಳನ್ನು ಚರ್ಚೆ ಮಾಡುತ್ತಾರೆ. ಆದರೆ ಈ ರಸ್ತೆ ದುರಸ್ತಿ ಬಗ್ಗೆ ಮಾತ್ರ ತುಟಿ ಬಿಚ್ಚುತ್ತಿಲ್ಲ. ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸಿದರೂ ಜನರಿಗಾಗುತ್ತಿರುವ ಕಿರಿಕಿರಿ ಬಗ್ಗೆ ಮೌನವಹಿಸಿದ್ದಾರೆ.
ರಸ್ತೆಯಲ್ಲಿ ಪ್ರತಿ ನಿತ್ಯ ಸಂಚರಿಸುವ ನೂರಾರು ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಅನೇಕ ಜನರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ರಸ್ತೆ ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹತ್ತಾರು ಬಾರಿ ಹಲವು ಸಂಘ-ಸಂಸ್ಥೆಗಳು ಮನವಿ ಮಾಡಿದ್ದರು. ಇಲಾಖೆ ಅಧಿಕಾರಿಗಳು ಸ್ಥಳೀಯಜನರ ಜನಪ್ರತಿನಿಧಿಗಳು ರಸ್ತೆ ದುರಸ್ತಿ ಮಾಡುವ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
ಪಾದಯಾತ್ರೆ ನಡೆಸಲು ತೀರ್ಮಾನ: ಅಧಿಕಾರಿಗಳು ಕ್ಷೇತ್ರದ ಶಾಸಕರು ಸಂಸದರ ಗಮನ ಸೆಳೆದು ತುರ್ತಾಗಿ ರಸ್ತೆ ಅಭಿವೃದ್ಧಿ ಮಾಡಲು ಹಾರೋಹಳ್ಳಿಯಿಂದ ತಲಘಟ್ಟಪುರ ನೈಸ್ ರಸ್ತೆಯವರೆಗೂ ನಮ್ಮ ನಡಿಗೆ ರಸ್ತೆ ನಿರ್ಮಾಣಕ್ಕಾಗಿ ಎಂಬ ಧ್ಯೇಯ ವಾಕ್ಯದೊಂದಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ಜನಾಭಿಪ್ರಾಯ ಸಂಗ್ರಹಿಸಲು ಫೆಬ್ರವರಿ 13ರಂದುಭಾನುವಾರ ಹಾರೋಹಳ್ಳಿಯಲ್ಲಿ ವಿದ್ಯಾಸಂಸ್ಥೆ ಆವರಣದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಕನಕಪುರ ತಾಲೂಕಿನ ಎಲ್ಲ ನಾಗರಿಕ ಬಂಧುಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಆಗಮಿಸಿ ರಸ್ತೆ ದುರಸ್ತಿ ಹೋರಾಟದ ಪಾದಯಾತ್ರೆ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆಗಳು ಹಾಗೂ ಅಭಿಪ್ರಾಯಗಳನ್ನು ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಭಿತ್ತಿ ಪತ್ರದ ಮೂಲಕ ಜಾಗೃತಿ ಮೂಡಿಸಲು ಹಾರೋಹಳ್ಳಿ ನಾಗರಿಕ ಹಿತ ರಕ್ಷಣಾ ಸಮಿತಿ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.