ಕೊರೊನಾ ನಿಯಮ ಉಲ್ಲಂಸಿದ ವಾರಿಯರ್ಸ್
Team Udayavani, Jun 12, 2021, 4:55 PM IST
ರಾಮನಗರ: ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕಾದ ಆಶಾ, ಅಂನಗವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಜೆಡಿಎಸ್ ಕಾರ್ಯಕರ್ತರು ಸ್ವತಃ ತಾವೇ ವ್ಯಕ್ತಿಗತ ಅಂತರವನ್ನು ಕಾಪಾಡದೆ ನಿಯಮ ಉಲ್ಲಂ ಸಿದ ಘಟನೆ ನಗರದಲ್ಲಿ ನಡೆಯಿತು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ನಿಖೀಲ್ ಕುಮಾರಸ್ವಾಮಿ ಈ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಸುಮಾರು 1 ಸಾವಿರಕ್ಕೂ ಅಧಿಕ ಮಂದಿ ಫಲಾನುಭವಿಗಳು ಜಮಾಯಿಸಿದ್ದರು. ಆರಂಭದಲ್ಲಿ ಎಲ್ಲರೂ ನಿಯಮ ಬದ್ಧವಾಗಿ ಕುರ್ಚಿಗಳಲ್ಲಿ ಕುಳಿತಿದ್ದರು. ವೇದಿಕೆಯಿಂದ ಕೆಳಗಿಳಿದ ನಿಖೀಲ್ ಕುಮಾರಸ್ವಾಮಿ ಗೌರವ ಧನ ಮತ್ತು ವೇಪೋರೈಸರ್ ವಿತರಣೆಗೆ ಮುಂದಾದರು. ಈ ವೇಳೆ ಡಿ.ಗ್ರೂಪ್ ನೌಕರರು ಮತ್ತು ಕಾರ್ಯಕರ್ತರು ವ್ಯಕ್ತಿಗತ ಅಂತರ ಮರೆತು ಮುಗಿಬಿದ್ದರು.
ಇದನ್ನು ಗಮನಿಸಿದ ಪೊಲೀಸರು, ನಿಯಮ ಉಲ್ಲಂಘ ನೆಯಾಗುತ್ತಿದೆ ಎಂದು ನಿಖೀಲ್ ಗಮನ ಸೆಳೆ ದರು. ನಿಖೀಲ್ ಪುನಃ ವೇದಿಕೆ ಏರಿ ಒಬ್ಬೊಬ್ಬರೇ ಫಲಾನುಭವಿನ್ನು ಕರೆದು ಸೌಲಭ್ಯ ವಿತರಿಸಿ ದರು. ಆದರೆ, ಜೆಡಿಎಸ್ ಕಾರ್ಯಕರ್ತರು ನಿಯಮಗಳನ್ನು ಉಲ್ಲಂ ಸಿದರು. ನಿಖೀಲ್ ಅವರನ್ನು ಆಶಾ ಕಾರ್ಯಕರ್ತೆರು ಪೇಟ ತೊಡಿಸಿ ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಸೆಲ್ಪಿಗೆ ಕೆಲವರು ಮುಗಿಬಿದ್ದದ್ದ ಕಂಡು ಬಂತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.