Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?


Team Udayavani, Sep 23, 2023, 2:56 PM IST

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

ರಾಮನಗರ: ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್‌ ಇದೀಗ ಅಧಿಕೃತವಾಗಿ ಸದಸ್ಯತ್ವ ಪಡೆದಿದೆ. ಲೋಕಸಭಾ ಚುನಾವಣೆ ಕೇಂದ್ರವಾಗಿಸಿಕೊಂಡು ಈ ಮೈತ್ರಿ ಮಾಡಿಕೊಂಡಿದ್ದು, ಈ ಹೊಸ ಮೈತ್ರಿ ಎರಡೂ ಪಕ್ಷಗಳಿಗೆ ವರದಾನವಾದೀತೆ. ಇಲ್ಲ, ಕಳೆದ ಬಾರಿ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ರಾಜ್ಯದಲ್ಲಿ ವಿಫಲ ವಾದಂತೆ ಹೊಸ ಮೈತ್ರಿಯೂ ಆದೀತೆ ಎಂಬ ಚರ್ಚೆ ಇದೀಗ ಆರಂಭಗೊಂಡಿದೆ.

ಎಚ್‌ಡಿಕೆ ಕರ್ಮಭೂಮಿಯಾಗಿರುವ ಗ್ರಾಮಾಂತರದಲ್ಲಿ ಮೈತ್ರಿ ಕೈಗೂಡೀತೆ, ಡಿಕೆ ಸಹೋದರರ ಹಿಡಿತದಲ್ಲಿರುವ ಕ್ಷೇತ್ರವನ್ನು ದೋಸ್ತಿ ಪಡೆ ಕಸಿದು ಕೊಳ್ಳುವುದೇ ಎಂಬ ಲೆಕ್ಕಾಚಾರಗಳು ಮೈತ್ರಿ ಘೋಷಣೆಯ ಬೆನ್ನಲ್ಲೇ ನಡೆಯುತ್ತಿದೆ.

2009ರಲ್ಲಿ ಹೊಸದಾಗಿ ರಚನೆಯಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದನ್ನು ಹೊರತು ಪಡಿಸಿದರೆ, ಒಂದು ಉಪಚುನಾವಣೆ ಮತ್ತು ಎರಡು ಸಾರ್ವತ್ರಿಕ ಚುನಾವಣೆ ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಗೆಲುವು ಸಾಧಿಸಿದ್ದಾರೆ. 2019ರಲ್ಲಿ ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲನುಭವಿಸಿದಾಗಲೂ ಗ್ರಾಮಾಂತರ ದಲ್ಲಿ ತನ್ನ ಹಿಡಿತವನ್ನು ಡಿ.ಕೆ.ಸುರೇಶ್‌ ಉಳಿಸಿಕೊಂ ಡಿದ್ದು, ಇವರ ಪ್ರಾಬಲ್ಯಕ್ಕೆ ಮೈತ್ರಿ ಹೊಡೆತ ನೀಡುವುದೇ ಎಂಬುದು ಸದ್ಯಕ್ಕೆ ಚರ್ಚಿತವಾಗುತ್ತಿರುವ ಸಂಗತಿ.

ಹೊಸ ಮೈತ್ರಿ ಲಾಭವಾದೀತೆ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಗೆ ರಾಜ್ಯದಲ್ಲಿ ಜನಬೆಂಬಲ ಸಿಕ್ಕಿರಲಿಲ್ಲ. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರಾದರೂ ಮತಗಳಿಕೆ ಪ್ರಮಾಣ ನಿರೀಕ್ಷಿತ ಮಟ್ಟ ತಲುಪಿರಲಿಲ್ಲ. ಇದೀಗ ಹೊಸ ದಾಗಿ ಜೆಡಿಎಸ್‌-ಬಿಜೆಪಿ ಮೈತ್ರಿಯಾಗಿದ್ದು, ಈ ಹೊಸ ಮೈತ್ರಿಯನ್ನು ಗ್ರಾಮಾಂ ತರದ ಮತದಾ ರರು ಯಾವ ರೀತಿ ಸ್ವೀಕರಿಸಿಯಾರು ಎಂಬ ನಿರೀಕ್ಷೆ ಗರಿಗೆದರಿದೆ.

ಹೊಸ ಚರ್ಚೆ ಶುರು: ವಿಧಾನಸಭಾ ಚುನಾ ವಣೆಯಲ್ಲಿ ಮೂರು ಪಕ್ಷಗಳು ಜಿಲ್ಲೆಯಲ್ಲಿ ಜಿದ್ದಾಜಿದ್ದಿ ಸ್ಪರ್ಧೆ ನೀಡಿದ್ದವು. ಆದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್‌ .ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ ಯೋಗೇಶ್ವರ್‌ ನಡುವೆ ತುಸು ಹೆಚ್ಚೇ ಪೈಪೋಟಿ ಏರ್ಪಟ್ಟಿತ್ತು. ಚುನಾವಣೆ ಮುಗಿದು ಕೆಲ ತಿಂಗಳಷ್ಟೇ ಕಳೆದಿದ್ದು ಅಂದು ಕಾದಾಡಿದ್ದವರೇ ಇಂದು ಮೈತ್ರಿ ಮಾಡಿಕೊಂಡಿರು ವುದು ಹೊಸ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ಕೆಳ ಹಂತದ ಕಾರ್ಯಕರ್ತರದ್ದೇ ಪ್ರಶ್ನೆ: ಕೆಲ ತಿಂಗಳ ಹಿಂದಷ್ಟೆ ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್‌ ಕಟ್ಟಾಕಟ್ಟಾ ಪೈಪೋಟಿ ನಡೆಸಿದ್ದವು. ಒಕ್ಕಲಿಗರ ಶಕ್ತಿ ಕೇಂದ್ರದಲ್ಲಿ ಕಮಲ ಅರಳಿಸುತ್ತೇವೆ ಎಂದು ಬಿಜೆಪಿ ರಾಜ್ಯ ನಾಯಕರು ರಾಮನಗರದಲ್ಲಿ ತೊಡೆತಟ್ಟಿ ದ್ದರು. ಚನ್ನಪಟ್ಟಣದಲ್ಲಿ ಹತ್ತಾರು ವರ್ಷ ಜೆಡಿಎಸ್‌ ಮುಖಂಡರಾಗಿದ್ದವರು ಬಿಜೆಪಿ ಶಾಲುಹೊದ್ದು ಕುಮಾರಸ್ವಾಮಿ ವಿರುದ್ಧ ರಣಕಹಳೆ ಮೊಳಗಿಸಿದ್ದರು. ಇವರೆಲ್ಲಾ ಇದೀಗ ಜೆಡಿಎಸ್‌-ಬಿಜೆಪಿ ಮೈತ್ರಿಯನ್ನು ಒಪ್ಪಿ ಒಗ್ಗೂಡಿ ಕೆಲಸ ಮಾಡುವರೇ ಎಂಬುದು ಎಲ್ಲರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ಮೈತ್ರಿಯನ್ನು ಒಪ್ಪಿಕೊಳ್ಳಲು ಸಾಧ್ಯವೇ: ಜೆಡಿಎಸ್‌ -ಬಿಜೆಪಿ ಮೈತ್ರಿಯ ಬಗ್ಗೆ ಮೊದಲು ಪ್ರಸ್ತಾಪ ಮಾಡಿದ್ದೇ ಯೋಗೇಶ್ವರ್‌. ಮೈತ್ರಿಗೆ ನಾನು ಸಿದ್ಧ ಎಂದು ಯೋಗೇಶ್ವರ್‌ ಬಹಿರಂಗವಾಗಿ ಸಮ್ಮತಿಸಿದ್ದಾರೆ. ಆದರೆ, ಭೂತ್‌ಮಟ್ಟದಲ್ಲಿ ಜೆಡಿಎಸ್‌ ಮುಖಂಡ ಎದುರಿಗೆ ಕಟ್ಟಾಕಟ್ಟಾ ನಿಂತು ಹೋರಾಡಿದ, ಗ್ರಾಮ ಮಟ್ಟದಲ್ಲಿ ಪಕ್ಷಕ್ಕಾಗಿ ಕಾದಾಡಿ ಕೇಸುಹಾಕಿಸಿ ಕೊಂಡಿರುವ ತಳ ಹಂತದ ಕಾರ್ಯಕರ್ತರು ಈ ಮೈತ್ರಿಯನ್ನು ಒಪ್ಪಿ ಕೊಳ್ಳಲು ಸಾಧ್ಯವೇ ಎಂದು ಕಾಯ್ದುನೋಡಬೇಕಿದೆ.

ಬಲಾಬಲ: ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ಕಳೆದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಭರ್ಜರಿ ಬಹುಮತದಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಕಾಂಗ್ರೆಸ್‌, ಒಂದರಲ್ಲಿ ಜೆಡಿಎಸ್‌, 2ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಒಟ್ಟಾರೆ 8,12,917 ಮತ ಪಡೆದಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳು 3,62,805, ಬಿಜೆಪಿ ಅಭ್ಯರ್ಥಿಗಳು 6,09,382 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್‌-ಬಿಜೆಪಿ ಮೈತ್ರಿ ಕೈಕೊಟ್ಟಿತ್ತು: 2013 ರಲ್ಲಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿದ್ದ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಅನಿತಾಕುಮಾರ ಸ್ವಾಮಿ ವಿರುದ್ಧವಾಗಿ ಜೆಡಿಎಸ್‌ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಈ ಚುನಾವಣೆಯಲ್ಲಿ ಡಿ.ಕೆ. ಸುರೇಶ್‌ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜೆಡಿಎಸ್‌ – ಬಿಜೆಪಿ ಮೈತ್ರಿ ಕೈಕೊಟ್ಟಿತ್ತು. ಇದೀಗ ಮತ್ತೆ ಜೆಡಿಎಸ್‌ – ಬಿಜೆಪಿ ಮೈತ್ರಿಯಾಗಿದ್ದಾರೆ.

ಗ್ರಾಮಾಂತರಕ್ಕೆ ಮೈತ್ರಿ ಅಭ್ಯರ್ಥಿ ಯಾರು..?: ಬಿಜೆಪಿ-ಜೆಡಿಎಸ್‌ ಈ ಬಾರಿಯ ಚುನಾವಣೆಯಲ್ಲಿ ಮೈತ್ರಿಯಾಗಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲ ಇದೀಗ ಗರಿಗೆದರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರರಾಗಿರುವ ಸಂಸದ ಡಿ.ಕೆ.ಸುರೇಶ್‌, ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿದ್ದಾರೆ. ಇವರನ್ನು ಮಣಿಸಲು ಪ್ರಬಲ ಸ್ಪರ್ಧಿಯನ್ನೇ ಕಣಕ್ಕಿಳಿಸಬೇಕಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌-ಬಿಜೆಪಿ ಮೈತ್ರಿಕೂಟಕ್ಕೆ ಈ ಕ್ಷೇತ್ರ ಸಾಕಷ್ಟು ಮಹತ್ವದ್ದಾಗಿದ್ದು ಮೈತ್ರಿಕೂಟದ ಯಶಸ್ಸು, ವೈಫಲ್ಯ ಈ ಕ್ಷೇತ್ರದ ಫಲಿತಾಂಶದ ಮೇಲೆ ನಿರ್ಧರಿತವಾಗಲಿದೆ. ಈ ಹಿನ್ನೆಲೆಯಲ್ಲಿ ಮೈತ್ರಿಕೂಟ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಲಿದೆ ಎಂಬ ಚರ್ಚೆ ಪ್ರಾರಂಭವಾಗಿದೆ.

ಗ್ರಾಮಾಂತರ ಮೈತ್ರಿ ಪಕ್ಷದಲ್ಲಿ ಯಾರಿಗೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಟ್ಟರೆ ಯಾರು ಅಭ್ಯರ್ಥಿ ಎಂಬ ಪ್ರಶ್ನೆ ಮೂಡಿದೆ. ಇನ್ನು ಎಂಎಲ್‌ಸಿ ಯೋಗೇಶ್ವರ್‌ ಹೈಕಮಾಂಡ್‌ ಹೇಳಿದರೆ ಸ್ಪರ್ಧೆಗೆ ಸಿದ್ದ ಎಂದಿದ್ದಾರೆ. ಇತ್ತ ಜೆಡಿಎಸ್‌ನ ಮಾಜಿ ಶಾಸಕ ಎ.ಮಂಜು ಮೈತ್ರಿ ಅಭ್ಯರ್ಥಿಯಾಗಲು ಒಪ್ಪಿದ್ದಾರೆ. ಗ್ರಾಮಾಂತರ ಕ್ಷೇತ್ರ ಜೆಡಿಎಸ್‌ಗಾ, ಬಿಜೆಪಿಗಾ, ಅಭ್ಯರ್ಥಿ ಯಾರು ಎಂಬುದು ಸದ್ಯಕ್ಕೆ ನಿಗೂಢವಾಗೇ ಉಳಿದಿದೆ.

-ಸು.ನಾ.ನಂದಕುಮಾರ್‌

 

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.