
ಮಹಿಳೆಯರು ಅಡೆತಡೆ ಇಲ್ಲದೇ ಸಾಧನೆಯತ್ತ ಸಾಗಿ
Team Udayavani, Mar 10, 2019, 7:47 AM IST

ಚನ್ನಪಟ್ಟಣ: ಸೀಮಿತ ಚೌಕಟ್ಟಿನೊಳಗಿರಬೇಕೆಂಬಸಂಕೋಲೆಯನ್ನು ಬಿಟ್ಟು, ಸಾಧನೆಯತ್ತ ಹೆಜ್ಜೆ ಇರಿಸಿದರೆ ಯಶಸ್ಸು ಯಾವುದೇ ಅಡೆತಡೆ ಇಲ್ಲದೆ ಲಭಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ ಹೇಳಿದರು.
ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀಶಿರಡಿ ಸಾಯಿಬಾಬಾ ವೃದ್ಧಾಶ್ರಮದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮತ್ತು ರಾಮಕೃಷ್ಣ ಪರಮಹಂಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಣಿ ಚನ್ನಮ್ಮ, ಸಂಚಿ ಹೊನ್ನಮ್ಮ, ಅಕ್ಕಮಹಾದೇವಿ ಅಂತಹವರ ಚಾರಿತ್ರಿಕ ಹಿನ್ನೆಲೆಯನ್ನು ಇಂದಿನ ಯುವತಿಯರು ತಿಳಿದುಕೊಳ್ಳಬೇಕು. ಕೀಳರಿಮೆ ಬಿಟ್ಟು ಸಾಧನೆಯತ್ತ ಮುಖಮಾಡಬೇಕು ಎಂದರು.
ಉತ್ತಮ ಭವಿಷ್ಯಕ್ಕೆ ಅನೇಕ ಮಾರ್ಗವಿದೆ: ಪಶುವೈದ್ಯೆ ಡಾ.ರಕ್ಷಿತ ಮಾತನಾಡಿ, ಸಾಧನೆ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನೇಕ ರೀತಿಯ ಉತ್ತಮ ಮಾರ್ಗಗಳಿವೆ. ಪೋಷಕರು ಹೆಣ್ಣುಮಕ್ಕಳಿಂದ ಏನೂ ಸಾಧಿಸಲಾರರುಎಂಬ ಕೀಳರಿಮೆಯನ್ನು ಅನುಸರಿಸದೇ ಉನ್ನತ ಶಿಕ್ಷಣದವರೆಗೂ ಮುಂದುವರಿಸಿದರೆ ಹೆಣ್ಣು ಮಕ್ಕಳು ಉನ್ನತ ಸ್ಥಾನಕ್ಕೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಯಶಸ್ವಿ ಮಹಿಳೆಗೆ ಪತಿ ಸಹಕಾರ: ಹೆಣ್ಣು ಮಗಳು ಶಿಕ್ಷಣ ಪಡೆದರೆ ಜಗತ್ತನ್ನು ಆಳಬಲ್ಲಳು ಎನ್ನುವುದಕ್ಕೆ ಇತಿಹಾಸದ ಪುಟದಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತವೆ. ಅವುಗಳನ್ನು ಕಣ್ತೆರೆದು ನೋಡಿದರೆ ಸತ್ಯ ಅರ್ಥವಾಗುತ್ತದೆ. ಯಶಸ್ವಿ ಮಹಿಳೆಯ ಹಿಂದೆ ಪತಿಯ ಸಹಕಾರವೂ ಸಹ ಸಾಕಷ್ಟಿರುತ್ತದೆ. ವಿರೋಧಗಳನ್ನು ಮೆಟ್ಟಿನಿಂತಾಗ ಅಷ್ಟೇ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದುಪತ್ರಕರ್ತೆ ಸುಧಾರಾಣಿ ಹೇಳಿದರು.
ಮಹಿಳೆಯರ ಹೋರಾಟ ಅನಿವಾರ್ಯ: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೆ.ಟಿ.ಲಕ್ಷ್ಮಮ್ಮ ಮಾತನಾಡಿ, ಮಹಿಳೆಯರ ಪರವಾದ ಸಾಕಷ್ಟು ಕಾನೂನುಗಳು ಜಾರಿಯಾಗಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ. ಇದಕ್ಕೆ ಮೂಲ ಕಾರಣ ಮಹಿಳೆಯರು ಸಂಘಟನಾತ್ಮಕವಾಗಿ ಜಾಗೃತರಾಗದಿರುವುದು. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯನ್ನು ವ್ಯವಸ್ಥಿತವಾಗಿ ಸಾಧನೆಯಿಂದ ಹಿಂದೆ ಸರಿಯುವಂತೆ ಮಾಡಲಾಗುತ್ತಿದೆ, ಅದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಆಶ್ರಮದಲ್ಲಿರುವ ಹಿರಿಯರನ್ನು ಗೌರಸಲಾಯಿತು. ವೃದ್ಧಾಶ್ರಮದ ಮುಖ್ಯಸ್ಥ ಹರೀಶ್ ಹೆಗ್ಗಡೆ ರಾಮಕೃಷ್ಣ ಪರಮಹಂಸರ ಜೀವನ ಸಾಧನೆಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಖಮರ್ ನಿಜಾಮಿ, ಶಿಕ್ಷಣ ಇಲಾಖೆಯ ಎಚ್.ವಿ.ರಕ್ಷಿತಾ, ಮಜ್ದೂರ್ ಕಾಂಗ್ರೆಸ್ ಅಧ್ಯಕ್ಷೆ ಜಯಲಕ್ಷ್ಮೀ, ಅಂಬೇಡ್ಕರ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಶಾಂತಮ್ಮ, ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಜಯಶೀಲ, ಉದ್ಯಮಿ ಚಂದ್ರಮ್ಮ, ಟೆಕ್ಕಿ ನವ್ಯಶ್ರೀ. ಆರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.