ರಜೆಯಲ್ಲೂ ಗ್ರಾಪಂ ಅಧಿಕಾರಿಗಳಿಂದ ಕೆಲಸ

Team Udayavani, Oct 25, 2022, 3:29 PM IST

tdy-6

ಕನಕಪುರ: ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಅವ್ಯವಹಾರದ ದಾಖಲೆಗಳನ್ನು ತಿರುಚಲು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ರಜಾ ದಿನದಲ್ಲೂ ಕೆಲಸ ಮಾಡುತ್ತಿ¨ªಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಕಸಬಾ ಹೋಬಳಿಯ ಅಳ್ಳಿ ಮಾರನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಬಳಿ ಜಮಾವಣೆ ಗೊಂಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಪಡೆ ಪುಟ್ಟಸ್ವಾಮಿ, ಜಾಗೃತಿ ಟ್ರಸ್ಟ್‌ ರವಿ, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಸುರೇಶ್‌ ಸೇರಿದಂತೆ ಗ್ರಾಮಸ್ಥರು ರಜಾ ದಿನದಲ್ಲೂ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲು ತೆರೆದು ಕೆಲಸ ಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಮಾತಿನ ಚಕಮಕಿ: ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಗ್ರಾಮಸ್ಥರ ವಿರೋಧದ ನಡುವೆಯೂ ಅಧಿಕಾರಿಗಳು ಪೊಲೀಸರ ರಕ್ಷಣೆ ಪಡೆದು ಕೆಲಸ ಮುಂದು ವರಿಸಿದರು. ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ, ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಚೇರಿಗೆ ಬೀಗ ಜಡಿದು ಸ್ಥಳದಿಂದ ಕಾಲ್ಕಿತ್ತರು.

ಪ್ರಕರಣದ ತನಿಖೆ ಬಾಕಿ: ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಪ್ಪ ರೇಣಿ, ಇ-ಖಾತೆ ಮಾಡಿಕೊಡಲು ಗ್ರಾಮಸ್ಥರ ಬಳಿ ಲಂಚ ಪಡೆದಿದ್ದರು. ಈ ಪ್ರಕರಣದ ತನಿಖೆ ಬಾಕಿ ಇದೆ. ಗ್ರಾಮ ಪಂಚಾಯಿತಿಯಲ್ಲಿ ಪ್ರಾಮಾಣಿಕತೆ ಯಿಂದ ಕರ್ತವ್ಯ ನಿರ್ವಹಿಸದೆ, ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಸಮಸ್ಯೆ ಹೇಳಿಕೊಳ್ಳಲು ಬಂದರೆ, ಇವರು ದರ್ಶನ ಕೊಡುವುದೇ ಅಪರೂಪ. ತಿಂಗಳಲ್ಲಿ 4-5 ದಿನ ಕಚೇರಿಗೆ ಬಂದರೆ ಹೆಚ್ಚು ಎಂದು ದೂರಿದರು.

ಕರ್ತವ್ಯ ನಿರ್ವಹಣೆಗೆ ಆದೇಶಿಸಿಲ್ಲ: ಅಮಾವಾಸ್ಯೆಗೊಮ್ಮೆ ಹುಣ್ಣಿಮೆಗೊಮ್ಮೆ ಕಚೇರಿಗೆ ಬರುವ ಇವರು, ರಜಾ ದಿನದಲ್ಲೂ ಕಚೇರಿ ಬಾಗಿಲು ತೆರೆದು ಕೆಲಸ ಮಾಡುತ್ತಿರುವುದನ್ನು ನೋಡಿದರೆ, ದಿಗ್ಬ†ಮೆಯಾಗುತ್ತಿದೆ. ನಮಗೆ ನಂಬಲು ಸಾಧ್ಯ ವಾಗುತ್ತಿಲ್ಲ. ರಜಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸ ಬೇಕಾದರೆ, ಸಂಬಂಧಪಟ್ಟವರಿಂದ ಆದೇಶದ ಪ್ರತಿ ಇರಬೇಕು. ಆದರೆ, ಯಾವುದೇ ಆದೇಶ ಇಲ್ಲದಿದ್ದರೂ ಇವರು ನಡೆಸಿರುವ ಅವ್ಯವಹಾರ ಅಕ್ರಮಗಳನ್ನು ಮುಚ್ಚಿಹಾಕಲು ಯಾರಿಗೂ ತಿಳಿಯದಂತೆ ಬಾಗಿಲು ಹಾಕಿಕೊಂಡು, ರಜಾದಿನದಲ್ಲಿ ದಾಖಲೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು, ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಿ: ಪಿಡಿಒ ಹನುಮಪ್ಪರೇಣಿ ಅವರು ಇಲ್ಲಿ ಪ್ರಭಾರ ಅಧಿಕಾರಿಯಾಗಿ ಬಂದು ಹತ್ತಾರು ವರ್ಷಗಳೇ ಕಳೆದಿವೆ. ಒಬ್ಬ ಅಧಿಕಾರಿ ಪ್ರಭಾರ ಅಧಿಕಾರಿಯಾಗಿ ಎಷ್ಟು ವರ್ಷ ಕೆಲಸ ಮಾಡಬಹುದು. ಇಷ್ಟು ವರ್ಷ ಕಳೆದರೂ ಏಕೆ ಇವರು ಇಲ್ಲೇ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಮೇಲಧಿಕಾರಿಗಳು ಮತ್ತು ರಾಜಕಾರಣಿಗಳ ಶ್ರೀರಕ್ಷೆ ಇದೆ. ಹೀಗಾಗಿ ಈ ಗ್ರಾಪಂನಿಂದ ಇವರನ್ನು ಬಿಡುಗಡೆ ಮಾಡಿಲ್ಲ. ಸಂಬಂಧಪಟ್ಟ ಮೇಲಾಧಿಕಾರಿಗಳು, ಇದೆಲ್ಲದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕಾನೂನು ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು, ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಪಂನಿಂದ ವರ್ಕ್‌ ಶಾಪ್‌ ಆಗಿದೆ. ಸಾರ್ವಜನಿಕರ ಜಮೀನು ಸರ್ವೆ ಮಾಡಲು ಶಿಬಿರ ಆಯೋಜನೆ ಮಾಡಿ, ಸಭೆಯಲ್ಲಿ ಸೂಚನೆ ನೀಡಿದ್ದಾರೆ. ನರೇಗಾ ಸಂಬಂಧಪಟ್ಟಂತೆ ಜಿಯೋ ಟ್ಯಾಗ್‌ ಮತ್ತು ನೆರೆಯಿಂದ ಆಗಿರುವ ಸಮಸ್ಯೆಗಳ ಬಗ್ಗೆ ಅಗತ್ಯ ಕ್ರಮಕ್ಕೆ ಜಿಪಂ ಉಪ ಕಾರ್ಯದರ್ಶಿ ಗ್ರೂಪ್‌ ಟಾಕ್‌ನಲ್ಲಿ ತಿಳಿಸಿದ್ದಾರೆ. ಹೀಗಾಗಿ ರಜಾ ದಿನದಲ್ಲಿ ಕೆಲಸ ಮಾಡುತ್ತಿದ್ದೇವೆ. – ಹನುಮಪ್ಪ ರೇಣಿ, ಅಭಿವೃದ್ಧಿ ಅಧಿಕಾರಿ, ಅಳ್ಳಿಮಾರನಹಳ್ಳಿ ಗ್ರಾಪಂ‌

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.