ವಿಧಾನಸಭೆಯಲ್ಲಿ ಕಾರ್ಮಿಕ ಸಚಿವರ ಪ್ರತಿಕ್ರಿಯೆಗೆ ನೆಟ್ಟಿಗರ ಆಕ್ಷೇಪ
Team Udayavani, Feb 4, 2021, 4:22 PM IST
ರಾಮನಗರ: ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್ ಕಾರ್ಮಿಕರ ಮುಷ್ಕರದ ಬಗ್ಗೆ ನೀಡಿರುವ ಪ್ರತಿಕ್ರಿಯೆಗೆ ಟೊಯೋಟಾ ಕಾರ್ಮಿಕರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.
ಸದನದ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಟೊಯೋಟಾ ಕಾರ್ಮಿಕರ ವಿಷಯ ಪ್ರಸ್ತಾಪಿಸಿದಾಗ ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್ ನೀಡಿದ ಉತ್ತರದಿಂದ ಕಾರ್ಮಿಕರು ಅಸಮಾಧಾನಗೊಂಡಿದ್ದು, ನೀವು ಸಮರ್ಥ ಕಾರ್ಮಿಕ ಸಚಿವರೇ? ಎಂದು ಪ್ರಶ್ನಿಸಿದ್ದಾರೆ.
ಪವಿತ್ರ ಜನತಾ ದೇವಾಲಯದಲ್ಲಿ ಟಿಕೆಎಂ ಆಡಳಿತ ಮಂಡಳಿ ಬರೆದುಕೊಟ್ಟ ಸುಳ್ಳು ಮಾಹಿತಿ ಕೊಟ್ಟಿದ್ದು ಎಷ್ಟು ಸರಿ? ಸದನದಲ್ಲಿ ನೀವು ಮಾತನಾಡಿದ ರೀತಿ ನೋಡಿದರೆ ನೀವು ಕಾರ್ಮಿಕ ಸಚಿವರಾ ಅಥವಾ ಆಡಳಿತ ಮಂಡಳಿಯ ವಕ್ತಾರರೇ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.
ಕಾರ್ಮಿಕ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಳೆದ ಒಂದು ವರ್ಷದಿಂದ ಹಲವು ಬಾರಿ ನಿಮ್ಮನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದರು. ಅವರಿಗೆ ಸುಳ್ಳು ಹೇಳಿದ್ದು ಸರಿಯೇ, ಒಮ್ಮೆ 20 ನಿಮಿಷ ಸಭೆ ನಡೆಸಿ 5 ಸಭೆ ಮಾಡಿದ್ದೇವೆ ಎಂದಿರುವುದು ಸುಳ್ಳಲ್ಲವೇ? ಸಭೆ ನಡೆಸಿರುವುದಕ್ಕೆ ದಾಖಲೆ ನೀಡುವಿರಾ? 1,860 ಜನ ಕೆಲಸಕ್ಕೆ ಹೋಗಿದ್ದಾರೆ ಎಂದು ನಿಮಗೆ ಮಾಹಿತಿ ಕೊಟ್ಟಿದ್ಯಾರು, ಅಮಾನತು ವಿಷಯದಲ್ಲಿ ಕಾರ್ಮಿಕ ಇಲಾಖೆ ಮಧ್ಯೆ ಪ್ರವೇಶಿಸಲು ಸಾಧ್ಯವಿಲ್ಲ ಎನ್ನುವ ನೀವು ಸಮರ್ಥ ಕಾರ್ಮಿಕ ಸಚಿವರೇ, ಆಡಳಿತ ಮಂಡಳಿಯ ಸಮರ್ಥನೆಗೆ ನಿಂತರೆ ಕಾರ್ಮಿಕರ ರಕ್ಷಣೆ ಮಾಡುವವರು ಯಾರು? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾರ್ಮಿಕರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.