ಸಾಲಬಾಧೆ ತಾಳದೇ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Team Udayavani, Apr 16, 2022, 1:22 PM IST
ಕನಕಪುರ: ಸಾಲಬಾಧೆಗೆ ಹೆದರಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮನಹಳ್ಳಿ ಬಳಿ ನಡೆದಿದೆ.
ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಏಳಗಳ್ಳಿ ಗ್ರಾಮದ ರಾಜೇಶ್(24) ಮೃತ ಯುವಕ. ಕೈ ಸಾಲ ಮಾಡಿ ಕೊಂಡಿದ್ದ ಈತ ಸಾಲ ಬಾಧೆ ತಾಳಲಾರದೆ ಮನನೊಂದು ಹನುಮನಹಳ್ಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಹನುಮನಹಳ್ಳಿ ಕೆರೆಯಲ್ಲಿ ಶವ ಕಂಡ ಸ್ಥಳೀಯರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿದು ಗ್ರಾಮಾಂತರ ಠಾಣೆಯ ಪಿಎಸ್ಐ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಶವನ್ನು ಮೇಲೆತ್ತಿ ಪೋಷಕರಿಗೆ ಮಾಹಿತಿ ನೀಡಿದ್ದರು. ಘಟನೆ ನಡೆದು ಮೂರು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ.
ಶವವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿ ಪೊಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.