ಪರಿಣಾಮಕಾರಿಯಾಗಿ ಅನುಷ್ಠಾನ: ಅಶೋಕ್
Team Udayavani, Apr 10, 2021, 12:06 PM IST
ರಾಮನಗರ: ಜಲ ಜೀವನ್ ಮಿಷನ್ ಯೋಜನೆ ಒಂದು ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಚ್.ಎನ್. ಅಶೋಕ್ ಹೇಳಿದರು.
ನಗರದ ಜಿಲ್ಲಾ ಪಂಚಾಯ್ತಿ ಭವನದಲ್ಲಿ 20ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಶುದ್ಧ ಕುಡಿಯುವ ನೀರನ್ನು ನಲ್ಲಿಗಳ ಮೂಲಕ ಮನೆ, ಮನೆಗೂ ಸರಬರಾಜು ಮಾಡುವ ಯೋಜನೆ ಜಲ ಜೀವನ ಮಿಷನ್. ಈ ಯೋಜನೆಯಡಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಕೆಲವು ಕಡೆ ಗುತ್ತಿಗೆ ಪಡೆದುಕೊಂಡ ಗುತ್ತಿಗೆದಾರರು, ಪೈಪ್‌ಗಳ ದರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಿಲ್ಲ ಎಂಬ ಮಾಹಿತಿ ಇದೆ. ಈ ಕುರಿತಂತೆ ಗುತ್ತಿಗೆದಾರರೊಂದಿಗೆ ಚರ್ಚಿಸಿ, ತೊಂದ ರೆ ನಿವಾರಿಸಿ ಕೆಲಸ ಪ್ರಾರಂಭಿಸುವಂತೆ ಸಲಹೆ ನೀಡಿದರು.
ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಿಂದ ಅಂಕುಶನಹಳ್ಳಿಗೆ ಹೋಗುವ ರಸ್ತೆ ಕಾಮಗಾರಿಯನ್ನುಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಗುತ್ತಿಗೆ ನೀಡಲಾಗಿದ್ದು, ಗುತ್ತಿಗೆದಾರರುಪೂರ್ಣಗೊಳಿಸುತ್ತಿಲ್ಲ ಎಂದು ಸದಸ್ಯ ಪ್ರಸನ್ನ ಕುಮಾರ್ ದೂರಿದರು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು, ನಿಯಮಾನುಸಾರ ಗುತ್ತಿಗೆ ರದ್ದುಪಡಿಸಿ ಪರ್ಯಾಯ ವ್ಯವಸ್ತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಜಿಲ್ಲೆಯಲ್ಲಿ ಆಯ್ಕೆಯಾಗಿರುವ 16 ಮಂದಿ ದಿವ್ಯಾಂಗ ಫಲಾನುಭವಿಗಳಿಗೆ ನಾಲ್ಕು ಚಕ್ರದ ವಾಹನ ನೀಡುವ ಪ್ರಕ್ರಿಯೆ ಫಲಾನುಭವಿಗಳ ಬಳಿಡಿ.ಎಲ್ ಇಲ್ಲದ ಕಾರಣ ಸ್ಥಗಿತವಾಗಿದೆ. ಪ್ರದೇಶಿಕಸಾರಿಗೆ ಇಲಾಖೆಯಿಂದ ಆದ್ಯತೆ ಮೇರೆಗೆ ಅವರಿಗೆ ಡಿ.ಎಲ್ ಒದಗಿಸಿ ಎಂದು ಅಧ್ಯಕ್ಷರು ಆರ್.ಟಿ.ಒ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ಲಸಿಕೆ ಪಡೆಯಲು ಮನವಿ: 45 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಕೋವಿಡ್ ಲಸಿಕೆ ಪಡೆದುಕೊಳ್ಳಿ. ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿ ಲಸಿಕೆ ನೀಡಲಾಗುವುದು ಎಂದು ಅಧ್ಯಕ್ಷರು ಭರವಸೆ ನೀಡಿದರು. ಸಭೆಯಲ್ಲಿ ಜಿ. ಪಂ. ಉಪಾಧ್ಯಕ್ಷೆ ಜಯರತ್ನ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಇಕ್ರಂ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಅಧ್ಯಕ್ಷರ ಅಸಮಾಧಾನ :
ಜಿಲ್ಲೆಯಲ್ಲಿ ಕೆರೆ ಅಭಿವೃದ್ಧಿ ಯೋಜನೆಗಳಹೆಸರಿನಲ್ಲಿ ಕೆಲ ಇಲಾಖೆಗಳ ಅಧಿಕಾರಿಗಳು ಹಣ ಲಪಟಾಯಿಸಿದ್ದಾರೆ ಎಂದು ಸ್ವತಃ ಅಧ್ಯಕ್ಷರೆ ದೂರಿ ಅಧಿಕಾರಿಗಳನ್ನು ತರಾಟೆಗೆತೆಗೆದುಕೊಂಡರು. ಇದಕ್ಕೆ ದನಿಗೂಡಿಸಿದಸದಸ್ಯ ಗಂಗಾಧರ್, ತಮ್ಮ ಕ್ಷೇತ್ರದ ವ್ಯಾಪ್ತಿ ಯಲ್ಲಿ 3 ಕೆರೆಗಳ ಅಭಿವೃದ್ಧಿಗೆ ಸಿದ್ದರಾಮಯ್ಯಸರ್ಕಾರದಲ್ಲಿ 90 ಲಕ್ಷ ಬಿಡುಗಡೆ ಆಗಿತ್ತು. ಆದರೆ ಏನೇನು ಕೆಲಸ ಆಗಿಲ್ಲ ಎಂದರು ದೂರಿದರು. ಈ ಬಗ್ಗೆ ಗಮನ ಹರಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.
ನೀರಿನ ಘಟಗಳ ದುರಸ್ತಿಗೆ ಆದೇಶ :
ಜಿಲ್ಲೆಯಲ್ಲಿ ದುರಸ್ತಿ ಅವಶ್ಯಕತೆಯಿಂದ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಪಡಿಸಿ ಎಂದು ಜಿಪಂ ಅಧ್ಯಕ್ಷ ಎಚ್.ಎನ್.ಅಶೋಕ್ ಅಧಿಕಾರಿಗಳು ಹಾಗೂನಿರ್ವಹಣಾ ಏಜನ್ಸಿಗಳಿಗೆ ಸೂಚನೆ ನೀಡಿದರು. ಸಾಮಾನ್ಯಸಭೆಯಲ್ಲಿ ಮಾತನಾಡಿ, ಕೆಲವು ಕಡೆ ಮೂರು ವರ್ಷದಿಂದ ಶುದ್ಧನೀರು ಘಟಕಗಳ ವಿದ್ಯುತ್ ಬಿಲ್ ಪಾವತಿ ಆಗಿಲ್ಲ. ಕೂಟಗಲ್ ಗ್ರಾಮದಲ್ಲಿ ಇಂತಹದ್ದೇ ಸಮಸ್ಯೆಯಿದೆ. ನಿರ್ವಹಣೆ ಗುತ್ತಿಗೆ ಪಡೆದ ಏಜೆನ್ಸಿಗಳೇ ವಿದ್ಯುತ್ ಬಿಲ್ ಪಾವತಿ ಮಾಡಬೇಕು ಎಂದು ಸೂಚಿಸಿದರು.
ಸಹಾಯವಾಣಿ ಸ್ಥಾಪಿಸಲು ಸಲಹೆ :
ಜಿಪಂ ಸದಸ್ಯ ಎಸ್. ಗಂಗಾಧರ್ ಮಾತನಾಡಿ, ಜಿಲ್ಲೆಯ ಅನೇಕ ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳು ವಿವಿಧ ಸಮಸ್ಯೆಗಳಿಂದಾಗಿ ಸ್ಥಗಿತವಾಗಿವೆ. ನೀರಿನ ಸಮಸ್ಯೆಗಳ ದೂರಿಗಾಗಿ ಇಡೀ ಜಿಲ್ಲೆಗೆ ಕೇಂದ್ರೀಕೃತ ಸಹಾವಾಣಿ ಸ್ಥಾಪಿಸಿ ಎಂದು ಸಲಹೆ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಜಿಲ್ಲೆಯಲ್ಲಿನ 540 ಘಟಕಗಳಪೈಕಿ 533 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಪರಿಹಾರ ವಾಣಿ ಮೂಲಕ ದೂರುಗಳನ್ನು ಸ್ವೀಕರಿಸಲಾಗುತ್ತಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.