ಬೆಂಗಳೂರು ಮಾದರಿಯಲ್ಲಿ ಕ್ಷೇತ್ರ ಅಭಿವೃದ್ಧಿ ಗುರಿ

ಅಭಿವೃದ್ಧಿ ಕಾಮಗಾರಿಗೆ ಸ್ಪಂದಿಸದ ಅಧಿಕಾರಿಗಳು ಜಾಗ ಖಾಲಿ ಮಾಡಿ: ಸಚಿವ ಆರ್‌. ಶಂಕರ್‌ ಎಚ್ಚರಿಕೆ

Team Udayavani, Jun 27, 2019, 1:38 PM IST

27-June-29

ರಾಣಿಬೆನ್ನೂರ: ತಾಪಂ ಸಭಾಭವನದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪೌರಾಡಳಿತ ಸಚಿವ ಆರ್‌.ಶಂಕರ್‌ ಮಾತನಾಡಿದರು.

ರಾಣಿಬೆನ್ನೂರ: ನಗರ ಸೇರಿದಂತೆ ತಾಲೂಕಿನ ಪ್ರತಿ ಗ್ರಾಮವೂ ಬೆಂಗಳೂರು ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕನಸು ನನ್ನದು. ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಇಲ್ಲವಾದರೆ ಇಲ್ಲಿಂದ ಹೋಗಬಹುದು ಎಂದು ಪೌರಾಡಳಿತ ಸಚಿವ ಆರ್‌.ಶಂಕರ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬುಧವಾರ ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕ್ಷೇತ್ರದ ಮತದಾರರಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಪಕ್ಕದಲ್ಲಿಯೇ ಕುಳಿತಿದ್ದ ತಹಶೀಲ್ದಾರ್‌ ಸಿ.ಎಸ್‌. ಕುಲಕರ್ಣಿ ಅವರ ಕಡೆಗೆ ತಿರುಗಿ ಏನ್ರೀ.. ತಾಲೂಕಿನ ರೈತರು ಪಹಣಿ ಪತ್ರಿಕೆ ಪಡೆಯಲು ಇಡೀ ದಿವಸ ಸರತಿಯಲ್ಲಿ ಕಾದು ಪಡೆಯುವ ಪರಿಸ್ಥಿತಿ ನಿರ್ಮಾಣವಿದ್ದರೂ ಕಣ್ಣು ಮುಚ್ಚಿ ಕುಳುತ್ತಿದ್ದೀರಾ? ಇನ್ನೂ ಎರಡು ಕೌಂಟರ್‌ ತೆರದು ಸೇವೆ ನೀಡಲು ಸಾಧ್ಯವಿಲ್ಲವೇ? ತಕ್ಷಣ ಜನರಿಗೆ ಅನುಕೂಲ ಕಲ್ಪಿಸಲು ವ್ಯವಸ್ಥೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲೂ ಸರಕಾರದ ಸವಲತ್ತುಗಳ ಅದಾಲತ್‌ ಹಾಕಿಕೊಳ್ಳಲಾಗುವುದು, ಜನರಿಗೆ ಜಾಗೃತಿ ಮೂಡಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಬಸ್‌ ಪಾಸ್‌ ನೀಡುವಲ್ಲಿ ವಿಳಂಬವಾಗಬಾರದು. ಆಟೋದಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಕೊಂಡೊಯ್ಯಬಾರದು, ನಗರದಲ್ಲಿ ರಿಂಗ್‌ ರಸ್ತೆಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರೀಯಾ ಯೋಜನೆ ತಯಾರಿಸಬೇಕು. ಕೊಳಗೇರಿ ಮುಕ್ತಗೊಳಿಸಬೇಕು, ಕ್ಷೇತ್ರದಾದ್ಯಂತ ವಸತಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಎಲ್ಲರಿಗೂ ಮನೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಅವಶ್ಯವಿರುವ ಎಲ್ಲರಿಗೂ ಚಾಲನಾ ಪತ್ರ ನೀಡಲು ಅಧಿಕಾರಿಗಳು ಜಾಗೃತಿ ರೂಪದಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಪ್ರತಿ ಇಲಾಖೆಯ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ ವರದಿ ಜತೆಗೆ ಇಲಾಖೆಯಲ್ಲಿ ಆಗದಿರುವ ಕಾಮಗಾರಿ, ಆಗದಿರಲು ಕಾರಣ, ಮುಂದೆ ಏನಾಗಬೇಕು ಎಂಬುದರ ಕುರಿತು ಪಟ್ಟಿ ಮಾಡಿ ಕೊಡಿ ಎಂದು ತಾಕೀತು ಮಾಡಿದರು.

ಈ ವರೆಗೆ ನಡೆದ ಪ್ರಗತಿ ಕುರಿತ ಮಾಹಿತಿಯನ್ನು ಲೋಕೋಪಯೋಗಿ, ಸಮಾಜ ಕಲ್ಯಾಣ, ಎಪಿಎಂಸಿ, ಹೆಸ್ಕಾಂ, ಶಿಕ್ಷಣ ಇಲಾಖೆ, ತೋಟಗಾರಿಕೆ, ಕೃಷಿ, ಪಶು ಸಂಗೋಪನಾ ಇಲಾಖೆ, ಕಂದಾಯ, ಮಕ್ಕಳ ಮತ್ತು ಮಹಿಳಾ, ಹಿಂದುಳಿದ ವರ್ಗ, ಶುದ್ಧ ಕುಡಿಯುವ ನೀರಿನ ಇಲಾಖೆ, ಜಿಪಂ ಉಪ ವಿಭಾಗ, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ತಹಶೀಲ್ದಾರ್‌ ಸಿ.ಎಸ್‌. ಕುಲಕರ್ಣಿ, ಪೌರಾಯುಕ್ತ ಡಾ| ಮಹಾಂತೇಶ ಎನ್‌., ಶಿಕ್ಷಣಾಧಿಕಾರಿ ಶ್ರೀಧರ ಎನ್‌., ತಾಪಂ ಇಒ ಎಸ್‌.ಎಂ. ಕಾಂಬ್ಳೆ, ವ್ಯವಸ್ಥಾಪಕ ಬಸವರಾಜ ಶಿಡೇನೂರ, ನಿರ್ದೇಶಕ ಅಶೋಕ ನಾರಜ್ಜಿ ಇದ್ದರು.

ಈ ಹಿಂದಿನ ಯಾವುದೇ ಪ್ರಗತಿ ವಿಚಾರ ನನಗೆ ಬೇಡ, ಮುಂದೇನಾಗಬೇಕು, ಪ್ರತಿ ಇಲಾಖೆಗೆ ಬೇಕಾದ ಸೌಲಭ್ಯ ಹಾಗೂ ಆಗಬೇಕಾಗಿರುವ ಕಾರ್ಯಗಳ ಮತ್ತು ಬೇಕಾದ ಅನುದಾನ ಕುರಿತ ಮಾಹಿತಿ ನೀಡಿ. ಕ್ರಿಯಾಯೋಜನೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ ಮಾಹಿತಿ ನೀಡಬೇಕು. ಬೇಜವಾಬ್ದಾರಿ ಕಂಡು ಬಂದಲ್ಲಿ ಸಹಿಸಲಾಗದು.
ಆರ್‌. ಶಂಕರ್‌,
ಪೌರಾಡಳಿತ ಸಚಿವರು

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.