ಮೋದಿ ಮೋಡಿಗೆ ಮರುಳಾಗದಿರಿ
ಕೇಂದ್ರದಿಂದ ಐಟಿ-ಸಿಬಿಐ ದುರ್ಬಳಕೆಮೈತ್ರಿ ಅಭ್ಯರ್ಥಿ ಬೆಂಬಲಿಸಲು ಮನವಿ
Team Udayavani, Apr 6, 2019, 3:43 PM IST
ಲಿಂಗಸುಗೂರು: ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕ ಪರ ಪ್ರಚಾರ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.
ಲಿಂಗಸುಗೂರು: ದೃಶ್ಯ ಮಾಧ್ಯಮ, ಐಟಿ, ಸಿಬಿಐ ದುರುಪಯೋಗ ಪಡಿಸಿಕೊಳ್ಳುತ್ತಿರುವ ನರೇಂದ್ರ ಮೋದಿಯ ಆಡಳಿತ ಹಿಟ್ಲರ್ ಆಡಳಿತ ಇದ್ದಂತೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ಗಡಿಯಾರ ವೃತ್ತದಲ್ಲಿ ಶುಕ್ರವಾರ ರಾಯಚೂರು
ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಬಿ.ವಿ.ನಾಯಕರ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ನೂರೆಂಟು ಸುಳ್ಳು ಹೇಳಿ 2014ರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿಯವರು ಏನು ಕೆಲಸ ಮಾಡದೇ ಬರೀ ಸುಳ್ಳು ಹೇಳುತ್ತಲೇ ಐದು ವರ್ಷ ಕಳೆದಿದ್ದಾರೆ. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಏನು ಅಭಿವೃದ್ಧಿ ಕೆಲಸಗಳು ಆಗಿಲ್ಲವೆಂದು ಹೇಳುತ್ತಿದ್ದಾರೆ. ಹಾಗಾದರೇ
ವಿದೇಶಕ್ಕೆ ಸುತ್ತಾಡಲು ಬಳಸುವ ವಿಮಾನಗಳು ನಿನ್ನೆ ಮೊನ್ನೆ ಮಾಡಲಾಗಿತ್ತಾ..? ಮೋದಿಯವರು ಇತ್ತೀಚೆಗೆ ತಮ್ಮ ಭಾಷಣದಲ್ಲಿ 37 ವಿಮಾನ ನಿಲ್ದಾಣ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಅಂಕಿ ಅಂಶ ಪ್ರಕಾರ ಬರೀ ಕೇವಲ ಆರು ವಿಮಾನ ನಿಲ್ದಾಣ ಮಾಡಿದ್ದಾರೆ. ಆದರೆ ಬರೀ ಸುಳ್ಳು ಹೇಳುವುದು ಗೊತ್ತು. ಅವರಿಗೆ ಕೆಲಸ ಮಾಡುವುದು ಗೊತ್ತಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ದೇಶಕ್ಕೆ
ಅನೇಕ ಕೊಡುಗೆಗಳನ್ನು ನೀಡಿದೆ. ಆದರೆ ಇದನ್ನೆಲ್ಲಾ ಮರೆಮಾಚಿ ಯುವಕರಿಗೆ ಮಂಕುಬೂದಿ ಎರಚುತ್ತಿದ್ದಾರೆ. ಚುನಾವಣೆ ಮುಗಿಯುವವರಿಗೆ ಯುವಕರು ಟಿವಿ ನೋಡಬಾರದು. ಇಲ್ಲದಿದ್ದರೆ ಮೋದಿ ಮಂಕು ಮೋಡಿಯಿಂದ ಯುವಕರಿಗೆ ಹುಚ್ಚು ಹಿಡಿಸುತ್ತಾರೆ ಎಂದರು. ಕಳೆದ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಅನ್ನಭಾಗ್ಯ, ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ನೀಡಲಾಗಿತ್ತು. ಈಗ ಎಚ್.ಡಿ. ಕುಮಾರಸ್ವಾಮಿ 17 ಸಾವಿರ ಕೋಟಿ ರೂ. ನೀಡಿದ್ದಾರೆ. ಮೈತ್ರಿ ಸರ್ಕಾರದ ಜನಪರ, ಅಭಿವೃದ್ಧಿ ಪರ ಚಿಂತನೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದೆ. ದೇಶದಲ್ಲಿ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ಕಾಣಬೇಕಿದ್ದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಹೀಗಾಗಿ ಮೈತ್ರಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.
ಕುಷ್ಟಗಿ ಶಾಸಕ ಅಮರೇಗೌಡ ಬಯ್ನಾಪುರ ಮಾತನಾಡಿ, ದೇಶದಲ್ಲಿ ಸಾಕ್ಷರತೆ ಶೇ.8 ರಷ್ಟು ಇತ್ತು. ಆದರೆ ಈಗ 80 ರಷ್ಟು ಆಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನೇಕ ವಿಶ್ವವಿದ್ಯಾಲಯ, ಶಾಲಾ-ಕಾಲೇಜು ಸ್ಥಾಪಿಸಿದ್ದರಿಂದ ಆಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜನರಿಗೆ ನೀಡಿದ್ದ 165 ಭರವಸೆ
ಈಡೇರಿಸಿದ್ದಾರೆ ಎಂದರು.
ಮೈತ್ರಿ ಪಕ್ಷದ ಅಭ್ಯರ್ಥಿ ಬಿ.ವಿ.ನಾಯಕ, ಶಾಸಕರಾದ ಡಿ.ಎಸ್.ಹೂಲಗೇರಿ, ಪ್ರತಾಪಗೌಡ ಪಾಟೀಲ, ಎಂಎಲ್ಸಿ ಎನ್.ಎಸ್. ಬೋಸರಾಜ್, ಬಸವರಾಜ ಪಾಟೀಲ ಇಟಗಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಸನಸಾಬ ದೋಟಿಹಾಳ, ಜೆಡಿಎಸ್ ಮುಖಂಡ ಸಿದ್ದು ಬಂಡಿ, ಮುಖಂಡರಾದ ಅಮರಗುಂಡಪ್ಪ ಮೇಟಿ, ಶರಣಪ್ಪ
ಮೇಟಿ, ಶರಣಗೌಡ ಬಯ್ನಾಪುರ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಭಾರತಿ ನಿಲಗೇರಿ, ಪಾಮಯ್ಯ ಮುರಾರಿ, ಎಚ್.ಬಿ.ಮುರಾರಿ, ಬಸವಂತರಾಯ ಕುರಿ, ಭೂಪನಗೌಡ ಕರಡಕಲ್, ದಾವೂದ ಮುದಗಲ್ ಸೇರಿದಂತೆ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.