ಜಾತ್ಯತೀತ ಪಕ್ಷಗಳಿಗೆ ಶಕ್ತಿ ತುಂಬಿ: ಬೋಸರಾಜ್
ಮಾನ್ವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಪರ ಪ್ರಚಾರ ಸಭೆ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿರಿಸಲು ಜಾತ್ಯತೀತ ಶಕ್ತಿಗಳು ಒಗ್ಗಟ್ಟು.
Team Udayavani, Apr 14, 2019, 3:39 PM IST
ಮಾನ್ವಿ: ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಮಾತನಾಡಿದರು.
ಮಾನ್ವಿ: ದೇಶದಲ್ಲಿಯ ಕೋಮುವಾದಿ ಶಕ್ತಿಗಳನ್ನು ಹೊಡೆದೋಡಿಸಲು ಜಾತ್ಯತೀತ ಶಕ್ತಿಗಳೆಲ್ಲ ಒಂದಾಗುತ್ತಿವೆ. ಮತದಾರರು ಇವುಗಳನ್ನು ಬಲಪಡಿಸಲು ಮತ ನೀಡುವ ಮೂಲಕ ಆಶೀರ್ವದಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಹೇಳಿದರು.
ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಬಡವರು, ರೈತರ ಅಭಿವೃದ್ಧಿಗಾಗಿ ಶ್ರಮಿಸಿದೆ. ಆದರೆ ಎರಡು ಬಾರಿ ಅವಕಾಶ ಪಡೆದ
ಬಿಜೆಪಿ ಸರ್ಕಾರ ವಿಭಜನೆ ಮಾಡುವ ಪ್ರಯತ್ನ ಮಾಡಿದೆ. ಕಳೆದ 17 ಲೋಕಸಭಾ ಚುನಾವಣೆಗಳಲ್ಲಿ ರಾಯಚೂರು ಕ್ಷೇತ್ರದಿಂದ 15
ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಸಂಸದರಾಗಿದ್ದು ಈ ಬಾರಿ ಕೂಡ ಕಾಂಗ್ರೆಸ್ ಅಭ್ಯರ್ಥಿಯೇ ಜಯ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಪಕ್ಷಗಳ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ ಮಾತನಾಡಿ, ತಮ್ಮ ಗೆಲುವಿಗೆ ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದಾಗಿ ಕೆಲಸ
ಮಾಡುತ್ತಿದ್ದಾರೆ. ಮತದಾರರು ತಮಗೆ ಆಶೀರ್ವದಿಸಿ ಆಯ್ಕೆ ಮಾಡಬೇಕೆಂದು ವಿನಂತಿಸಿದರು. ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಶಾಂತಪ್ಪ ಮಾತನಾಡಿದರು. ದೊಡ್ಡಬಸಪ್ಪಗೌಡ ಭೋಗಾವತಿ, ಶರಣಪ್ಪ ನಾಯಕ ಗುಡದಿನ್ನಿ,
ಕನಕಪ್ಪ ಅಳ್ಳೂರು, ಮಲ್ಲಿಕಾರ್ಜುನ ಪಾಟೀಲ ಇತರರು ಇದ್ದರು.
ಮೋದಿ ಪ್ರಧಾನಿಯಾದ ಮೇಲೆ ನೋಟ್ ಬ್ಯಾನ್‌ನಿಂದ ಸಾಮಾನ್ಯ ಜನರು ಕಷ್ಟ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ವೇಗ ಹೆಚ್ಚಿದೆ. ಮಂಡ್ಯದಲ್ಲಿ ನಿಖೀಲ್ ಕುಮಾರಸ್ವಾಮಿ 3 ಲಕ್ಷ, ರಾಯಚೂರಿನಲ್ಲಿ ಬಿ.ವಿ.ನಾಯಕ 1 ಲಕ್ಷಕ್ಕೂ ಹೆಚ್ಚು ಬಹುಮತಗಳಿಂದ ಗೆಲುವು ಸಾಧಿ ಸಲಿದ್ದಾರೆ. ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವಿ.ನಾಯಕ 30 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ.
ರಾಜಾ ವೆಂಕಟಪ್ಪ ನಾಯಕ
ಶಾಸಕರು, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.