ಶಹಾಪುರ ಮತದಾರರ ಒಲವು ಯಾರ ಕಡೆ?
Team Udayavani, Apr 19, 2019, 1:36 PM IST
ಶಹಾಪುರ: ಯಾದಗಿರಿ ಜಿಲ್ಲೆ ಶಹಾಪುರ ವಿಧಾನಸಭೆ ಕ್ಷೇತ್ರ ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ಕಂಡು ಬಂದಿದೆ.
ಕಳೆದ ಬಾರಿ ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯಿಯಾಗಿದ್ದ ಬಿ.ವಿ. ನಾಯಕ ಮತ್ತೂಮ್ಮೆ ಅದೇ ಪಕ್ಷದಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 2014ರಲ್ಲಿ ಬಿ.ವಿ. ನಾಯಕ ಪ್ರತಿಸ್ಪ ರ್ಧಿಯಾಗಿ ಬಿಜೆಪಿಯಿಂದ ದೇವದುರ್ಗ ಶಾಸಕ ಶಿವನಗೌಡ ನಾಯಕ ಸ್ಪರ್ಧಿಸಿ ಅಲ್ಪಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಅಂದಿನ ಜಿದ್ದಾಜಿದ್ದಿ ಕಣದಲ್ಲಿ ಬಿಜೆಪಿ ಅಭ್ಯರ್ಥಿ ಶೀವನಗೌಡ ನಾಯಕ ಶಹಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗಿಂತ 5 ಸಾವಿರ ಮತ ಹೆಚ್ಚಿಗೆ ಪಡೆದಿದ್ದರು.
ಬಿ.ವಿ. ನಾಯಕ ಮತ್ತೇ ಕಾಂಗ್ರೆಸ್ ಸ್ಪರ್ಧಿಸಿದ್ದರೆ, ಎದುರಾಳಿಯಾಗಿ
ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಕಣದಲ್ಲಿದ್ದಾರೆ.
ಈಗಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತುರುಸಿನ ಗುದ್ದಾಟ
ನಡೆದಿದೆ ಎನ್ನಬಹುದು. ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸುರಪುರ ಶಾಸಕ ರಾಜೂಗೌಡ, ದೇವದುರ್ಗ ಶಾಸಕ ಶಿವನಗೌಡ ನಾಯಕ ಸೇರಿದಂತೆ ಮಾಜಿ ಶಾಸಕ ಗುರು ಪಾಟೀಲ ಟೊಂಕ ಕಟ್ಟಿ ನಿಂತಿದ್ದಾರೆ.
ಕ್ಷೇತ್ರದಲ್ಲಿ ಎರಡು ಪಕ್ಷಗಳ ನಾಯಕರ ಅಬ್ಬರದ ಪ್ರಚಾರ ನಡೆದಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇರುವುದರಿಂದ ಇಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲ. ಆದರೆ ಕ್ಷೇತ್ರದಲ್ಲಿ 2018ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ವಿಧಾನಸಭೆಗೆ ಸ್ಪರ್ಧಿ ಸಿದ್ದ ಅಮೀನರಡ್ಡಿ ಯಾಳಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿರುವುದು ಕಂಡು ಬಂದಿದೆ.
ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಜಂಟಿಯಾಗಿ
ಪ್ರಚಾರ ನಡೆಸಬೇಕಿತ್ತು. ಆದರೆ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್
ನಡುವೆ ಒಮ್ಮತ ಕಂಡು ಬರುತ್ತಿಲ್ಲ. ಕಳೆದ ಸಲ ಮೊದಲ ಬಾರಿಗೆ
ವಿಧಾನಸಭೆಗೆ ಸ್ಪರ್ಧಿಸಿದ್ದ ಅಮೀನರಡ್ಡಿ ಯಾಳಗಿ 23ಸಾವಿರಕ್ಕೂ
ಅ ಧಿಕ ಮತ ಪಡೆದಿದ್ದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ
ಕಾರ್ಯಕರ್ತರ ಸಮಾವೇಶ ತಲಾ ಒಂದು ಬಾರಿ ನಡೆಸುವ
ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಲಾಗಿದೆ. ಬಿಜೆಪಿ
ಪ್ರಬುದ್ಧರ ಸಭೆ ಆಯೋಜಿಸಿ ಬಿಜೆಪಿ ಪ್ರಮುಖ ಶ್ರೀಕಾಂತ ಕುಲಕರ್ಣಿ ಇತರರನ್ನು ಕರೆಯಿಸಿ ಮತಬೇಟೆ ನಡೆಸುವ ಕುರಿತು
ಚರ್ಚೆ ನಡೆಸಿದರೆ, ಕಾಂಗ್ರೆಸ್ ರಾಜ್ಯ ನಾಯಕ, ಅರಣ್ಯ ಖಾತೆ
ಸಚಿವ ಸತೀಶ ಜಾರಕಿಹೊಳೆ ಅವರನ್ನು ಕರೆಸಿ ಪ್ರಚಾರ ಸಭೆ
ನಡೆಸಿದೆ.
ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಗ್ರಾಮೀಣ ಭಾಗದ ಜಿಪಂ ಕ್ಷೇತ್ರ ವ್ಯಾಪ್ತಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದಾರೆ. ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಸಹ ಎಲ್ಲ ಜಿಪಂ ವ್ಯಾಪ್ತಿಯಲ್ಲಿ ಒಂದು ಸುತ್ತಿನ ಮತ ಯಾಚನೆ
ಮುಗಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡು ಬಂದಿದೆ. ಗ್ರಾಮೀಣ ಭಾಗದಲ್ಲೂ ದೇಶದ ಸುಭದ್ರತೆ, ಸರ್ಜಿಕಲ್ ಸ್ಟ್ರೈಕ್ , ಬಾಲಾಕೋಟ್ ದಾಳಿ ಸೇರಿದಂತೆ ಉಚಿತ
ಸಿಲಿಂಡರ್, ಆರೋಗ್ಯ ವಿಮೆ, ಆಯುಷ್ಮಾನ್ ಭಾರತ್, ವಿವಿಧ
ಯೋಜನೆಗಳ ಜಾರಿ ಕುರಿತು ಜನರು ಮಾತನಾಡುತ್ತಿದ್ದಾರೆ. ಇದೇ
ಮೊದಲ ಬಾರಿಗೆ ದೇಶ ಸುಭದ್ರತೆ ಕುರಿತು ಚರ್ಚೆ ಹಳ್ಳಿಹಳ್ಳಿಗಳಲ್ಲಿ
ನಡೆಯುತ್ತಿರುವುದು ಕಾಣಬಹುದು. ಅಲ್ಲದೆ ರಾಜ್ಯದಲ್ಲಿ
ಸಿದ್ರಾಮಯ್ಯನವರ ಆಡಳಿತಕ್ಕೆ ಮುಚ್ಚುಗೆ ವ್ಯಕ್ತವಾಗಿದೆ.
ಆದರೆ ಜನರು ಕೇಂದ್ರದಲ್ಲಿ ಗಟ್ಟಿ ಸರ್ಕಾರ ಬೇಕು ಎಂಬ ಆಲೋಚನೆಯಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶರಣಬಸಪ್ಪಗೌಡ ದರ್ಶನಾಪುರ 30 ಸಾವಿರ ಅಂತರದಿಂದ ಗೆಲವು ಸಾಧಿಸಿದ್ದರು.
ಅದರಂತೆ ಲೋಕಸಭೆಯಲ್ಲೂ ಆ ಅಂತರ ಕಾಯ್ದುಕೊಳ್ಳಲು ಸಾಕಷ್ಟು ಶ್ರಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ, ಲಂಬಾಣಿ, ಕುರಬರು, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಮತ ಹೆಚ್ಚಿವೆ. ಮತದಾರ ಯಾರ ಪರ ಒಲವು ತೋರಲಿದ್ದಾನೆ ಕಾಯ್ದು ನೋಡಬೇಕು.
ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸುರಪುರ ಶಾಸಕ ರಾಜೂಗೌಡ, ದೇವದುರ್ಗ ಶಾಸಕ ಶಿವನಗೌಡ ನಾಯಕ ಸೇರಿದಂತೆ ಮಾಜಿ ಶಾಸಕ ಗುರು ಪಾಟೀಲ ಟೊಂಕ ಕಟ್ಟಿ ನಿಂತಿದ್ದಾರೆ. ಕ್ಷೇತ್ರದಲ್ಲಿ ಎರಡು ಪಕ್ಷಗಳ ನಾಯಕರ ಅಬ್ಬರದ ಪ್ರಚಾರ ನಡೆದಿದೆ. ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇರುವುದರಿಂದ ಇಲ್ಲಿ ಜೆಡಿಎಸ್ ಅಭ್ಯರ್ಥಿ
ಇಲ್ಲ. ಆದರೆ ಕ್ಷೇತ್ರದಲ್ಲಿ 2018ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ
ವಿಧಾನಸಭೆಗೆ ಸ್ಪರ್ಧಿಸಿದ್ದ ಅಮೀನರಡ್ಡಿ ಯಾಳಗಿ ಕಾಂಗ್ರೆಸ್
ಅಭ್ಯರ್ಥಿ ಪರ ಪ್ರಚಾರ ನಡೆಸದಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.