ವಿದ್ಯಾರ್ಥಿನಿ ಸಾವು: ಭುಗಿಲೆದ್ದ ಆಕ್ರೋಶ
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ
Team Udayavani, Apr 21, 2019, 1:00 PM IST
ರಾಯಚೂರು: ನಗರದ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸಾವಿನ ಪ್ರಕರಣ ದಿನೇದಿನೆ ಕಾವು ಪಡೆಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ತಮ್ಮ ಮಗಳದ್ದು ಆತ್ಮಹತ್ಯೆಯಲ್ಲ. ವ್ಯವಸ್ಥಿತ ಕೊಲೆ ಎಂದು ಆಕೆಯ ಪೋಷಕರು ಹೇಳಿದ್ದು, ಪ್ರಕರಣದ ವಿಶೇಷ ತನಿಖೆ ನಡೆಸಲು ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳೂ ನಡೆದಿವೆ. ಈ ಪ್ರಕರಣ ಈಗಾಗಲೇ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ನಾವು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕೆಲವರು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಆದರೆ, ತಪ್ಪು ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಂತೂ ಆಗಲಿದೆ. ಯಾರನ್ನು ರಕ್ಷಿಸುವ ಉದ್ದೇಶವಿಲ್ಲ ಎಂದು ಬಳ್ಳಾರಿ ಡಿಐಜಿ ಎಂ.ನಂಜುಂಡಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ
ಆರಂಭದಲ್ಲಿ ಅವರ ಪಾಲಕರು ನೀಡಿದ ಮಾಹಿತಿ ಮೇರೆಗೆ ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರು ಅತ್ಯಾಚಾರ ಮತ್ತು ಕೊಲೆ ಎಂದು ಹೇಳಿದ್ದರಿಂದ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿ ಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಹೇಳಿದರು.
ಡಿವೈಎಸ್ಪಿ ಹರಿಬಾಬು ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಲಭ್ಯ ಮಾಹಿತಿ ಆಧರಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಇನ್ನೂ ಶವಪರೀಕ್ಷೆ ವರದಿ ಬಂದಿಲ್ಲ. ಅದು ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ತಕ್ಷಣಕ್ಕೆ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧವೂ ವಿದ್ಯಾರ್ಥಿನಿ ಪಾಲಕರು ಆರೋಪಿಸಿದ್ದಾರೆ. ಈ ಕುರಿತು ಸಂಬಂಧಿಸಿದ ಪೊಲೀಸರ ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದರು.
ವ್ಯವಸ್ಥಿತ ಕೊಲೆ: ಮಗಳದ್ದು ಆತ್ಮಹತ್ಯೆಯಲ್ಲ. ಅದು ವ್ಯವಸ್ಥಿತ ಕೊಲೆ. ಅಲ್ಲದೇ, ಆರೋಪಿ ಸುದರ್ಶನ ಯಾದವ್ ಜತೆಗೆ ಇನ್ನೂ ಹಲವರು ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಕೂಡಲೇ ಅವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ವಿದ್ಯಾರ್ಥಿನಿ ಪಾಲಕರು ಒತ್ತಾಯಿಸಿದರು.
ಆರೋಪಿ ಸುದರ್ಶನ್ ಯಾದವ್ ಕಿರಿಕಿರಿ ಮಾಡುತ್ತಿದ್ದಾನೆ ಎಂದು ಆತನ ಸಹೋದರಿಗೂ ನಮ್ಮ ಮಗಳು ತಿಳಿಸಿದ್ದಳು. ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಮಗಳ ಬಗ್ಗೆ ಇಲ್ಲ ಸಲ್ಲದ ವಿಷಯ ಹರಡಲಾಗುತ್ತಿದೆ. ದಯವಿಟ್ಟು ಅಂಥ ಪೋಸ್ಟ್‌ಗಳನ್ನು ಹಾಕದಂತೆ ಮನವಿ ಮಾಡಿದ ಅವರು, ಇಂಟರ್ನಲ್ ಪರೀಕ್ಷೆಗೆ ತೆರಳಿದ ಮಗಳು ಪುನಃ ಬರಲೇ ಇಲ್ಲ. ಸಂಜೆಯೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರೆ ದೂರು ಸ್ವೀಕರಿಸಲಿಲ್ಲ. ಮರುದಿನ ಬೆಳಗ್ಗೆ ಅವರೇ ಕರೆದು ನಮ್ಮ ಮಗಳ ಮೊಬೈಲ್ ಮತ್ತು ಬೈಕ್ ಕೀಲಿ ನೀಡಿದ್ದಾರೆ ಎಂದು ವಿವರಿಸಿದರು.
ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ
ಮಾತನಾಡಿ, ಮಗಳು ಕಾಣೆಯಾದ ಕೂಡಲೇ ಹೆತ್ತವರು ದೂರು ನೀಡಿದರೆ ಪೊಲೀಸರು ಪರಿಗಣಸಿಲ್ಲ. ವಿನಾಕಾರಣ ಕಾಲಹರಣ ಮಾಡಿದ್ದಾರೆ. ಬಂಧಿ ತ ಆರೋಪಿ ಆರು ತಿಂಗಳಿನಿಂದ ಮೃತ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿ ತಂದೆ ಬುದ್ಧಿವಾದ ಹೇಳಿದ್ದರೂ ಕೇಳಿಲ್ಲ. ಆರೋಪಿ ಮೇಲೆ ಸಂಶಯ ಹೆಚ್ಚಾಗಿದೆ. ಘಟನೆ ಖಂಡಿಸಿ ವಿಶ್ವಕರ್ಮ ಸಮಾಜ ಹಾಗೂ ವಿವಿಧ ಸಂಘಟನೆಗಳಿಂದ ಏ. 25ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಯುವತಿ ಶವ ಪತ್ತೆಯಾದ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.
ಹರ್ಷಿಕಾ-ಭುವನ್ ಆಕ್ರೋಶ: ರಾಯಚೂರು ಶಾಂತಿಗೆ ಹೆಸರಾದ ನಾಡು. ಇಂಥ ಸ್ಥಳದಲ್ಲಿ ಕ್ರೂರ ಕೃತ್ಯ ಎಸಗಿರುವುದು ನಿಜಕ್ಕೂ ನಂಬಲಸಾಧ್ಯ. ಮೃತ ಯುವತಿ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಮಾನವೀಯತೆ ಮರೆತು ಇಂಥ ಹೇಯ ಕೃತ್ಯ ಎಸಗಿದವರಿಗೆ ಶಿಕ್ಷೆ ಆಗಲೇಬೇಕು ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದರು.
ನಟ ಭುವನ್ ಮಾತನಾಡಿ, ಇದೊಂದು ಕ್ರೂರವಾದ
ಕೃತ್ಯ. ಹೆಣ್ಣು ಮಗಳಿಗೆ ಆಗಿರುವ ಅನ್ಯಾಯ ಮರೆ ಆಗಬಾರದು. ಜಿಲ್ಲಾಡಳಿತ, ಸರ್ಕಾರದ ಮೇಲೆ ಒತ್ತಡ
ಹಾಕಲೆಂದೇ ನಾವು ಇಲ್ಲಿಗೆ ಬಂದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.