59 ಡೆಂಘೀ, 14 ಚಿಕೂನ್‌ಗುನ್ಯಾ ಪ್ರಕರಣ
•ಕರಪತ್ರ ವಿತರಿಸಿ ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಯರು
Team Udayavani, Jul 20, 2019, 1:44 PM IST
ಸಾಗರ: ಎಸ್‌ಎನ್ ನಗರ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಡೆಂಘೀ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು
ಸಾಗರ: ತಾಲೂಕಿನಲ್ಲಿ ಒಟ್ಟು 59 ಡೆಂಘೀ ಹಾಗೂ 14 ಚಿಕೂನ್‌ಗುನ್ಯಾ ಪ್ರಕರಣ ಪತ್ತೆಯಾಗಿದೆ. 59 ಡೆಂಘೀ ಪ್ರಕರಣದಲ್ಲಿ 48 ಗ್ರಾಮಾಂತರ ಹಾಗೂ 18 ನಗರವ್ಯಾಪ್ತಿಯಲ್ಲಿ ಪತ್ತೆಯಾಗಿದೆ. 14 ಚಿಕೂನ್‌ಗುನ್ಯಾ ಪ್ರಕರಣದಲ್ಲಿ 4 ನಗರವ್ಯಾಪ್ತಿ ಹಾಗೂ 10 ಗ್ರಾಮೀಣ ಪ್ರದೇಶದಲ್ಲಿ ಕಂಡು ಬಂದಿರುವುದರಿಂದ ಜನರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಮುನಿ ವೆಂಕಟರಾಜು ಹೇಳಿದರು.
ನಗರದ ಎಸ್‌ಎನ್ ನಗರ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಶುಕ್ರವಾರ ಡೆಂಘೀ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಅದರಲ್ಲಿಯೂ ಈ ಭಾಗದಲ್ಲಿ ಡೆಂಘೀ ಮತ್ತು ಚಿಕೂನ್‌ಗುನ್ಯಾ ಕಾಣಿಸಿಕೊಂಡಿರುವುದರಿಂದ ಆರೋಗ್ಯ, ಆಶಾ ಕಾರ್ಯಕರ್ತೆಯರು ಈ ಭಾಗದಲ್ಲಿ ಮನೆಮನೆಗೆ ಕರಪತ್ರ ವಿತರಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ತಾಲೂಕಿನ ಬೇರೆಬೇರೆ ಭಾಗದಲ್ಲಿ ಡೆಂಘೀ ಪ್ರಕರಣ ಪತ್ತೆಯಾಗಿರುವ ಕಡೆಗಳಲ್ಲಿ ಮತ್ತು ಇತರ ಗ್ರಾಮಗಳಲ್ಲಿ ಪ್ರತಿ ಶುಕ್ರವಾರ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ರೀತಿಯ ಜ್ವರ ಬಂದರೂ ರಕ್ತ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಹೆಚ್ಚು ದಿನಗಳ ಕಾಲ ನೀರು ಸಂಗ್ರಹಿಸಿ ಇಡಬಾರದು. ಡೆಂಘೀ ಕುರಿತು ಆರೋಗ್ಯ ಇಲಾಖೆ ತಿಳಿಸುವ ಮುಂಜಾಗ್ರತೆ ವಹಿಸಬೇಕು ಎಂದು ಕರೆ ನೀಡಿದರು. ನಗರಸಭೆ ಪೌರಾಯುಕ್ತ ರಾಜು ಎಸ್. ಮಾತನಾಡಿ, ಈಗಾಗಲೇ ನಗರಸಭೆ ವತಿಯಿಂದ ನಗರವ್ಯಾಪ್ತಿಯಲ್ಲಿ ಡೆಂಘೀ ಕುರಿತು ಜಾಗೃತಿ ಮೂಡಿಸಲಾಗಿದೆ. ನಗರಸಭೆ ವತಿಯಿಂದ ಕರಪತ್ರ ಮುದ್ರಿಸಿ ಮನೆಮನೆಗೆ ವಿತರಿಸಲಾಗುತ್ತಿದೆ. ಜೊತೆಗೆ ಫಾಗಿಂಗ್, ಮೆಲಾಥಿನ್ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ ಎಂದರು.
ನಗರಸಭೆ ಪೌರ ಕಾರ್ಮಿಕರು ಸ್ವಚ್ಛತೆ ದೃಷ್ಟಿಯಿಂದ ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಮನೆಯ ಅಕ್ಕಪಕ್ಕವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಜೊತೆಗೆ ಬೇಡದ ವಸ್ತುಗಳನ್ನು ವಿಲೇ ಮಾಡಬೇಕು. ಡೆಂಘೀಗೆ ಸಂಬಂಧಪಟ್ಟ ಲಾರ್ವ ಉತ್ಪತ್ತಿಯಾಗುವ ಸ್ಥಳಗಳ ಕುರಿತು ಕರಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಇದನ್ನು ಜನರು ಅನುಸರಿಸಿ, ಅನುಪಯುಕ್ತ ವಸ್ತುಗಳನ್ನು ತೆರವು ಮಾಡುವ ಜೊತೆಗೆ ಶುದ್ಧ ನೀರು ಕುಡಿಯಬೇಕು ಎಂದು ತಿಳಿಸಿದರು.
ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕರಾದ ಶೈಲೇಶ್, ರಚನಾ, ಆರೋಗ್ಯ ಇಲಾಖೆ ಪ್ರಭಾಕರ್, ಸುರೇಶ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.