ದಿವ್ಯಾಂಗರ ಪಾಲನೆ ದೇವರ ಕೆಲಸ: ಎಚ್. ಹಾಲಪ್ಪ

ನಿಸ್ವಾರ್ಥ ಸೇವೆಗೆ ಸಕ್ಷಮ ಕರ್ನಾಟಕ ಉತ್ತಮ ನಿದರ್ಶನ

Team Udayavani, Jul 1, 2019, 4:25 PM IST

1-July-36

ಸಾಗರ: ಭೀಮನಕೋಣೆಯ ಲಕ್ಷ್ಮೀನಾರಾಯಣಸ್ವಾಮಿ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಹಾಲಪ್ಪ ದಿವ್ಯಾಂಗ ಮಕ್ಕಳಿಗೆ ಕಲಿಕೋಪಕರಣಗಳನ್ನು ವಿತರಿಸಿದರು.

ಸಾಗರ: ವಿಶೇಷ ಮಕ್ಕಳ ಮನಸ್ಥಿತಿ ಅರಿತು ಅದಕ್ಕೆ ಪೂರಕವಾಗಿ ಸ್ಪಂದಿಸಲು ತಾಳ್ಮೆ ಮತ್ತು ಶ್ರದ್ಧೆ ಅಗತ್ಯ. ಈ ಸಂದರ್ಭದಲ್ಲಿ ಶಿಕ್ಷಕರು, ಪೋಷಕರು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಇಂತಹ ದಿವ್ಯಾಂಗ ಮಕ್ಕಳ ಪಾಲನೆ, ಪೋಷಣೆ ಹಾಗೂ ಅವರಿಗೆ ಶಿಕ್ಷಣ ನೀಡುವುದು ಎಂದರೆ ದೇವರ ಕೆಲಸವಿದ್ದಂತೆ ಎಂದು ಶಾಸಕ ಎಚ್. ಹಾಲಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಭೀಮನಕೋಣೆಯ ಲಕ್ಷ್ಮೀನಾರಾಯಣಸ್ವಾಮಿ ಕಲ್ಯಾಣ ಮಂದಿರದಲ್ಲಿ ಭಾನುವಾರ ಮುಂಗರವಳ್ಳಿ ಚೈತನ್ಯ ವಿಶೇಷ ಶಿಕ್ಷಣ ಟ್ರಸ್ಟ್‌, ಚೈತನ್ಯ ವಿಶೇಷ ಶಿಕ್ಷಣ ಶಾಲೆ ಮತ್ತು ಸಕ್ಷಮ ಕರ್ನಾಟಕ ದಕ್ಷಿಣ ಪ್ರಾಂತ ಇವರ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವ್ಯಾಂಗ ಮಕ್ಕಳಿಗೆ ಕಲಿಕೋಪಕರಣಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚೈತನ್ಯ ವಿಶೇಷ ಶಿಕ್ಷಣ ಶಾಲೆ ಅಂತಹ ಮಕ್ಕಳನ್ನು ಅನೇಕ ವರ್ಷಗಳಿಂದ ನೋಡಿಕೊಳ್ಳುವ ಜೊತೆಗೆ ಅವರ ಸಾಧನೆಗೆ ಊರುಗೋಲಾಗಿ ನಿಂತಿರುವುದು ಹೆಮ್ಮೆಯ ಸಂಗತಿ. ಈಗಾಗಲೇ ಮುಂಗರವಳ್ಳಿ ಚೈತನ್ಯ ವಿಶೇಷ ಶಿಕ್ಷಣ ಶಾಲೆ ಆವರಣದಲ್ಲಿ ನನ್ನ ಅನುದಾನದಲ್ಲಿ ವಿಶೇಷ ಮಕ್ಕಳಿಗಾಗಿ 3 ಲಕ್ಷ ರೂ. ವೆಚ್ಚದಲ್ಲಿ ವಾಕಿಂಗ್‌ ಪಾಥ್‌ ನಿರ್ಮಾಣ ಮಾಡಿಕೊಡಲಾಗುತ್ತಿದೆ ಎಂದರು.

ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಸಕ್ಷಮ ಕರ್ನಾಟಕ ಇಂತಹ ಮಕ್ಕಳ ಏಳಿಗೆಗಾಗಿ ನಿಸ್ವಾರ್ಥ ಸೇವೆಯನ್ನು ದೇಶವ್ಯಾಪಿ ಸಲ್ಲಿಸಿಕೊಂಡು ಬರುತ್ತಿದೆ. ಸೇವಾ ಮನೋಭಾವ ಹೊಂದಿರುವ ಸ್ವಯಂಸೇವಕರು ಸಕ್ಷಮ ಪ್ರಾಧಿಕಾರದ ಮೂಲಕ ಮಾನವೀಯ ಮೌಲ್ಯ ಹೊಂದಿರುವ ಇಂತಹ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಮುಂಗರವಳ್ಳಿಯ ಚೈತನ್ಯ ವಿಶೇಷ ಶಾಲೆಯ ಮಕ್ಕಳ ಕಲಿಕೆಗೆ ಅನುಕೂಲವಾಗುವಂತಹ ಪಾಠೊಪಕರಣ ನೀಡಿರುವುದು ಸಂಸ್ಥೆಯ ಸದುದ್ದೇಶಕ್ಕೆ ಸಾಕ್ಷಿಯಾಗಿದೆ. ಸಮಾಜ ಇಂತಹ ಸಂಸ್ಥೆಗಳನ್ನು ಪ್ರೋತ್ಸಾಹಿಸಿಕೊಂಡು ಬರಬೇಕು ಎಂದರು.

ಸಕ್ಷಮ ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ಜಯರಾಮ ಬೊಳ್ಳಾಜೆ ಮಾತನಾಡಿ, ವಿಶೇಷ ಮಕ್ಕಳ ಶ್ರೇಯೋಭಿವೃದ್ಧಿಗೆ ಸಕ್ಷಮ ಕರ್ನಾಟಕ ದೇಶವ್ಯಾಪಿ ಕೆಲಸ ಮಾಡಿಕೊಂಡು ಬರುತ್ತಿರುವ ಏಕೈಕ ಸಂಸ್ಥೆಯಾಗಿದೆ. ದಿವ್ಯಾಂಗ ಮಕ್ಕಳು ತಾವೂ ಸಮಾಜದ ಒಂದು ಭಾಗ ಎನ್ನುವ ಮನೋಭಾವ ರೂಢಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಕಾಲಕಾಲಕ್ಕೆ ತರಬೇತಿ ಶಿಬಿರಗಳನ್ನು ಸಹ ನಡೆಸಿಕೊಂಡು ಬರುತ್ತಿದೆ. ಒಟ್ಟಾರೆ ಸಮರ್ಥ ಭಾರತ ನಿರ್ಮಾಣ ನಮ್ಮ ಆಶಯವಾಗಿದೆ ಎಂದರು.

ಟ್ರಸ್ಟ್‌ ಸಂಚಾಲಕ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಕ್ಷಮ ಕರ್ನಾಟಕ ದಕ್ಷಿಣ ಪ್ರಾಂತದ ಕೋಶಾಧ್ಯಕ್ಷ ಜಯದೇವ ಕಾಮತ್‌, ಮಂಗಳೂರು ಫಿಷರಿಸ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ರಾಮಚಂದ್ರ ಭಟ್ ಇದ್ದರು. ನಾರಾಯಣಸ್ವಾಮಿ ಬಿ.ಕೆ. ಸ್ವಾಗತಿಸಿದರು. ಪ್ರಾಚಾರ್ಯೆ ಶಾಂತಲಾ ಸುರೇಶ್‌ ವಂದಿಸಿದರು. ಎಂ.ನಾಗರಾಜ್‌ ನಿರೂಪಿಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.