ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದನೆ

ಪತ್ರಿಕಾ ವಿತರಕರು ಬಿಲ್ ಕೇಳಿದರೆ ಸತಾಯಿಸದಿರಿ: ಶಾಸಕ ಹಾಲಪ್ಪ

Team Udayavani, Sep 8, 2019, 6:13 PM IST

8-Sepctember-27

ಸಾಗರ: ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಯಿತು.

ಸಾಗರ: ಪತ್ರಿಕೆ ವಿತರಕರು ಸಂಕಷ್ಟದ ನಡುವೆಯೇ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಇವರ ಎಂತಹದ್ದೇ ಸಮಸ್ಯೆ ಇದ್ದರೂ ನಾನು ಸ್ಪಂದಿಸುತ್ತೇನೆ ಎಂದು ಶಾಸಕ ಎಚ್. ಹಾಲಪ್ಪ ಭರವಸೆ ನೀಡಿದರು.

ನಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪತ್ರಕರ್ತರು ದಿನದ 24 ಗಂಟೆಯೂ ಕೆಲಸ ಮಾಡುತ್ತಾರೆ. ತುರ್ತು ಸಂದರ್ಭದಲ್ಲಿ ಕೆಲವೊಮ್ಮೆ ಜನರು ಪತ್ರಕರ್ತರ ಸಹಕಾರವನ್ನು ಅಪೇಕ್ಷೆ ಪಡುತ್ತಾರೆ. ತಾವು ಸಂಗ್ರಹಿಸಿದ ಸುದ್ದಿ ಅಚ್ಚಾಗಿ ಬಂದಾಗ ಅದು ಪತ್ರಿಕೆಗಳ ಮೂಲಕ ಓದುಗರಿಗೆ ತಲುಪಿದಾಗ ಪತ್ರಕರ್ತರ ಕೆಲಸ ಸಾರ್ಥಕವಾಗುತ್ತದೆ. ಅಂತಹ ಕೆಲಸವನ್ನು ಪತ್ರಿಕಾ ವಿತರಕರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಗೌರವಿಸುವುದು ಶ್ರೇಷ್ಠ ಕೆಲಸ ಎಂದು ತಿಳಿಸಿದರು.

ತಿಂಗಳ ಪೂರ್ತಿ ನಿಮ್ಮ ಮನೆಗೆ ಪತ್ರಿಕೆ ಹಾಕಿ ತಿಂಗಳ ಕೊನೆಯಲ್ಲಿ ಬಿಲ್ ಕೇಳಲು ಬರುವ ಹುಡುಗರನ್ನು ನಾಳೆ, ನಾಡಿದ್ದು ಬಾ ಎಂದು ಸತಾಯಿಸಬೇಡಿ. ಪತ್ರಿಕೆ ಬಿಲ್ ಕೇಳುವ ಹುಡುಗ ಬಂದರೆ ವಾಪಸ್‌ ಕಳಿಸಬೇಡಿ. ತಕ್ಷಣ ಪಾವತಿ ಮಾಡಿ ಅವರನ್ನು ಅಲೆಸಬೇಡಿ ಎಂದು ನಾನು ಮನೆಯಲ್ಲಿ ಹೇಳಿದ್ದೇನೆ ಎಂದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ಮಾತನಾಡಿ, ನಾನು ಒಂದು ಕಾಲದಲ್ಲಿ ಬೇರೆಬೇರೆ ಪತ್ರಿಕೆಯನ್ನು ಮನೆಮನೆಗೆ ವಿತರಿಸಿದ್ದೇನೆ. ಪತ್ರಿಕೆ ವಿತರಕರ ಕಷ್ಟ ಏನೆಂದು ನನಗೆ ಗೊತ್ತಿದೆ. ಸರ್ಕಾರಿ ನೌಕರರಿಗೆ ತಿಂಗಳಿಗೆ ಸಂಬಳ, ಬೇರೆಬೇರೆ ರೀತಿಯ ಸವಲತ್ತುಗಳು ಇರುತ್ತದೆ. ಆದರೆ ಪತ್ರಿಕೆಯನ್ನು ಮನೆಮನೆಗೆ ಹಂಚುವ ಹುಡುಗರಿಗೆ ಯಾವುದೇ ಪ್ರತ್ಯೇಕ ಆದಾಯ ಇರುವುದಿಲ್ಲ. ಅಂತಹವರ ಕಷ್ಟವನ್ನು ಸಮಾಜ ಗುರುತಿಸಬೇಕು. ಈ ನಿಟ್ಟಿನಲ್ಲಿ ಒಕ್ಕೂಟ ಇಂತಹ ಸಾರ್ಥಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬಂದಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ಮಹೇಶ್‌ ಹೆಗಡೆ, ಗಣಪತಿ ಶಿರಳಗಿ, ರಮೇಶ್‌ ಎನ್‌., ಎಚ್.ಎಲ್. ರಾಘವೇಂದ್ರ, ಉದಯವಾಣಿ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ತಾಲೂಕು ಅಧ್ಯಕ್ಷ ವೈ. ಮೋಹನ್‌ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ನಾಗೇಶ್‌, ಸಿವಿಲ್ ಸರ್ಜನ್‌ ಡಾ| ಪ್ರಕಾಶ್‌ ಬೋಸ್ಲೆ, ಡಾ| ಸುರೇಶ್‌ ರಾವ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಮುನಿವೆಂಕಟ ರಾಜು, ನಗರಸಭೆ ಸದಸ್ಯ ಆರ್‌. ಶ್ರೀನಿವಾಸ್‌ ಇದ್ದರು. ರಮ್ಯ ಹೆಗಡೆ ಪ್ರಾರ್ಥಿಸಿದರು. ಜುಬೇದ ಎಂ. ಅಲಿ ಸ್ವಾಗತಿಸಿದರು. ದೀಪಕ್‌ ಸಾಗರ್‌ ಅಭಿನಂದನಾ ಭಾಷಣ ಮಾಡಿದರು. ಕೆ. ಗುರುಶಾಂತ ವಂದಿಸಿದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.