ಪ್ರತಿಭೆ ಗುರುತಿಸುವ ಕೆಲಸ ಮಾಡಿ
ಗುಣಮಟ್ಟದ ಶಿಕ್ಷಣ ನೀಡಿ ಉನ್ನತ ಸ್ಥಾನ ಪಡೆಯುವಲ್ಲಿ ನೆರವಾಗಿ: ದಂಡಗಿಮಠ
Team Udayavani, Sep 7, 2019, 12:35 PM IST
ಸೈದಾಪುರ: ಪಟ್ಟಣದ ವಿದ್ಯಾವರ್ಧಕ ಡಿ.ಎಲ್.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಶಿಕ್ಷಕರ ದಿನ ಆಚರಿಸಿದರು.
ಸೈದಾಪುರ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಣೆ ಮಾಡುವಂತೆ ಹೇಳಿ ಶಿಕ್ಷಕ ಸಮೂದಾಯವನ್ನು ಗೌರವಿಸುವಂತೆ ಮಾಡಿದ್ದಾರೆ. ಇದರ ಮಹತ್ವ ಹೆಚ್ಚಾಗುವಂತೆ ಮಾಡಲು ಶಿಕ್ಷಕರು ಸಮರ್ಪಣಾ ಭಾವನೆಯೊಂದಿಗೆ ಕೆಲಸ ಮಾಡಬೇಕು ಎಂದು ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಹೇಳಿದರು.
ಇಲ್ಲಿನ ವಿದ್ಯಾವರ್ಧಕ ಡಿ.ಎಲ್.ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳ ವತಿಯಿಂದ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳನ್ನು ಸಹಪಾಠಿಗಳು, ಗೆಳೆಯರಂತೆ ಕಾಣಬೇಕು. ಪ್ರತಿ ಮಗುವಿನಲ್ಲಿ ಅದರದೆಯಾದ ಪ್ರತಿಭೆ ಇರುತ್ತದೆ. ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಈ ಭಾಗ ಶೈಕ್ಷಣಿಕವಾಗಿ ಅತೀ ಹಿಂದುಳಿದಿದೆ. ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಉನ್ನತ ಸ್ಥಾನ ಪಡೆಯುವಲ್ಲಿ ನೆರವಾಗಬೇಕು. ಇದಕ್ಕಾಗಿ ಇಚ್ಛಾ ಶಕ್ತಿಯೊಂದಿಗೆ ಶ್ರಮವಹಿಸಿ ಸೇವಾ ಮನೋಭಾವನೆಯೊಂದಿಗೆ ಕಾರ್ಯ ಮಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪ್ರಶಿಕ್ಷಣಾರ್ಥಿಗಳಾದ ಕವಿತಾ, ನಾಜನೀನ, ಚಂದ್ರಮ್ಮ, ಅಂಬ್ರೇಶ, ಶೃತಿ, ವಿಜಯಲಕ್ಷ್ಮೀ, ಮಲ್ಲಯ್ಯ ಮಾತನಾಡಿದರು. ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಜಿ.ಎಂ. ಗುರುಪ್ರಸಾದ, ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಹಣಮರಡ್ಡಿ ಮೋಟ್ನಳ್ಳಿ, ಶ್ವೇತಾ ರಾಘವೇಂದ್ರ ಪೂರಿ, ಆನಂದ ಪಾಟೀಲ ಕೊಂಡಾಪುರ ಸೇರಿದಂತೆ ಇತರರಿದ್ದರು. ಪ್ರಿಯಾಂಕಾ ಪ್ರಾರ್ಥನಾ ಗೀತೆ ಹಾಡಿದರು. ಪದ್ಮಾ ಸ್ವಾಗತಿಸಿದರು. ಸರಸ್ವತಿ ನಿರೂಪಿಸಿದರು. ಗೌರಮ್ಮ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.