ಅಂಗನವಾಡಿ ಬಲವರ್ಧನೆಗೆ ಶ್ರಮ
ಅಂಗನವಾಡಿ ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ಸಚಿವರ ಭೇಟಿ
Team Udayavani, Jul 7, 2019, 12:29 PM IST
ಸಂಡೂರು: ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಈ. ತುಕರಾಂ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಸಂಡೂರು: ಸರ್ಕಾರ ಯಾವುದೇ ರೀತಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂಥ ಕಾರ್ಯಮಾಡದೇ ಅವುಗಳನ್ನು ಬಲಪಡಿಸುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಬಗ್ಗೆ ಗಮನಹರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ತಿಳಿಸಿದರು.
ಅವರು ಶನಿವಾರ ಪಟ್ಟಣದಲ್ಲಿ 2 ದಿನಗಳ ಕಾಲ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿನಿರತರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಸರ್ಕಾರ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡುವುದಿಲ್ಲ. ಪ್ರತಿಭಟನೆಯನ್ನು ಹಿಂಪಡೆಯಿರಿ, ನಿಮ್ಮ ಎಲ್ಲ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ನಾಗರತ್ನಮ್ಮ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ., ಯುಕೆಜಿ ತಕ್ಷಣ ನಿಲ್ಲಿಸಬೇಕು. ಇಲ್ಲವೇ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಾಲೆಗಳಲ್ಲಿ ವಿಲೀನಗೊಳಿಸಬೇಕು ಎಂದು ವಿವಿಧ ಬೇಡಿಕೆಯ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟಲಕ್ಷ್ಮೀ, ಕವಿತ, ಯಲ್ಲಮ್ಮ, ಗಂಗಮ್ಮ, ಶಶಿಕಲಾ, ಪೂರ್ಣಚಂದ್ರ, ಲಲಕ್ಷ್ಮೀ, ಮಾರೆಕ್ಕ, ಕೆ.ಎಸ್. ರಾಧ, ಭಾರತಿ, ಕಲಾವತಿ, ಸರಸ್ವತಿ, ಎ.ಎಂ. ಮಲ್ಲಮ್ಮ, ಚಿಂತಾಮಣಿ, ಸುಮಂಗಳಮ್ಮ, ಈ. ಗಾಯಿತ್ರಿ ಇತರ ಹಲವಾರು ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.