ಶಿಕ್ಷಣದಿಂದ ಮನಸ್ಸಿನ ಶ್ರೀಮಂತಿಕೆ ಹೆಚ್ಚಳ: ಡಾ| ರುದ್ರವಾರ
ಜಾಕನಪಲ್ಲಿ ರಂಗ ಶಿಕ್ಷಣ ಕಾರ್ಯ ಇನ್ನೂ ಹೆಚ್ಚಲಿ
Team Udayavani, Jul 8, 2019, 3:52 PM IST
ಸೇಡಂ: ಜಾಕನಪಲ್ಲಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಪಾಸಾದ ಮತ್ತು ಮೈಸೂರು ರಂಗಾಯಣಕ್ಕೆ ರಂಗಶಿಕ್ಷಣ ಪಡೆಯಲು ಆಯ್ಕೆಯಾದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಸೇಡಂ: ವಿದ್ಯಾರ್ಥಿಗಳು ಸೋಮಾರಿಯಾಗದೆ ಮನಸ್ಸಿನ ಶ್ರೀಮಂತಿಕೆ ವೃದ್ಧಿಸಿಕೊಳ್ಳಲು ಶಿಕ್ಷಣ ಪಡೆಯಬೇಕು ಎಂದು ಮನಶಾಸ್ತ್ರಜ್ಞ ಡಾ| ವೆಂಕಟರೆಡ್ಡಿ ರುದ್ರವಾರ ಹೇಳಿದರು.
ತಾಲೂಕಿನ ಜಾಕನಪಲ್ಲಿ ಗ್ರಾಮದ ಗ್ರಂಥಾಲಯದಲ್ಲಿ ತಿಂಗಳ ಸಂಜೆ ವೇದಿಕೆ ಮತ್ತು ನಾನು-ನಮ್ಮೂರು ಶಾಲಾ ಮಕ್ಕಳ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಮತ್ತು ಮೊಟ್ಟ ಮೊದಲ ಬಾರಿಗೆ ಜಾಕನಪಲ್ಲಿ ಗ್ರಾಮದಿಂದ ಮೈಸೂರು ರಂಗಾಯಣಕ್ಕೆ ರಂಗಶಿಕ್ಷಣ ಪಡೆಯಲು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಹೇಳುವ ಪಾಠವನ್ನು ಮೊದಲೇ ಓದಿಕೊಂಡು ಹೋಗಬೇಕು. ವೇಗವಾಗಿ, ಸರಳವಾಗಿ, ಪೂರ್ಣವಾಗಿ ಓದಬೇಕು. ಹೊಸ ಪದಗಳನ್ನು ತಿಳಿದುಕೊಳ್ಳಬೇಕು. ಚರ್ಚಿಸುವುದು, ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳಿಗೆ ಹೊದಾಗ ಮಾತ್ರ ಯಶಸ್ವಿ ವಿದ್ಯಾರ್ಥಿಯಾಗಲು ಸಾಧ್ಯ ಎಂದು ಹೇಳಿದರು.
ತಾಲೂಕ ಕ.ರ.ವೇ ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಮಾತನಾಡಿ, ಜಾಕನಪಲ್ಲಿಯಲ್ಲಿ ನಡೆಯುವ ರಂಗಶಿಕ್ಷಣದ ಚಟುವಟಿಕೆಗಳು ರಾಜ್ಯದ ತುಂಬೆಲ್ಲ ಸುದ್ದಿಗಳಾಗಿವೆ. ಇದೇ ರೀತಿ ನಿಮ್ಮ ಕೆಲಸಗಳು ನಿರಂತರಾಗಿರಲಿ, ಯಶಸ್ಸು ನಿಮ್ಮದಾಗುತ್ತದೆ ಎಂದರು.
ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ ರೆಡ್ಡಿ ಆಡಕಿ, ಜಾಕನಪಲ್ಲಿ ಸಾರ್ವಜನಿಕ ಗ್ರಂಥಾಲಯದ ಗ್ರಂಥಪಾಲಕ ವೆಂಕಟಪ್ಪ ಜೋಗಿ, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟರಾಮರೆಡ್ಡಿ ಚಿಟೇಲಿ, ನಾಟಕ ಶಿಕ್ಷಕ ಅಶೋಕ ತೊಟ್ನಳ್ಳಿ, ತಿಂಗಳ ಸಂಜೆ ವೇದಿಕೆ ಅಧ್ಯಕ್ಷ ಸಿದ್ಧಯ್ಯ ಸ್ವಾಮಿ ಮಠಪತಿ ಇದ್ದರು.
ಮೈಸೂರು ರಂಗಾಯಣದ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾದ ಸಿದ್ಧಪ್ಪ ತಳವಾರ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಪಾಸಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಅಶೋಕ ತೊಟ್ನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಶ್ರೀ ಪಾಟೀಲ ನಿರೂಪಿಸಿದರು, ಸಿದ್ಧಪ್ಪ ತಳವಾರ ಸ್ವಾಗತಿಸಿದರು, ನವಿರೆಡ್ಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.