ರಸ್ತೆಗಳಲ್ಲಿ ಬಿಡಾಡಿ ದನಗಳ ಪಾರುಪತ್ಯ
Team Udayavani, Nov 8, 2019, 10:53 AM IST
ಮಲ್ಲಿನಾಥ ಪಾಟೀಲ
ಶಹಾಬಾದ: ನಗರದ ಬಹುತೇಕ ಮುಖ್ಯ ರಸ್ತೆಗಳಲ್ಲಿ ಹಗಲು-ರಾತ್ರಿ ಎನ್ನದೇ ಎಲ್ಲೆಂದರಲ್ಲಿ ತಿರುಗಾಡುವ ಮತ್ತು ಕುಳಿತೇಳುವ ಬಿಡಾಡಿ ದನಗಳಿಂದಾಗಿ ಇಲ್ಲಿನ ಸಾರಿಗೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ.
ನಗರದ ಮುಖ್ಯ ರಸ್ತೆಗಳ ಮೇಲೆ ದನಗಳು ಕುಳಿತುಕೊಳ್ಳುತ್ತಿರುವುದರಿಂದ ಸಂಚಾರ ವ್ಯವಸ್ಥೆಗೆ ತೀವ್ರ ಸಮಸ್ಯೆ ಆಗುತ್ತಿದೆ. ಎಲ್ಲೆಂದರಲ್ಲಿ ಹಂದಿಗಳು ವಾಹನಗಳ ಕೆಳಗೆ ನುಗ್ಗಿ ಬರುವುದನ್ನು ತಪ್ಪಿಸಬೇಕೆಂದು ಸಾರ್ವಜನಿಕರು ನಗರಸಭೆಗೆ ಪದೇ ಪದೇ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಚಾರಕ್ಕೆ ಉಂಟಾಗುತ್ತಿರುವ ತಾಪತ್ರಯ ಒಂದೆಡೆಯಾದರೆ, ರಸ್ತೆ ಪಕ್ಕದ ಮಾರ್ಕೆಟ್‌ನಲ್ಲಿ ಹಣ್ಣು – ತರಕಾರಿ ಮಾರುವ ವ್ಯಾಪಾರಿಗಳ ಪಾಲಿಗಂತೂ ಈ ದನಗಳ ಕಾಟ ಸಾಕಾಗಿ ಹೋಗಿದೆ. ಒಂದು ಕ್ಷಣ ಮೈಮರೆತರೂ ತರಕಾರಿ ಮತ್ತು ಹಣ್ಣುಗಳತ್ತ ನುಗ್ಗುತ್ತಿವೆ. ಹೀಗಾದರೆ ನಮ್ಮ ಬದುಕು ಸಾಗಿಸುವುದಾದರೂ ಹೇಗೆ ಎಂದು ಬೀದಿ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ, ವಿಪಿ ವೃತ್ತ, ಪೊಲೀಸ್ ಠಾಣೆ ಹಾಗೂ ನಗರದ ಬಹುತೇಕ ಮುಖ್ಯ ರಸ್ತೆಗಳ ಮೇಲೆಯೇ ಬಿಡಾಡಿ ದನಗಳು ಠಿಕಾಣಿ ಹೂಡುತ್ತಿವೆ. ಆದ್ದರಿಂದ ನಗರಸಭೆ ಪೌರಾಯುಕ್ತರು ಹಾಗೂ ಅಧ್ಯಕ್ಷರು ಈ ಬಗ್ಗೆ ಗಮನ ಹರಿಸಿ ಬಿಡಾಡಿ ದನಗಳನ್ನು ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.