ಫರ್ಸಿ ನಾಡಲ್ಲಿ ಮಂಜು ಮುಸುಕಿದ ವಾತಾವರಣ
Team Udayavani, Jan 5, 2020, 10:40 AM IST
ಮಲ್ಲಿನಾಥ ಪಾಟೀಲ
ಶಹಾಬಾದ: ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ್ ಉದ್ಯಮದ ಮೂಲಕ ತನ್ನದೇ ಛಾಪು ಮೂಡಿಸಿರುವ ಶಹಾಬಾದ ನಗರದಲ್ಲಿ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಷ್ಟು ಕಾವಳ ಉಂಟಾಗಿ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗುತ್ತಿದೆ.
ನಗರದಲ್ಲಿ ಪ್ರತಿದಿನ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅಸದೃಶ್ಯವಾಗಿ ಕಾಣುತ್ತಿದ್ದಾರೆ. ಪ್ರತಿನಿತ್ಯ ವಾಯುವಿಹಾರಕ್ಕೆ ಹೋಗುವ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ಈ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೇ ತಮ್ಮ ಮೊಬೈಲ್ ಕ್ಯಾಮರಾದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದ್ದಾರೆ.
ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆ ಉತ್ಪತ್ತಿ ಮಾಡುತ್ತದೆ. ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಬಾಣೆಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೇ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆ ಪಾಠ ಕಲಿಸಿದೆ ಎಂದು ಹೇಳುತ್ತಾರೆ ಮಾಲಗತ್ತಿ ಗ್ರಾಮದ ಸಿದ್ದು ಅಲ್ಲೂರ್ ಹಾಗೂ ಶಿವಕುಮಾರ ಕುಸಾಳೆ.
ಮಡಿಕೇರಿ, ಶೃಂಗೇರಿ, ಆಗುಂಬೆ, ಚಾರ್ಮುಡಿ ಘಾಟಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೇ ಸಾಮನ್ಯವಾಗಿ ಕಂಡು ಬರುವ ದೃಶ್ಯಗಳು. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಟಿಯಾಗುತ್ತಿರುವುದರಿಂದ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸುತ್ತಿದ್ದಾರೆ. ಈ ಮಂಜು ಮುಸುಕಿದ ವಾತಾವರಣದಿಂದ ವಾಹನ ಚಾಲಕರು ಮುಂಜಾವಿನಲ್ಲಿಯೂ ದೀಪ ಬೆಳಗಿಸಿ ಸಂಚರಿಸಬೇಕಾದ ಪರಿಸ್ಥಿತಿ ಬಂದೊದಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.