ಡಿ.14ರಂದು ಉಚಿತ ಸಾಮೂಹಿಕ ವಿವಾಹ ಸಮಾರಂಭ

Team Udayavani, Nov 18, 2019, 4:17 PM IST

18-November-24

ಶಹಾಪುರ: ಮಾಜಿ ಸಚಿವ ದಿ| ಬಾಪುಗೌಡ ದರ್ಶನಾಪುರ ಅವರ 31ನೇ ಪುಣ್ಯಸ್ಮರಣೆ ಸ್ಮರಣಾರ್ಥ ಡಿ. 14ರಂದು ನಗರದ ರಾಖಂಗೇರಾ ಗ್ರಾಮದಲ್ಲಿನ ವಗ್ಗರಾಯಣ್ಣ ಮುತ್ಯಾನವರ ಸನ್ನಿಧಾನದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಲ್ವಂಕೊಂಡಿಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ನಗರದ ಬಿಲ್ವಂಕೊಂಡಿಮಠದಲ್ಲಿ ನಡೆದ ಸಾಮೂಹಿಕ ವಿವಾಹದ ಕರ ಪತ್ರ ಬಿಡುಗಡೆ ಮಾಡಿ ಸ್ವಾಮೀಜಿ ಮಾತನಾಡಿದರು. ಇಂದಿನ ದಿನಮಾನಗಳಲ್ಲಿ ಅಗತ್ಯಗಿಂತ ಹೆಚ್ಚಾಗಿ ಮದುವೆ ಸಮಾರಂಭಗಳಲ್ಲಿ ಖರ್ಚು ಮಾಡುತ್ತಿರುವುದು ಸಾಮಾನ್ಯವಾಗಿದೆ. ಅದಕ್ಕೆಲ್ಲ ಕಡಿವಾಣ ಹಾಕಬೇಕಿದೆ. ಬಡವರು ಮಕ್ಕಳ ಮದುವೆಗೆ ಜೀವಮಾನವಿಡಿ ದುಡಿದು ಕೂಡಿಟ್ಟ ಹಣ ಖರ್ಚು ಮಾಡಿದರೂ ಸಾಲ ಅನಿವಾರ್ಯವಾಗಿದೆ. ಇದಕ್ಕೆಲ್ಲ ಸರಳ ಉಚಿತ ಸಾಮೂಹಿಕ ಮದುವೆಯೇ ಮದ್ದು ಎಂದು ಹೇಳಿದರು.

ದಿ| ಬಾಪುಗೌಡ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ನೂರಾರು ಬಡ ಕುಟುಂಬಗಳ ಬದುಕಿಗೆ ಅವರು ದಾರಿ ದೀಪವಾಗಿದ್ದಾರೆ. ಇಂದಿಗೂ ಪ್ರತಿ ಹಳ್ಳಿಯಲ್ಲಿ ಬಾಪುಗೌಡರ ಹೆಸರೇಳಿ ದೀಪ ಮೂಡಿಸುವಂತೆ ಕುಟುಂಬಗಳನ್ನು ನಾವೆಲ್ಲ ಕಾಣಬಹುದು. ಅಂತಹ ಮಹಾನ್‌ ವ್ಯಕ್ತಿ ಪುಣ್ಯಸ್ಮರಣೆ ಅಂಗವಾಗಿ ಪುಣ್ಯದ ಕೆಲಸ ಮಾಡುವ ಮೂಲಕ ಅವರಿಗೆ ನಮನಗಳನ್ನು ಸಲ್ಲಿಸಬೇಕು ಎಂಬ ಉದ್ದೇಶದಿಂದ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮ ಪಕ್ಷಾತೀತ ಮತ್ತು ಜಾತ್ಯತೀತವಾಗಿದೆ. ಇಲ್ಲಿ
ಬಾಪುಗೌಡರು ಈ ಹಿಂದೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಅವರ ಪುಣ್ಯಸ್ಮರಣೆ ಅಂಗವಾಗಿ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ವಿನಃ ಇಲ್ಲಿ ಯಾವುದೇ ರಾಜಕೀಯ, ಪಕ್ಷ, ಪಂಥ ಎಂಬ ಭಿನವಿಲ್ಲ ಎಂದು ಹೇಳಿದದರು.

ಮಡ್ನಾಳ ಗ್ರಾಮದ ಅಲ್ಲಮಪ್ರಭುಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ಸರಳ ಸಾಮೂಹಿಕ ವಿವಾಹ ಈಗಿನ ಕಾಲದಲ್ಲಿ ಅಗತ್ಯವಿದ್ದು, ಇದೊಂದು ಉತ್ತಮ ಕಾರ್ಯವಾಗಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕಿದೆ. ಕಳೆದ ಎರಡು ಮೂರು ವರ್ಷಗಳಿಂದ ರೈತರು ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಿದ್ದಾರೆ. ನೆರೆ ಹಾವಳಿ, ಅತಿವೃಷ್ಠಿ, ಅನಾವೃಷ್ಠಿ ಹೀಗೆ ಸಾಲು ಸಾಲು ಕಷ್ಟಗಳಲ್ಲಿ  ಳುಗಿರುವಾಗ ಮನೆಯಲ್ಲಿ ವಯಸ್ಸಿಗೆ ಬಂದ ಮಕ್ಕಳ ಮದುವೆ ಮಾಡುವುದು ಕಷ್ಟದ ಕೆಲಸ. ಹೀಗಾಗಿ ಪ್ರತಿ ಗ್ರಾಮಕ್ಕೂ ಈ ಕುರಿತು ಮಾಹಿತಿ ಹೋಗಬೇಕು. ಯಾವುದೇ ಹಿಂದೆ ಮುಂದೆ ನೋಡದೇ ಸಾಮೂಹಿಕ ವಿವಾಹದಲ್ಲಿ ತಮ್ಮ ಮಕ್ಕಳನ್ನು ಮದುವೆಯಾಗಲು ಪ್ರೇರಿಪಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ವಿಶ್ವನಾಥರಡ್ಡಿ ಪಾಟೀಲ ದರ್ಶನಾಪುರ, ಬಸವರಾಜ ಹೇರುಂಡಿ, ವಸಂತಕುಮಾರ ಸುರಪುರಕರ್‌, ರೇವಣಸಿದ್ದಪ್ಪ ಕಲಬುರ್ಗಿ, ರವಿಕುಮಾರ ಎದುರಮನಿ, ಮಹಾದೇವಯ್ಯ ಸ್ವಾಮಿ, ಶಿವುಕುಮಾರ ಕನ್ಯಾಕೋಳೂರ, ತಿರುಪತಿ ಬಾಣತಿಹಾಳ, ಶಿವುಕುಮಾರ ಬಿಲ್ಲಂಕೊಂಡಿ ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.