ಸಂತ್ರಸ್ತರ ಸಮಸ್ಯೆ ಆಲಿಸಿದ ರಾಜುಗೌಡ
•ಬೇಕಾದ ನೆರವು ನೀಡಲು ನಾನಿದ್ದೇನೆ •ಪ್ರವಾಹ ಇಳಿಯುವವರೆಗೆ ಪರಿಹಾರ ಕೇಂದ್ರ ಬಿಟ್ಟು ಕದಲಬೇಡಿ
Team Udayavani, Aug 14, 2019, 4:04 PM IST
ಸುರಪುರ: ಎಪಿಎಂಸಿ ಕೇಂದ್ರದ ಆವರಣದಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು.
ಸುರಪುರ: ನಗರದ ಎಪಿಎಂಸಿಯಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಸೋಮವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಬಟ್ಟೆ, ಬೆಡ್‌ಸೀಟ್ ಮತ್ತಿತರ ವಸ್ತುಗಳನ್ನು ವಿತರಿಸಿದರು.
ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ ನಂತರದ ಮಾತನಾಡಿದ ಅವರು, ನೆರೆ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದೆ. ಇದರಿಂದ ನದಿ ಪ್ರವಾಹದಲ್ಲಿ ಹರಿಯುವಿನ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿಯುವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಹೊರಹರಿಯುವಿನ ಪ್ರಮಾಣದಲ್ಲಿ ಅಧಿಕವಾಗಲಿದೆ. ಆದ್ದರಿಂದ ನದಿ ನೀರಿನ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಹೀಗಾಗಿ ಅಪಾರ ಬೆಳೆ ನಷ್ಟವಾಗಿದೆ. ಆದ್ದರಿಂದ ರೈತರ ವರದಿ ತರಿಸಿಕೊಂಡು ಸರಕಾರಕ್ಕೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ನದಿ ತೀರದ ತಿಂಥಿಣಿ, ದೇವಪುರ, ಗೆದ್ದಲಮರಿ, ಶೆಳ್ಳಗಿ, ಮುಷ್ಠಳ್ಳಿ, ಸೂಗೂರು, ಚೌಡೇಶ್ವರಹಾಳ ಸೇರಿದಂತೆ ವಿವಿಧ ಗ್ರಾಮಗಳ ಕೊನೆ ಭಾಗದಲ್ಲಿರುವ ವಾರ್ಡ್‌ಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಹ ಇಳಿಮುಖವಾದ ತಕ್ಷಣ ನೆರೆ ಸಂತ್ರಸ್ತರ ಜೀವನವನ್ನು ಸಹಜ ಸ್ಥಿತಿಗೆ ತರಲು ಸಾಧ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮನೆ ಕಳೆದುಕೊಂಡುವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಪ್ರವಾಹ ಇಳಿಯುವರೆಗೆ ಯಾರು ಗಂಜಿ ಕೇಂದ್ರ ಬಿಟ್ಟು ಕದಲಬಾರದು. ನಿಮ್ಮ ನೆರವಿಗೆ ಸರಕಾರವಿದೆ. ಬೇಕಾದ ನೆರವು ನೀಡಲು ನಾನಿದ್ದೇನೆ. ಹೆದರಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.