ಧಾರ್ಮಿಕ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯ
ಶ್ರೀಲಂಕಾ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ಶಹಾಪುರದಲ್ಲಿ ಕಟ್ಟೆಚ್ಚರ
Team Udayavani, Apr 27, 2019, 4:26 PM IST
ಶಹಾಪುರ: ಶ್ರೀಲಂಕಾ ಬಾಂಬ್ ದಾಳಿ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಪಿಐ ನಾಗರಾಜ ಜೆ. ಮಾತನಾಡಿದರು.
ಶಹಾಪುರ: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಕರ್ನಾಟಕದ 9 ಜನರು ಸೇರಿದಂತೆ ಒಟ್ಟು 40ಕ್ಕೂ ಹೆಚ್ಚು ಭಾರತೀಯರು ಹತರಾಗಿದ್ದು, ಇಂತಹ ಘಟನೆಗಳು ಭಾರತದಲ್ಲಿ ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಪಿಐ ನಾಗರಾಜ ಜೆ. ಹೇಳಿದರು.
ನಗರದ ಪೊಲೀಸ್ ಠಾಣೆಯಲ್ಲಿ ನಡೆದ ನಗರದ ವಿವಿಧ ಬಡಾವಣೆಯಲ್ಲಿನ ಮಂದಿರ, ಮಸೀದಿ ಮತ್ತು ಚರ್ಚ್‌ಗಳ ಮುಖ್ಯಸ್ಥರು, ಅಂಗಡಿ ಮುಂಗಟ್ಟುಗಳ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿಯೊಂದು ಮಸೀದಿ, ಮಂದಿರ, ಚರ್ಚ್ ಹೋಟೆಲ್, ಅಂಗಡಿ ಮುಂಗಟ್ಟುಗಳ ಮುಂಭಾಗಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವ ಮೂಲಕ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಲು ಸಾರ್ವತ್ರಿಕ ಸಹಕಾರ ಅಗತ್ಯವಿದೆ. ಹಾಗಾಗಿ ಸರ್ವರೂ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಅಲ್ಲದೆ ಅಪರಿಚಿತ ವ್ಯಕ್ತಿಗಳ ಸಂಚಾರ ಅನುಮಾನ ಕಂಡು ಬಂದಲ್ಲಿ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಆದಷ್ಟು ಬೇಗ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಲ್ಲಿ ಅಪರಾಧ ಕೃತ್ಯಗಳನ್ನು ಶೀಘ್ರ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಸುತ್ತಮುತ್ತಲಿನ ಪರಿಸರದ ದೈನಂದಿನ ಚಟುವಟಿಕೆಗಳ ಚಿತ್ರಣ ಕಾಣಬಹುದಾಗಿದೆ. ಇವುಗಳು ಇಂದಿನ ವ್ಯವಸ್ಥೆಗೆ ಅವಶ್ಯಕವಾಗಿವೆ ಎಂದು ಹೇಳಿದರು.
ನಗರದ ಪ್ರತಿಷ್ಠಿತ ಸ್ಥಳಗಳಾದ ಡಿಸಿಸಿ ಬ್ಯಾಂಕ್ ಸೇರಿದಂತೆ ಇತರೆ ಬ್ಯಾಂಕ್‌ಗಳಲ್ಲಿ ಸಿಸಿ ಕ್ಯಾಮೆರಾಗಳು ಸ್ಥಗಿತಗೊಂಡಿವೆ. ಇವುಗಳಿಂದ ಕಳ್ಳತನ, ದರೋಡೆ ಪ್ರಕರಣ ಪತ್ತೆಗೆ ಅಡ್ಡಿ ಉಂಟಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇತ್ತೀಚಿನ ದಿನಮಾನಗಳಲ್ಲಿ ರೈತರ ಹಣವನ್ನು ಬ್ಯಾಂಕ್‌ಗಳಲ್ಲೆ ಕಸಿದಕೊಂಡು ಪರಾರಿಯಾದರೂ ದರೋಡೆಕೋರರ ಗುರುತು ಸಿಗದ ಸ್ಥಿತಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಅವ್ಯವಸ್ಥೆಗಳಿಂದ ಅಪರಾಧ ಚಟುವಟಿಕೆಗಳು ಹೇರಳವಾಗಿ ನಡೆಯುತ್ತಿವೆ. ಕಾರಣ ಸಂಬಂಧಪಟ್ಟ ಬ್ಯಾಂಕ್, ಹೋಟೆಲ್, ಅಂಗಡಿ ಮನೆಗಳ ಮಾಲೀಕರು ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಇದರಿಂದ ಅವ್ಯವಹಾರಗಳು ಕೊಲೆ ದರೋಡೆಗಳು ಕಡಮೆಯಾಗುತ್ತವೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖಂಡರಾದ ಸಣ್ಣ ನಿಂಗಣ್ಣ ನಾಯ್ಕೋಡಿ, ನಾಗಪ್ಪ ತಹಶೀಲ್ದಾರ್, ಶಿವಪುತ್ರ ಜವಳಿ, ಸಯ್ಯದ್ ಖಾಲೀದ್, ಜಮೀರಸಾಬ್ ಸೇರಿದಂತೆ ಮಸೀದಿ, ಮಂದಿರ ಮತ್ತು ಚರ್ಚ್ ಅರ್ಚಕರು, ಮುಖ್ಯಸ್ಥರು ನಗರದ ವಿವಿಧ ಬಡಾವಣೆಗಳ ಗಣ್ಯರು ಭಾಗವಹಿಸಿದ್ದರು.
ನಗರಸಭೆ ಅನುದಾನದಲ್ಲಿ 13 ಲಕ್ಷ.ರೂ. ವೆಚ್ಚದಲ್ಲಿ ನಗರದ ಬಸವೇಶ್ವರ ವೃತ್ತ ಹಾಗೂ ಹೊಸ ಬಸ್ ನಿಲ್ದಾಣ, ಹಳೆ ನಿಲ್ದಾಣ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಮೂಲಭೂತ ಸೌಕರ್ಯಗಳ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದರೂ ಇದುವರೆಗೂ ಸಮರ್ಪಕವಾಗಿ ಅಳವಡಿಕೆಯಾಗಿಲ್ಲ. ಕೆಲವಡೆ ಆಗಿದ್ದರೂ ಕಾರ್ಯ ನಿರ್ವಹಿಸುತ್ತಿಲ್ಲ. ಈ ಕುರಿತು ನಗರಸಭೆಗೆ ಸಾಕಷ್ಟು ಪತ್ರ ಬರೆದು ತಿಳಿಸಲಾಗಿದೆ. ಸೂಕ್ತ ಸ್ಪಂದನೆ ದೊರೆತಿಲ್ಲ. ಹೆಲ್ಮೆಟ್ ಧರಿಸದ ಕಾರಣ ನಗರದಲ್ಲಿ 15ಕ್ಕೂ ಹೆಚ್ಚು ದುರ್ಮರಣ ಸಂಭವಿಸಿವೆ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. •ನಾಗರಾಜ ಜೆ., ಸಿಪಿಐ ಶಹಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.