ಜೀವ ಸಂಕುಲ ಉಳಿವಿಗೆ ಭೂ ರಕ್ಷಣೆ ಅಗತ್ಯ

ಮಾನವನ ಬೇಕಾಬಿಟ್ಟಿ ಕೃತ್ಯಗಳಿಗೆ ಭೂಮಿ ಮೇಲಿನ ಪದರು ನಾಶ

Team Udayavani, Apr 26, 2019, 3:58 PM IST

26-April-29

ಶಹಾಪುರ: ನ್ಯಾಯಾಲಯ ಆವರಣದಲ್ಲಿ ನಡೆದ ಭೂ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ ಮಾತನಾಡಿದರು

ಶಹಾಪುರ: ಮಾನವ ತನ್ನ ಆಸೆ ಆಕಾಂಕ್ಷೆಗಳ ಈಡೇರಿಕೆಗೆ ಭೂಮಿ ಒಡಲು ಕೊರೆದು ಭವ್ಯ ಕಟ್ಟಡ ನಿರ್ಮಿಸಿಕೊಳ್ಳುತ್ತಿದ್ದಾನೆ. ಇದು ದಿನೇ ದಿನೇ ಹೆಚ್ಚಾಗುತ್ತಿದೆ. ಅಗತ್ಯಕ್ಕನುಗುಣವಾಗಿ ಬಳಸುವ ಮೂಲಕ ಭೂಮಿ ಸಂರಕ್ಷಣೆ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಜೀವ ಸಂಕುಲ ಉಳಿಯುವುದು ಅನುಮಾನ ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ ಕಳವಳ ವ್ಯಕ್ತಪಡಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಭೂ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವನ ಬೇಕಾಬಿಟ್ಟಿ ಕೃತ್ಯಗಳಿಗೆ ಭೂಮಿ ಮೇಲಿನ ಪದರು ನಾಶವಾಗುತ್ತಿದೆ. ಈಗಲೇ ಎಚ್ಚರವಹಿಸಬೇಕು. ಮಳೆ ಬಂದಾಗ ನೀರು ಹರಿದು ಸವಕಳಿಯಾಗುತ್ತದೆ. ಇದರ ರಕ್ಷಣೆಗೆ ಗಿಡಗಳನ್ನು ಬೆಳೆಸಬೇಕು. ಮಾತ್ರವಲ್ಲದೇ ಮರಗಳನ್ನು ಉಳಿಸಬೇಕು. ಅತಿಯಾಗಿ ಭೂಮಿ ಕೊರೆದು ಕೊಳವೆಬಾವಿ ಮೂಲಕ ನೀರು ಸೆಳೆದುಕೊಳ್ಳುವುದು ಅಪಾಯಕಾರಿ ಬೆಳೆವಣಿಗೆಯಾಗಿದೆ. ನೀರಿನ ಅವಶ್ಯಕತೆ ಇದ್ದಷ್ಟು ಮಾತ್ರ ಬಳಕೆಮಾಡಿಕೊಳ್ಳಬೇಕು ಎಂದು ಹೇಳಿದರು.

ಅನ್ನ ನೀಡುವ ಭೂಮಿ ಸಂರಕ್ಷಣೆ ಮಾಡದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ. ಅಗತ್ಯಕ್ಕನುಗುಣವಾಗಿ ಭೂಮಿ, ನೀರು ಬಳಕೆ ಮಾಡಬೇಕು. ಮುಂದಿನ ಪೀಳಿಗೆ ಉಳಿಯಬೇಕಾದರೆ ಭೂಮಿ ಮೇಲೆ ಹೆಚ್ಚಿನ ಒತ್ತಡ ಹಾಕಬಾರದು ಎಂದು ಹೇಳಿದರು.

ಇಲ್ಲಿನ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಬೆಳೆದ ತಕ್ಷಣ ಮೇವಿಗೆ ಬೆಂಕಿ ಹಚ್ಚುವುದು ಸರಿಯಲ್ಲ. ಇದರಿಂದ ಮಣ್ಣಿನಲ್ಲಿ ಇರುವ ಜೀವ ಕಣಗಳು ನಾಶವಾಗುತ್ತವೆ. ಅಲ್ಲದೆ ಅತಿಯಾದ ನೀರು ಬಳಕೆಯಿಂದ ಭೂಮಿ ಸವಳಾಗುತ್ತದೆ. ಬಿತ್ತನೆ ಮಾಡುವಾಗ ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಿ ಅದರ ಗುಣಧರ್ಮದಂತೆ ಬೀಜ ಬಿತ್ತಬೇಕು ಎಂದು ಸಲಹೆ ನೀಡಿದರು.

ನ್ಯಾಯಾಯಾಧೀಶರಾದ ಎಚ್.ಆರ್‌. ಕುಲಕರ್ಣಿ, ಕಾಡಪ್ಪ ಹುಕ್ಕೇರಿ, ಸರಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ, ವಕೀಲರ ಸಂಘದ ಅಧ್ಯಕ್ಷ ಸಾಲೋಮನ್‌ ಆಲ್ಫ್ರೆಡ್, ಕಾರ್ಯದರ್ಶಿ ಸಂತೋಷ ಸತ್ಯಂಪೇಟೆ, ಹಿರಿಯ ವಕೀಲರಾದ ಭಾಸ್ಕರರಾವ್‌ ಮುಡಬೂಳ, ಬಿ.ಎಂ. ರಾಂಪುರೆ, ಮಲ್ಲಿಕಾರ್ಜುನ ಬುಕ್ಕಲ, ಶರಬಣ್ಣ ರಸ್ತಾಪುರ, ಆರ್‌.ಎಂ. ಹೊನ್ನಾರಡ್ಡಿ, ಹಯ್ನಾಳಪ್ಪ ಹಯ್ನಾಳಕರ, ಅಮರೇಶ ನಾಯಕ ಇಟಗ, ಶರಣಪ್ಪ ಪ್ಯಾಟಿ ಇದ್ದರು.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.