ಹದಗೆಟ್ಟ ನೈರ್ಮಲ್ಯ: ನಗರಸಭೆ ನಿರ್ಲಕ್ಷ್ಯ
ಹಲವು ವಾರ್ಡ್‌ಗಳಲ್ಲಿ ಕಸದ ರಾಶಿ-ಚರಂಡಿ ದುರ್ನಾತಕಾಡುತ್ತಿದೆ ಸಾಂಕ್ರಾಮಿಕ ರೋಗ ಭೀತಿ
Team Udayavani, Dec 6, 2019, 1:22 PM IST
ಶಹಾಪುರ: ನಗರದ ಹಲವು ವಾರ್ಡ್‌ಗಳಲ್ಲಿ ಕಸದ ರಾಶಿ, ಚರಂಡಿ ನೀರು ಸಂಗ್ರಹದಿಂದ ಗಬ್ಬೆದ್ದು ದುರ್ವಾಸನೆ ಕಾಡುತ್ತಿದ್ದು, ನಗರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ನಾಕರಿಕರು ಆರೋಪಿಸಿದ್ದಾರೆ.
ನಗರಸಭೆ ಚುನಾವಣೆ ಮುಗಿದು 6 ತಿಂಗಳಾಗಿದೆ. ನಗರಸಭೆಗೆ ಆಯ್ಕೆಯಾದ ಸದಸ್ಯರಿಗೆ ತಾಂತ್ರಿಕ ಕಾರಣದಿಂದ ಇನ್ನೂ ಅಧಿಕಾರ ಸಿಕ್ಕಿಲ್ಲ. ಅಲ್ಲದೇ ಅಧಿಕಾರಿಗಳು ಸ್ವತ್ಛತೆ ಕಡೆಗೆ ಗಮನಹರಿಸಿಲ್ಲ. ನಗರದ ಕೆಲ ಭಾಗದಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಜ್ವರ ಹರಡಿದೆ. ನಗರದ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು ಎರಡು ಮೂರು ದಿನ ನಗರದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಬಳಿಕ ಕೈತೊಳೆದುಕೊಂಡು ಬಿಟ್ಟರು ಎಂಬಂತೆ ಕಾಣುತ್ತಿದೆ. ಸಾಂಕ್ರಾಮಿಕ ರೋಗ, ಡೆಂಘೀ ಮತ್ತು ಚಿಕೂನ್ ಗುನ್ಯಾ ಭೀತಿ ಕಡಿಮೆಯಾಗಿಲ್ಲ.
ಚಾಮುಂಡೇಶ್ವರಿ ನಗರದಲ್ಲಿ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿರುವುದು ಕಂಡು ಬಂದಿದೆ. ಅಲ್ಲಿಯೇ ಆರೋಗ್ಯ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೂ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ನಗರಸಭೆ ಬಡಾವಣೆ ಸ್ವಚ್ಚತೆಗೊಳಿಸಿದರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಗಣೇಶ ನಗರ, ಶರಣಬಸವೇಶ್ವರ, ಸಂಗಮೇಶ್ವರ ನಗರಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದರಿಂದ ಸೊಳ್ಳೆ, ಕ್ರಿಮಿಕೀಟಗಳ ಕಾಟ ಜಾಸ್ತಿಯಾಗಿದೆ. ಹೀಗಾಗಿ ಉತ್ತಮ ನೈರ್ಮಲ್ಯ ಒದಗಿಸಬೇಕಿದ್ದ ನಗರಸಭೆ ನಿದ್ರೆಗೆ ಜಾರಿದೆ ಎಂದು ವಾರ್ಡ್ ನಾಗರಿಕರು ಆರೋಪಿಸಿದ್ದಾರೆ.
ಕೆಲವು ವಾರ್ಡ್‌ಗಳಲ್ಲಿ ನಿವಾಸಿಗಳು ಮನೆ ತಲುಪಬೇಕಾದರೆ ಮೂಗು ಮುಚ್ಚಿಕೊಂಡು ಕೆಸರು ಗದ್ದೆಯಂತ ರಸ್ತೆಯಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರು ಕೂಡ ನಗರಸಭೆ ಸ್ಪಂದಿಸುತ್ತಿಲ್ಲ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸದ ಗೂಡು ಕೆಸರು ಗದ್ದೆಯಾದ ರಸ್ತೆಯಲ್ಲಿಯೇ ದಿನನಿತ್ಯದ ಬದುಕು ಸಾಗಿಸಬೇಕಾಗಿದೆ ಎಂದು ನಾಗರಿಕರು ದೂರಿದ್ದಾರೆ.
ಚಾಮುಂಡೇಶ್ವರಿ ನಗರದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಚರಂಡಿ ನೀರು ಸಂಗ್ರಹವಾಗಿ ಕೆರೆಯಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಾಯಬಣ್ಣ ನಾಶಿ,
ಚಾಮುಂಡಿ ಬಡಾವಣೆ
ನಗರದ ಹಲವಡೆ ಚರಂಡಿ ಅಸಮರ್ಪಕತೆಯಿಂದ ಕೊಳಚೆ ನೀರು ಸಂಗ್ರಹವಾಗಿ ಗಬ್ಬೆದ್ದು ನರುತ್ತಿದೆ. ನಗರಸಭೆ ಅಧಿಕಾರಿಗಳು ಸ್ವತ್ಛತೆಗೆ ಕ್ರಮ ಕೈಗೊಳ್ಳಬೇಕು. ಅಂಗಡಿ, ಮುಂಗಟ್ಟುಗಳ ಸಹ ಕಸದ ರಾಶಿಯನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ.
ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಬಡಾವಣೆ ಸ್ವಚ್ಛತೆಗೆ ನಗರಸಭೆ ಆದ್ಯತೆ ನೀಡಬೇಕು.
ನಂದಕುಮಾರ ಚಿಲ್ಲಾಳ,
ನಗರ ವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.