ಬಿಜೆಪಿ ಯೋಜನೆ ಮನೆ ಮನೆಗೆ ತಿಳಿಸಿ
ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿಗೆ ಜನ ಮೆಚ್ಚುಗೆ: ಬಾಡಿಯಾಲ
Team Udayavani, Aug 3, 2019, 1:16 PM IST
ಶಹಾಪುರ: ಬಿಜೆಪಿ ಕಚೇರಿಯಲ್ಲಿ ನಡೆದ ಸಂಘಟನಾ ಪರ್ವ ಬಿಜೆಪಿ ಸದಸ್ಯತ್ವ ಕಾರ್ಯಕ್ರಮಕ್ಕೆ ಜಿಲ್ಲಾ ಸಂಚಾಲಕ ಶರಣಗೌಡ ಬಾಡಿಯಾಲ ಚಾಲನೆ ನೀಡಿದರು
ಶಹಾಪುರ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಮೇಲೆ ದೇಶದಲ್ಲಿ ಬಿಜೆಪಿ ಶಕ್ತಿ ಹೆಚ್ಚಾಗಿದೆ. ಅವರ ಜನಪ್ರಿಯ ಯೋಜನೆಗಳು ಮತ್ತು ದೇಶಕ್ಕಾಗಿ ಕೈಗೊಂಡ ಹಲವಾರು ಐತಿಹಾಸಿಕ ನಿರ್ಣಯಗಳು ಮನೆಮಾತಾಗಿದೆ ಎಂದು ಬಿಜೆಪಿ ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕ ಶರಣಗೌಡ ಬಾಡಿಯಾಲ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂಘಟನಾ ಪರ್ವ ಬಿಜೆಪಿ ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ಬಿಜೆಪಿ ಸದಸ್ಯತ್ವ ಪಡೆಯಲು ಜನರ ಹಿಂದೆ ಬೀಳಬೇಕಿತ್ತು. ಆದರೆ ಈಗ ಸ್ಥಿತಿ ಸಂಪೂರ್ಣ ಬದಲಾಗಿದೆ. ಬಿಜೆಪಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿದ್ದ ದೊಡ್ಡ ಪಕ್ಷವಾಗಿದೆ. ಅದರಂತೆ ರಾಜ್ಯ ಬಿಜೆಪಿ ಘಟಕ ಹೊಂದಿದ ಸದಸ್ಯತ್ವ ಗುರಿ ತಲುಪಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಮನೆ ಮನೆ ತೆರಳಿ ಬಿಜೆಪಿ ಕೈಗೊಂಡ ಹಲವಾರು ಯೋಜನೆಗಳು ಕುರಿತು ಜನರಿಗೆ ಮನವರಿಕೆ ಮಾಡಬೇಕು ಎಂದರು.
ಪ್ರತಿ ಮನೆಯಲ್ಲಿ ಮಹಿಳೆಯರು ಬಿಜೆಪಿ ಸದಸ್ಯತ್ವ ಪಡೆಯಲು ಮುಂದೆ ಬರುತ್ತಿದ್ದಾರೆ. ಇದಕ್ಕೆಲ್ಲ ಪ್ರಧಾನಿ ಮೋದಿ ಅವರ ಕಾರ್ಯವೈಖರಿ ಮತ್ತು ದೇಶದ ಅಭಿವೃದ್ಧಿಗಾಗಿ ರಾತ್ರಿ ಹಗಲು ಎನ್ನದೆ ಶ್ರಮಿಸುತ್ತಿರುವ ಅವರ ಪ್ರಾಮಾಣಿಕ ಪರಿಶ್ರಮ ಕುರಿತು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಹೀಗಾಗಿ ಜನರು ಸದಸ್ಯತ್ವ ಪಡೆಯಲು ಕೇವಲ ಪಕ್ಷ ತಿಳಿಸಿದ 8980808080 ಸಂಖ್ಯೆಗೆ ಮಿಸ್ ಕಾಲ್ ಮಾಡಿದ್ದಲ್ಲಿ ಸದಸ್ಯತ್ವ ನೋಂದಣಿಯಾಗಲಿದೆ. ಮೊಬೈಲ್ಗೆ ನೋಂದಣಿ ಸಂಖ್ಯೆ ಬರಲಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಮಾಗನೂರ, ಡಾ| ಚಂದ್ರಶೇಖರ ಸುಬೇದಾರ ಮಾತನಾಡಿದರು. ಮುಖಂಡರಾದ ಮಲ್ಲಣ್ಣ ಮಡ್ಡಿ, ನಗರ ಅಧ್ಯಕ್ಷ ಲಾಲನಸಾಬ ಖುರೇಶಿ, ಮಲ್ಲಿಕಾರ್ಜುನ ಚಿಲ್ಲಾಳ, ಗುರು ಕಾಮಾ, ರವಿ ನರಸನಾಯಕ, ಶಾಂತಪ್ಪ ಕಟ್ಟಿಮನಿ, ಉಮೇಶ ಮಹಾಮನಿ, ಅಬ್ದುಲ್ ಹಾದಿಮನಿ, ಕರಿಬಸವ ಬಿರಾಳ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಕರಪತ್ರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.