ಮಳೆ ಅಬ್ಬರಕ್ಕೆ ತರಕಾರಿ ಸಂತೆ ಅಸ್ತವ್ಯಸ್ತ
Team Udayavani, Jul 29, 2019, 4:11 PM IST
ಶಹಾಪುರ: ಸಗರ ಗ್ರಾಮದಲ್ಲಿ ಮಳೆ ನೀರಿಗೆ ಬೀದಿ ಪಾಲಾದ ತರಕಾರಿ
ಶಹಾಪುರ: ರವಿವಾರ ಮಧ್ಯಾಹ್ನ ಸುರಿದ ಮಳೆಗೆ ತರಕಾರಿ ನೆಲಕ್ಕುರುಳಿ ಅಪಾರ ನಷ್ಟವಾದ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ನಡೆದಿದೆ.
ವಾರದ ಸಂತೆಯಲ್ಲಿ ತರಕಾರಿ ವ್ಯಾಪಾರಿಗಳು ಅಪಾರ ಪ್ರಮಾಣದ ತರಕಾರಿ ಮಾರಾಟಕ್ಕಾಗಿ ತಂದಿದ್ದರು. ಕೆಲ ಹೊತ್ತಿನಲ್ಲೆ ಮಳೆ ಸುರಿದ ಹಿನ್ನೆಲೆಯಲ್ಲಿ ಮೆಂತೆ, ಪಾಲಕ, ತಮಟೆ ಸೇರಿದಂತೆ ಇತರೆ ಕಾಯಿ ಪಲ್ಯೆ ಮಳೆ ನೀರಲ್ಲಿ ಕೊಚ್ಚಿ ಹೋಗಿದೆ. ಇದರಿಂದಾಗಿ ತರಕಾರಿ ಮಳೆ ನೀರಲ್ಲಿ ನೆನೆದ ಪರಿಣಾಮ ಸಂತೆಯಲ್ಲಿ ವ್ಯಾಪಾರಿಗಳು ಕಡಿಮೆ ದರದಲ್ಲಿ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಯಿತು.
ಸಂಚಾರ ಅಸ್ತವ್ಯಸ್ತ: ಮಳೆ ಅವಾಂತರದಿಂದ ವಾರದ ಸಂತೆ ನಷ್ಟ ಅನುಭವಿಸಿದ್ದಲ್ಲದೆ, ಗ್ರಾಮದಲ್ಲಿ ಸಂಚಾರಕ್ಕೆ ಅಡೆತಡೆಯುಂಟಾಯಿತು. ಗ್ರಾಮದ ಚರಂಡಿ ಸ್ವಚ್ಛಗೊಳಿಸದ ಹಿನ್ನೆಲೆ ಚರಂಡಿ ತುಂಬಿ ನೀರು ರಸ್ತೆ ಆವರಿಸಿದ್ದು, ಬೈಕ್ ಸವಾರರು ಮತ್ತು ಆಟೋ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.
ಸ್ಥಳೀಯ ಗ್ರಾಪಂ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಅವಾಂತರಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಳೆ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯದೇ ರಸ್ತೆ ಮೇಲೆ ಹರಿಯುತ್ತಿರುವ ಕಾರಣ ಸಂಚಾರಕ್ಕೆ ತೊಂದರೆಯಾಯಿತು ಎಂದು ಜನರು ದೂರಿದರು. ರಸ್ತೆ ತುಂಬೆಲ್ಲ ಹರಡಿದ ತ್ಯಾಜ್ಯ ಮತ್ತು ನೀರಿನಿಂದ ಬೈಕ್ ಸವಾರರು ಆತಂಕದಿಂದಲೇ ಸಾಗುವಂತಾಯಿತು. ಇದೇ ವೇಳೆ ಚರಂಡಿ ತ್ಯಾಜ್ಯ ವಿಲೇವಾರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.