ಶಿಬಾಜೆ: ಶಾಲಾ ಬಾವಿಗೆ ವಿಷಪ್ರಾಶನ ; ಆರೋಪಿಗಳ ಪತ್ತೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 13, 2019, 7:05 PM IST

13-December-32

ನೆಲ್ಯಾಡಿ : ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಪೆರ್ಲ ಸರಕಾರಿ ಶಾಲೆಯ ಕುಡಿಯುವ ನೀರಿನ ಬಾವಿಗೆ ಕೆಲವು ದಿನಗಳ ಹಿಂದೆ ವಿಷ ಹಾಕಿದ ಪ್ರಕರಣದ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು  ಶುಕ್ರವಾರದಂದು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗ್ಗೆ ಹತ್ತೂವರೆ ಗಂಟೆಗೆ ಆರಂಭವಾದ ಪ್ರತಿಭಟನೆ ಸ್ಥಳಕ್ಕೆ ಅಪರಾಹ್ನದ 2-30 ರ ವೇಳೆಗೆ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಉಪತಹಶೀಲ್ದಾರ್ ಪ್ರತೀಷ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಸಂದೇಶ್ ರವರು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಶೀಘ್ರವೇ ಆರೋಪಿಗಳ ಪತ್ತೆ ಹಚ್ಚುವುದಾಗಿ ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಶಾಲಾ ವಿದ್ಯಾರ್ಥಿಗಳು ಶಿಬಾಜೆ ಪೇಟೆಯಿಂದ ಶಾಲೆಯ ಮುಂಭಾಗದ ತನಕ ಮೆರವಣಿಗೆಯಲ್ಲಿ ಸಾಗಿಬಂದು ಶಾಲಾ ಮುಭಾಂಗದಲ್ಲಿ ಜಮಾಯಿಸಿ ಆರೋಪಿಗಳ ಪತ್ತೆಗೆ ಆಗ್ರಹಿಸಿದರು. ಪ್ರಕರಣ ನಡೆದು 12 ದಿನ ಕಳೆದರೂ ಆರೋಪಿಗಳ ಪತ್ತೆಯಾಗದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್,ಶಿಕ್ಷಣ, ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರವೂ ಕೂಗಿದರು.

ಎಸ್‌ಡಿಎಂಸಿ ಗೈರು:
ಕುಡಿಯುವ ನೀರಿಗೆ ವಿಷ ಹಾಕಿದ ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿ ದ.7ರಂದು ನಡೆದ ಎಸ್‌ಡಿಎಂಸಿ ಹಾಗೂ ಪೋಷಕರ ಸಭೆಯಲ್ಲಿ ದ.13ಕ್ಕೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈ ಪ್ರತಿಭಟನೆಗೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರ ಒಂದು ಗುಂಪು ಗೈರು ಹಾಜರಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಎಂಸಿ ಅಧ್ಯಕ್ಷ ವೆಂಕಪ್ಪ ಗೌಡರವರು, ಪ್ರಕರಣ ತನಿಖೆಯ ಹಂತದಲ್ಲಿದೆ. ಶಾಸಕರು ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಆರೋಪಿಗಳ ಪತ್ತೆಗೆ ಒತ್ತಾಯಿಸಿದ್ದಾರೆ. ದ.10ರಂದು ನಡೆದ ಪೋಷಕರ ಸಭೆಯಲ್ಲಿ ದ.13ರಂದು ಪ್ರತಿಭಟನೆ ನಡೆಸುವ ಬದಲು ದ.11ರಿಂದ ಮಕ್ಕಳನ್ನು ಶಾಲೆಗೆ ಕಳುಹಿಸದೇ ಇರಲು ನಿರ್ಣಯಿಸಲಾಗಿದೆ. ಆದ್ದರಿಂದ ಇಂದಿನ ಪ್ರತಿಭಟನೆಗೆ ಹೋಗಿಲ್ಲ. ಆರೋಪಿಗಳ ಪತ್ತೆಗೆ ನಮ್ಮದೂ ಆಗ್ರಹವಿದೆ ಎಂದರು.

ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಬೆಳ್ತಂಗಡಿ ಉಪತಹಶೀಲ್ದಾರ್ ಪ್ರತೀಷ್‌ಕುಮಾರ್‌ರವರು ಮಾತನಾಡಿ, ಘಟನೆ ಕುರಿತಂತೆ ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಕಂದಾಯ ಇಲಾಖೆ ಮೂಲಕ ಪ್ರತಿಭಟನಾಕಾರರ ಮನವಿಯನ್ನು ಕಳುಹಿಸಿಕೊಡುವ ಕೆಲಸ ಮಾಡುತ್ತೇವೆ. ತಪ್ಪಿತಸ್ಥರಿಗೆ ಆದಷ್ಟು ಬೇಗ ಶಿಕ್ಷೆ ಆಗಬೇಕೆಂಬುದು ನಮ್ಮ ಆಶಯವೂ ಆಗಿದೆ ಎಂದರು.

ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್‌ರವರು ಮಾತನಾಡಿ, ಕುಡಿಯುವ ನೀರಿಗೆ ವಿಷ ಹಾಕಿದ ಘಟನೆ ದುರದೃಷ್ಟಕರವಾಗಿದೆ. ಈ ಹಿಂದೆ ಶಾಲೆಯ ಪೈಪು ಲೈನ್ ಒಡೆದು ಹಾಕಿರುವ ಘಟನೆಯ ಮಾಹಿತಿ ಇತ್ತೀಚೆಗಷ್ಟೇ ಸಿಕ್ಕಿದೆ. ಮುಖ್ಯಮಂತ್ರಿಗಳ ಬೆಳ್ತಂಗಡಿ ಭೇಟಿ, ದತ್ತಪೀಠ ಬಂದೋಬಸ್ತ್ ಹಿನ್ನೆಲೆಯಲ್ಲಿ ಕೆಲಸದ ಒತ್ತಡದಲ್ಲಿದ್ದೇವೆ. ಪ್ರಕರಣದ ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ. ಕಾನೂನು ಪ್ರಕಾರ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಸ್ವತ: ನಾನೇ ಮುತುವರ್ಜಿ ವಹಿಸಿ ತನಿಖೆ ಕೈಗೊಳ್ಳುತ್ತೇನೆ. ಆರೋಪಿ ಯಾವುದೇ ಪಕ್ಷದವನಾಗಿದ್ದರೂ ಬಂಧಿಸುವ ಕೆಲಸ ಖಚಿತವಾಗಿಯೂ ಮಾಡುತ್ತೇವೆ ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಮತ್ತು ಪೋಲೀಸ್ ಇಲಾಖೆ ಸಭೆ ನಂತರ ಶಾಲೆಗೆ ಮಕ್ಕಳು ;
ಪ್ರತಿಭಟನಾ ಸಭೆಯಲ್ಲಿ ಮನವಿಯನ್ನು ನೀಡಿದ ಪ್ರತಿಭಟನಾಕಾರರು , ಮಕ್ಕಳ ಪೋಷಕರು ಕಂದಾಯ ಇಲಾಖೆ ಮತ್ತು ಪೋಲೀಸ್ ವೃತ್ತ ನಿರೀಕ್ಷಕರು ಮತ್ತು ಮಕ್ಕಳ ಪೋಷಕರು ಸಭೆ ನಡೆಸಿ ಶಾಲಾ ಮಕ್ಕಳಲ್ಲಿ ಧೈರ್ಯ ತುಂಬಿಸುವ ಕಾರ್ಯವನ್ನ ಸಭೆಯ ಮೂಲಕ ನಡೆಸಿದ ನಂತರ ಶಾಲೆಗೆ ಮಕ್ಕಳನ್ನು ಕಳುಹಿಸುವುದಾಗಿ ಪೋಷಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಹಾಗೂ ಈಗಾಗಲೇ ವಿಷ ಹಾಕಿದೆ ಎನ್ನಲಾದ ಬಾವಿಯ ನೀರನ್ನು ಪರೀಕ್ಷೆಗೆ ಕಳುಹಿಸಿದ್ದು ಇದರ ವರದಿಯನ್ನು ಕೂಡಲೇ ತರಿಸಬೇಕು ಮತ್ತು ಇದೇ ಬಾವಿಯ ನೀರನ್ನು ಮರು ಬಳಕೆ ಮಾಡಬಹುದೇ ಎನ್ನುವ ಕುರಿತಂತೆ ಸ್ಥಳೀಯರಿಗಿರುವ ಸಂಶಯವನ್ನ ದೂರಗೊಳಿಸುವುದು ಇಲಾಖಾ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳಿಗೆ ಪ್ರತಿಭಟನಾಕಾರರು ತಿಳಿಸಿದರು

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.