ಕೊಟ್ಟಾ ಕಾಯ್ದೆ ಅನುಷ್ಠಾನಕ್ಕೆ ಸಹಕರಿಸಿ
Team Udayavani, Oct 19, 2019, 6:23 PM IST
ಶಿವಮೊಗ್ಗ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಜೊತೆಗೆ ಎಲ್ಲಾ ಇಲಾಖೆಗಳು ಸಹ ಕೈ ಜೋಡಿಸಬೇಕಾದ ಅಗತ್ಯವಿದೆ ಎಂದು ಎರಡನೇ ಜಿಲ್ಲಾ ಸತ್ರ ನ್ಯಾಯಾ ಧೀಶ ಕುಡುವಕ್ಕಲಿಗರ್ ಮಹದೇವಪ್ಪ ಗಂಗಪ್ಪ ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ನಗರದ ಐಎಂಎ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಹಮ್ಮಿಕೊಂಡಿರುವ ಐದು ದಿನಗಳ ತಂಬಾಕು ನಿಯಂತ್ರಣ ಕಾಯ್ದೆಯ ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಪೊಲೀಸ್ ಇಲಾಖೆಯು ತಂಬಾಕು ಉತ್ಪನ್ನಗಳ ನಿಯಂತ್ರಣದಲ್ಲಿ ಕಾರ್ಯ ಪ್ರವೃತ್ತವಾಗಿದ್ದು ಉಳಿದ ಇಲಾಖೆಗಳು ಸಹ ಕೈ ಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ| ಮಂಜುನಾಥ್ ನಾಗಲೀಕರ್ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಕೋಟ್ಟಾ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ಶಾಲಾ ಅರಿವು ಕಾರ್ಯಕ್ರಮಗಳು, ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರಗಳು, ಐಇಸಿ ಚಟುವಟಿಕೆಗಳು ಹಾಗೂ ವ್ಯಸನ ಮುಕ್ತಿ ಕೇಂದ್ರಗಳು ಕೋಟ್ಟಾ ಕಾಯ್ದೆಯ ಪ್ರಮುಖ ಅಂಶಗಳಾಗಿದ್ದು ಕಳೆದ ಮೂರು ವರ್ಷಗಳಲ್ಲಿ 300 ಶಾಲಾ ಕಾರ್ಯಕ್ರಮಗಳು, 100 ಅನುಷ್ಠಾನ ಕಾರ್ಯಾಗಾರಗಳು ಹಾಗೂ 1492 ವ್ಯಸನಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ತುಂಗಾ ನಗರದ ಆಡಳಿತ ವೈದ್ಯಾಧಿಕಾರಿ ಡಾ| ಅಚ್ಯುತ್ ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಕುರಿತು ಮಾತನಾಡಿದರು. ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಎನ್. ಸರಸ್ವತಿ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಹೇಮಂತ್‌ರಾಜ, ವ್ಯಸನ ಮುಕ್ತಿ ಕೇಂದ್ರದ ಆಪ್ತ ಸಮಾಲೋಚಕ ಶಿವಕುಮಾರ್ ಎಸ್.ಟಿ., ಜಿಲ್ಲಾ ಪೊಲೀಸ್ ಅ ಧೀಕ್ಷಕ ಕೆ. ಎಂ. ಶಾಂತರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.