ಕಣ್ಮನ ಸೆಳೆದ ವಿದ್ಯಾರ್ಥಿಗಳ ಝಲಕ್!
ನವದುರ್ಗೆಯರ ವೇಷ-ವಿವಿಧ ನೃತ್ಯಗಳ ಮೆರುಗುವಿಶ್ವ ಮಾನವ ಸಂದೇಶ ಸಾರಿದ ಜಾಥಾ
Team Udayavani, Oct 4, 2019, 1:00 PM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ನಡೆಯುವ ಸಹ್ಯಾದ್ರಿ ಉತ್ಸವಕ್ಕೆ ಚಿತ್ರನಟಿ ಮಾನ್ವಿತಾ ಹರೀಶ್ ಕುವೆಂಪು ಅವರ ಪ್ರತಿಮೆಗೆ ಹೂವಿನ ಮಾಲೆ ಹಾಕುವ ಮೂಲಕ ಚಾಲನೆ ನೀಡಿದರು.
ಅವರಿಗೆ ಕುಲಪತಿ ಪ್ರೊ| ಬಿ.ಪಿ.ವೀರಭದ್ರಪ್ಪ ಸಾಥ್ ನೀಡಿದರು. ಚಿಕ್ಕಮಗಳೂರು, ಶಿವಮೊಗ್ಗದ 40 ಪ್ರಥಮ ದರ್ಜೆ ಕಾಲೇಜುಗಳ ತಂಡಗಳು ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿ ಉತ್ಸವಕ್ಕೆ ಮೆರುಗು ತಂದರು.
ನೆರೆ-ಬರಗಳಿಂದಾಗಿ ರೋಸಿ ಹೋದ ರೈತ ಹೇಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ವಿಷಯ ಕುರಿತು ರೈತನ ಅಣುಕು ಶವಯಾತ್ರೆಯನ್ನು ಪ್ರದರ್ಶಿಸಿ ಸಂಕಷ್ಟ ತಿಳಿಸಿದರು. ಹೆಗ್ಗೋಡು ಕಾಲೇಜಿನ ವಿದ್ಯಾರ್ಥಿಗಳ ಹುಲಿವೇಷ, ಸೊರಬ ಕಾಲೇಜಿನ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಕಳಸ ಕಾಲೇಜಿನ ವಿದ್ಯಾರ್ಥಿಗಳ ವಿಂಗ್ ಕಮಾಂಡರ್ ಅಭಿನಂದನ್ ವೇಷ, ವಿಮಾನ, ಮೆರವಣಿಗೆ ಆಕರ್ಷಣೆ ಹೆಚ್ಚಿಸಿದವು. ಕುವೆಂಪು ವಿವಿ ಆವರಣದಲ್ಲಿರುವ ಕಲಾ ಮತ್ತು ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳ ನವದುರ್ಗೆಯರ ವೇಷಭೂಷಣ ನೋಡುಗರ ಮನಸೂರೆಗೊಳಿಸಿತು. ಮೈತ್ರಿ ಶಿಕ್ಷಣ ವಿದ್ಯಾಲಯದಿಂದ ಸಂಚಾರ ನಿಯಮದ ಬಗ್ಗೆ ಜಾಗೃತಿ, ಮೂಡಿಗೆರೆ ಡಿಎಸ್ ಜಿಬಿ ಕಾಲೇಜು ವಿದ್ಯಾರ್ಥಿಗಳಿಂದ ಪರಿಸರ ಉಳಿಸಿ, ಶಿವಮೊಗ್ಗದ ಎಟಿಎನ್‌ಸಿಸಿ ಸಂಜೆ ಕಾಲೇಜು ವಿದ್ಯಾರ್ಥಿಗಳು ಕನ್ನಡ ಉಳಿಸಿ ಘೋಷಣೆ ಕೂಗಿದರು.
ಎನ್‌ಇಎಸ್ ಶಿಕ್ಷಣ ಸಂಸ್ಥೆಯಿಂದ ವಾಹನ ಸವಾರರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆಯಿಂದ ಬಾಲ್ಯ ವಿವಾಹ ವಿರೋಧಿ ಘೋಷಣೆ ಮೊಳಗಿದವು. ಡಿವಿಎಸ್ ಕಾಲೇಜಿನಿಂದ ವಿವಿಧತೆಯಲ್ಲಿ ಏಕತೆ ಬಿಂಬಿಸುವ ವೇಷಭೂಷಣ, ಕಳಸ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್‌ಸಿಸಿ, ಇಂಡಿಯನ್ ಆರ್ಮಿ ಬಗ್ಗೆ ವೇಷ ಭೂಷಣದೊಂದಿಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನಿಂದ ಡೊಳ್ಳು, ವಿಶ್ವಮಾನದ ಸಂದೇಶಸಾರುವ ರಥ, ಶಿರಾಳಕೊಪ್ಪ ಕಾಲೇಜಿನ ವಿದ್ಯಾರ್ಥಿಗಳು ಕಂಸಾಳೆಗೆ ನೃತ್ಯ ಪ್ರದರ್ಶಿಸಿದರು. ಚಿಕ್ಕಮಗಳೂರಿನ ಕೇಡಲಸರ ಕಾಲೇಜಿನಿಂದ ಮೂಢನಂಬಿಕೆ ಹೋಗಲಾಡಿಸಿ, ಪರಿಸರ ಉಳಿಸಿ, ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿಇಡಿ ಕಾಲೇಜಿನಿಂದ ಕರ್ನಾಟಕದಲ್ಲಿ ಅನ್ಯಭಾಷೆಗಳ ಹಾವಳಿ, ಕಮಲಾ ನೆಹರು ಕಾಲೇಜಿನಿಂದ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ, ಎಟಿಎನ್‌ಸಿಸಿ ಕಾಲೇಜಿನಿಂದ ವೀರಗಾಸೆ, ಸಾಗರ ಇಂದಿರಾ ಗಾಂಧಿ ಕಾಲೇಜಿನಿಂದ ಪರಿಸರ ಉಳಿಸಿ, ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೋಣಿ, ಕರಾವಳಿ ಸಂಸ್ಕೃತಿಯನ್ನು
ಬಿಂಬಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.