ಆಹಾರ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಿ

Team Udayavani, Oct 18, 2019, 6:59 PM IST

18-October-22

ಶಿವಮೊಗ್ಗ: ಭಾರತವು ಇಂದು ಅಗತ್ಯಕ್ಕಿಂತ ಹೆಚ್ಚಿನ ಅಹಾರ ಧಾನ್ಯ, ಹಾಲು ಮತ್ತು ಮತ್ಶ್ಯ ಪದಾರ್ಥಗಳನ್ನು ಉತ್ಪಾದಿಸುತ್ತಿದ್ದರೂ ಸಹ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು 102ನೇ ಸ್ಥಾನ ಪಡೆದಿದೆ. ಈ ಅಸಮತೋಲನ ನಿವಾರಣೆಯತ್ತ ಜೀವ ವಿಜ್ಞಾನಗಳ ಸಂಶೋಧಕರು ಗಮನ ನೀಡಬೇಕು ಎಂದು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕ ವಿವಿಯ ಕುಲಪತಿ ಪ್ರೊ| ಮಂಜುನಾಥ ಕೆ. ನಾಯ್ಕ ಅಭಿಪ್ರಾಯಪಟ್ಟರು.

ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಸಚಿವಾಲಯದ ಸಹಯೋಗದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಜೀವ ವಿಜ್ಞಾನ ನಿಖಾಯದಿಂದ ಒಟ್ಟಾಗಿ “ಚಿಕಿತ್ಸಕ ಸಂಯುಕ್ತಗಳನ್ನು ಉತ್ಪಾದಿಸುವಲ್ಲಿ ಸಸ್ಯ ಸೂಕ್ಷ್ಮಜೀವಿಗಳ ಪಾತ್ರ’ ವಿಷಯ ಕುರಿತು ಆಯೋಜಿಸಿರುವ ಹತ್ತು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿಯೇ ಮೊದಲ ಬಾರಿಗೆ ಆಹಾರ ಭದ್ರತಾ ಹಕ್ಕು ನೀಡಿದ ಭಾರತದಲ್ಲಿ ಇಂದು ಪೋಷಕಾಂಶಗಳ ಭದ್ರತೆಯು ಮರೀಚಿಕೆಯಾಗಿದೆ. ಮಣ್ಣಿನ ಜೀವ ವೈವಿಧ್ಯತೆಯನ್ನು ನಾಶ ಮಾಡಿರುವ ಕಾರಣದಿಂದ ಬೆಳೆಯ ಉತ್ಪಾದನೆಯು ಪೌಷ್ಟಿಕವಾಗಿಲ್ಲ. ಅದನ್ನು ಸೇವಿಸುತ್ತಿರುವ ದೇಶದ ಜನರು ರಕ್ತಹೀನತೆ, ರೋಗ ನಿರೋಧಕ ಶಕ್ತಿಯ ಕೊರತೆಗಳಿಂದ ಬಳಲುತ್ತಿದ್ದು, ಡೆಂಘೀ, ಮಂಗನ ಕಾಯಿಲೆಯಂತಹ ಸೋಂಕು ರೋಗಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಸ್ಯ ಮತ್ತು ಸೂಕ್ಷ್ಮಜೀವಿಗಳನ್ನೊಳಗೊಂಡು ಚಿಕಿತ್ಸಕ ಔಷಧೋತ್ಪನ್ನಗಳನ್ನು ತಯಾರಿಸಲು ಸಂಶೋಧಕರಿಗೆ ಇಂತಹ ಕಾರ್ಯಾಗಾರಗಳು ಸಹಾಯಕ ಎಂದು ತಿಳಿಸಿದರು.

ಭಾರತದ ಶೇ. 42ರಷ್ಟು ಮಹಿಳೆಯರು ಅನಿಮೀಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. 5ವರ್ಷಕ್ಕಿಂತ ಕಡಿಮೆ ವಯಸ್ಸಿನ 10 ಲಕ್ಷ ಮಕ್ಕಳು ಪ್ರತಿ ವರ್ಷ ಅಪೌಷ್ಟಿಕತೆಯಿಂದಾಗಿ ಸಾವನ್ನಪ್ಪುತ್ತಿದ್ದಾರೆ ಎನ್ನುತ್ತವೆ ವರದಿಗಳು. ಮಣ್ಣು, ಬೆಳೆಧಾನ್ಯಗಳು ಮತ್ತು ಆಹಾರದಲ್ಲಿ ಪೌಷ್ಟಿಕಾಂಶಗಳ ಇರುವಿಕೆಯನ್ನು ಖಾತರಿ ಪಡಿಸುವ ಬೃಹತ್‌ ಸವಾಲನ್ನು ಸರಿಯಾಗಿ ನಿಭಾಯಿಸಿದಲ್ಲಿ ಮಾತ್ರವೇ 2030ರ 2ನೇ ಹಂತದ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ತಲುಪಲು ಸಾಧ್ಯ ಎಂದು ಪ್ರೊ| ಮಂಜುನಾಥ ಕೆ. ನಾಯ್ಕ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಸಚಿವ ಪ್ರೊ| ಎಸ್‌.ಎಸ್‌. ಪಾಟೀಲ್‌, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಳ್ಳಬಾರದು. ತಮ್ಮ ಕ್ಷೇತ್ರದಲ್ಲಿ ಈಗಾಗಲೇ ಇರುವ ಜ್ಞಾನವನ್ನು ವಿಶ್ಲೇಷಣೆಗೆ ಒಳಪಡಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ವೈಯಕ್ತಿಕ ಕೊಡುಗೆಯನ್ನು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿಲೀಂಧ್ರಶಾಸ್ತ್ರದ ಹಿರಿಯ ವಿಜ್ಞಾನಿ ಬೆಂಗಳೂರಿನ ಕೃಷಿ ವಿವಿಯ ಪ್ರೊ| ಭಾಗ್ಯರಾಜ್‌, ಕಾರ್ಯಾಗಾರದ ಸಂಘಟಕ ಡಾ| ವಿ. ಕೃಷ್ಣ, ಪ್ರೊ| ಕೃಷ್ಣಪ್ಪ, ಹಣಕಾಸು ಅಧಿಕಾರಿ ಪ್ರೊ| ರಮೇಶ್‌ ಮಾತನಾಡಿದರು. ಪ್ರೊ| ನಾರಾಯಣ್‌, ಡಾ| ಬಿ. ತಿಪ್ಪೇಸ್ವಾಮಿ, ಡಾ| ನಾಗರಾಜ್‌ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಇದ್ದರು. ಕಾರ್ಯಾಗಾರಕ್ಕೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮೂವತ್ತು ಶಿಬಿರಾರ್ಥಿಗಳು ಆಗಮಿಸಿದ್ದರು.

ಟಾಪ್ ನ್ಯೂಸ್

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.