ರೋಟಾ ವೈರಸ್ ತಡೆಗೆ ಲಸಿಕೆ
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕ್ರಮ •ಸಮನ್ವಯದಿಂದ ಕೆಲಸ ನಿರ್ವಹಣೆಗೆ ಸೂಚನೆ
Team Udayavani, Aug 31, 2019, 3:41 PM IST
ಶಿವಮೊಗ್ಗ: ಆರೋಗ್ಯ ಇಲಾಖೆ ನಾನಾ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆ ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅವರು ಸಭೆ ನಡೆಸಿ ಮಾತನಾಡಿದರು.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ನೀಡಲಾಗುತ್ತಿದ್ದು, ಮಗುವಿಗೆ 6, 10 ಮತ್ತು 14ನೇ ವಾರದಲ್ಲಿ ಈ ಲಸಿಕೆಯನ್ನು ಹಾಕಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಮಕ್ಕಳು ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಖಾತ್ರಿಪಡಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕೋಟ್ಪಾ ಕಾಯ್ದೆ ಕಟ್ಟುನಿಟ್ಟಿನಿಂದ ಜಾರಿ: ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಶಾಲೆಗಳ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಕಳೆದ ಎಪ್ರಿಲ್ನಿಂದ ಈವರೆಗೆ 589 ಕೊಟ್ಪಾ ದಾಳಿಗಳನ್ನು ನಡೆಸಲಾಗಿದೆ. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಅವರು ಹೇಳಿದರು.
ಕೆಲವು ಗ್ರಾಪಂ ವ್ಯಾಪ್ತಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸ್ಥಳೀಯ ಪಿಡಿಒ ಸಹಕಾರ ನೀಡದಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಪಿಡಿಒಗಳಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಿ ಇಲಾಖಾ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ನೀರಿನ ಪರೀಕ್ಷೆ ಮಾಡಬೇಕು: ಈ ಬಾರಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿವೆ. ಮುಂಜಾಗರೂಕತಾ ಕ್ರಮಗಳಿಂದಾಗಿ ಇದುವರೆಗೆ ಸಾಂಕ್ರಾಮಿಕ ರೋಗಗಳು ಹರಡಿಲ್ಲ. ಇನ್ನು ಮುಂದೆ ಸಹ ಜಾಗರೂಕತೆಯಿಂದಿದ್ದು, ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆ ಮಾಡಬೇಕು ಎಂದು ಅವರು ಸೂಚಿಸಿದರು.
ಆಹಾರ ಗುಣಮಟ್ಟ ಪರೀಕ್ಷೆ ಹೆಚ್ಚಿಸಿ: ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಲು ಆಹಾರ ಮತ್ತು ಪಾನೀಯಗಳ ಗುಣಮಟ್ಟವನ್ನು ನಿರಂತರವಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಕೇವಲ ದೂರು ಬಂದ ಪ್ರಕರಣಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಬಾರದು. ಜಿಲ್ಲೆಯಲ್ಲಿ 298 ಹಾಲು ನೋಂದಣಿ ಕೇಂದ್ರಗಳಿದ್ದು, ಕೇವಲ 4 ಮಾದರಿಗಳನ್ನು ಮಾತ್ರ ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ಕುಡಿಯುವ ನೀರಿನ ಘಟಕಗಳ ಮೇಲೆ ಸಹ ನಿಗಾ ಇರಿಸಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿನಹಳ್ಳಿ, ಆರ್‌ಸಿಎಚ್ ಡಾ| ನಾಗರಾಜ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಶಂಕರಪ್ಪ, ಡಾ| ಕಿರಣ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.