Sagara ಜೆಡಿಎಸ್‌ನ ಸಾಂಗತ್ಯ ನೂರಕ್ಕೆ ನೂರು ಲಾಭ: ಬಿ.ವೈ.ರಾಘವೇಂದ್ರ
Team Udayavani, Oct 11, 2023, 8:31 PM IST
ಸಾಗರ: ಭಾರತೀಯ ಜನತಾ ಪಕ್ಷ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮಾಡಿಕೊಂಡಿರುವ ಒಪ್ಪಂದಿಂದ ಬಿಜೆಪಿಗೆ ನೂರಕ್ಕೆ ನೂರರಷ್ಟು ಲಾಭವಾಗಲಿದೆ ಎಂದು ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಪ್ರತಿಪಾದಿಸಿದರು.
ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ದೂರಸಂಪರ್ಕ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರ ಜೊತೆ ಸಂವಾದ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಐದು ಸಾವಿರ, ಮೂರು ಸಾವಿರ, 200 ಮತಗಳ ಅಂತರದಿಂದ ಬಿಜೆಪಿಯವರು ಸೋತದಿದ್ದೆ. ಅಂತಹ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಈ ಮೈತ್ರಿ ಹೆಚ್ಚಿನ ನೆರವು ನೀಡಲಿದೆ ಎಂದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದೆ. ಅದರಲ್ಲಿ ಅರ್ಧದಷ್ಟು ಮತಗಳು ಬಿಜೆಪಿ ಬಳಸಿಕೊಳ್ಳಬಹುದು ಎಂದು ನಾವು ಭಾವಿಸಿದ್ದೇವೆ. ಪ್ರಧಾನಿ ಮೋದಿಯವರ ಸಾಧನೆಯೂ ನಮ್ಮ ಪರವಾಗಿ ಕೆಲಸ ಮಾಡಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರಂತವರನ್ನು ಪಕ್ಷ ಮೈತ್ರಿಗೆ ಪೂರ್ವಭಾವಿಯಾಗಿ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೈತ್ರಿ ಸಂಬಂಧ ಕೆಲವು ನಾಯಕರಲ್ಲಿ ಅಸಮಾಧಾನ ಸಹಜ. ರಾಜ್ಯ ಮಟ್ಟದ ನಾಯಕರು ಇಂತಹ ವಿಷಯಗಳನ್ನು ನೋಡಿಕೊಳ್ಳುತ್ತಾರೆ. ನಾನು ಶಿವಮೊಗ್ಗ ಜಿಲ್ಲೆಯ ಸೀಮಿತನಾದವನು ಎಂದು ಸಮಜಾಯಿಷಿ ನೀಡಿದರು.
ಅವರ ಜೊತೆ ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಲೋಕನಾಥ್ ಬಿಳಿಸಿರಿ, ಗಣೇಶ್‌ಪ್ರಸಾದ್, ಧರ್ಮಪ್ಪ, ದೇವೇಂದ್ರಪ್ಪ ಇನ್ನಿತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.