ಶಿವಮೊಗ್ಗ: ಮಲೆನಾಡು ಜಿಲ್ಲೆಯಲ್ಲಿಂದು 12 ಕೋವಿಡ್-19 ಪ್ರಕರಣ ಪತ್ತೆ
Team Udayavani, Jun 7, 2020, 6:51 PM IST
ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಇಂದು ಮತ್ತೆ 12 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.
ಇಂದು ಮಹಾರಾಷ್ಟ್ರದಿಂದ ಬಂದಿರುವ 12 ಜನರಲ್ಲಿ ಕೋವಿಡ್ ವೈರಸ್ ಕಾಣಿಸಿಕೊಂಡಿದ್ದು, ಏಳು ವರ್ಷ ಪ್ರಾಯದ ಗಂಡು ಮಗುವಿನಲ್ಲೂ ವೈರಸ್ ಕಾಣಿಸಿಕೊಂಡಿದೆ.
ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದ ಇವರನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು. ಸದ್ಯ ಇವರಿಗೆ ಕೋವಿಡ್-19 ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 65 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಆ 65 ಪ್ರಕರಣಗಳಲ್ಲಿ 28 ಜನರು ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 37 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.