ಜಿಲ್ಲೆಯಲ್ಲಿ ಫುಡ್‌ ಪಾರ್ಕ್‌ ಸ್ಥಾಪನೆಗೆ ಕ್ರಮ


Team Udayavani, Nov 22, 2020, 7:03 PM IST

ಜಿಲ್ಲೆಯಲ್ಲಿ ಫುಡ್‌ ಪಾರ್ಕ್‌ ಸ್ಥಾಪನೆಗೆ ಕ್ರಮ

ಆನಂದಪುರ: ಜಿಲ್ಲೆಯಲ್ಲಿ ಫುಡ್‌ ಪಾರ್ಕ್‌ ಮತ್ತು  ಸ್ಪೈಸ್‌ ಪಾರ್ಕ್‌ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಸುಮಾರು 40 ಕೈಗಾರಿಕೆಗಳಿಗೆ ಯೋಜನೆಯಡಿಉದ್ಯಮ ಸ್ಥಾಪಿಸಲು ಆಹ್ವಾನಿಸಲಾಗಿದ್ದು, 22ಕೈಗಾರಿಕೆಗಳು ಒಪ್ಪಿಗೆ ಸೂಚಿಸಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಸಮೀಪದ ಯಡೇಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಂಜಿಗಾಪುರದಲ್ಲಿ 1 ಕೋಟಿ ರೂ. ವೆಚ್ಚದಲ್ಲಿಪುರಾತನ ವೀರಭದ್ರೇಶ್ವರ ದೇವಸ್ಥಾನದ ಸಾರ್ವಜನಿಕಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸಿಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌ ಸ್ಥಾಪನೆಯಾದರೆ ನಮ್ಮ ಭಾಗದಲ್ಲಿ ಬೆಳೆಯುವಶುಂಠಿ, ಮೆಣಸಿನಕಾಳು, ಅರಿಶಿನ, ಏಲಕ್ಕಿ ಸೇರಿದಂತೆ ಮಸಾಲೆ ಪದಾರ್ಥಗಳಿಗೆ ಉತ್ತಮ ಬೆಲೆ ಬರುತ್ತದೆ.ರೈತರು ತಮ್ಮ ಪದಾರ್ಥಗಳನ್ನು ಮಾರಾಟ ಮಾಡಲು ಮಧ್ಯವರ್ತಿಗಳ ಮೊರೆ ಹೋಗುವುದು ತಪ್ಪುತ್ತದೆ ಎಂದು ಹೇಳಿದರು.

ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಾಗಿರುವ ಎಂಪಿಎಂ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆಶೀಘ್ರದಲ್ಲಿ ಎಂಪಿಎಂ ಪುನರಾರಂಭಗೊಳ್ಳಲಿದ್ದು, ಸಾವಿರಾರು ಯುವಕರಿಗೆ ಉದ್ಯೋಗಾವಕಾಶ ಸಿಗುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶ್ವವಿಖ್ಯಾತಜೋಗ ಜಲಪಾತದಲ್ಲಿ ಶನಿವಾರ ಮತ್ತು ಭಾನುವಾರ ಜಲಧಾರೆ ಉಕ್ಕಿ ಹರಿಯುವಂತೆ ಪ್ರವಾಸಿಗರು ಎಲ್ಲ ಸಂದರ್ಭದಲ್ಲಿ ಜೋಗ ವೀಕ್ಷಣೆಗೆ ಆಗಮಿಸುವಂತೆಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 120 ಕೋಟಿ ರೂ. ಮೀಸಲಿಡಲಾಗಿದೆ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಹಿಂದೆ 2300 ಮೀಟರ್‌ಗೆ ನಿಗದಿಪಡಿಸಲಾಗಿತ್ತು. ಇದನ್ನು 3200 ಮೀಟರ್‌ಗೆ ವಿಸ್ತರಿಸಲು ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನತೆಗೆದುಕೊಳ್ಳಲಿದ್ದಾರೆ. ಇದರಿಂದ ದೊಡ್ಡ ಏರ್‌ ಬಸ್‌ ಗಳು ಲ್ಯಾಂಡ್‌ ಆಗಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಶಾಸಕ ಎಚ್‌. ಹಾಲಪ್ಪ ಹರತಾಳು ಮಾತನಾಡಿ, ಸಾಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಶುಕ್ರವಾರ ಒಂದೇ ದಿನ ಸುಮಾರು 15 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪಅವರು ಬಸವಣ್ಣ, ನಾರಾಯಣ ಗುರುಗಳಂತೆ ಎಲ್ಲ ವರ್ಗವನ್ನು ಸಮಾನವಾಗಿ ಪರಿಗಣಿಸುವ ವಿಶಾಲ ಮನೋಭಾವ ಹೊಂದಿದ್ದಾರೆ. ಮುಖ್ಯಮಂತ್ರಿಗಳ ಸರ್ವವ್ಯಾಪಿ ಮತ್ತು ಸರ್ವಸ್ಪರ್ಶಿ ಆಡಳಿತ ಎಲ್ಲರಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಆನಂದಪುರ ಹೋಬಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ನಿಟ್ಟಿನಲ್ಲಿ 91.50 ಕೋಟಿ ರೂ. ವೆಚ್ಚದ ನೀಲನಕ್ಷೆ ಸಿದ್ಧಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಅಂಬ್ಲಿಗೊಳ ಜಲಾಶಯದಿಂದ ಈ ಭಾಗಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಇದರ ಜೊತೆಗೆ ಹೊಸನಗರತಾಲೂಕಿನ ಕಸಬಾ, ರಿಪ್ಪನಪೇಟೆ, ಸಾಗರ ತಾಲೂಕಿನ ಕಸಬಾ ಮತ್ತು ಆವಿನಹಳ್ಳಿ ಹೋಬಳಿಗೆ ಶರಾವತಿ ನದಿ ನೀರಿನಿಂದ ಸಮರ್ಪಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಮಾತನಾಡಿದರು. ತಾಪಂ ಸದಸ್ಯೆ ಆನಂದಿ ಲಿಂಗರಾಜ್‌, ಹೊಸನಗರ ತಾಪಂಅಧ್ಯಕ್ಷ ವೀರೇಶ್‌ ಅಲವಳ್ಳಿ, ಎಪಿಎಂಸಿ ಅಧ್ಯಕ್ಷಚೇತನರಾಜ್‌ ಕಣ್ಣೂರು, ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಲುಸ್ವಾಮಿ ಗೌಡ, ಕಾರ್ಯದರ್ಶಿಶಾಂತರಾಜ್‌ ಗೌಡ, ತಹಶೀಲ್ದಾರ್‌ ಚಂದ್ರಶೇಖರನಾಯ್ಕ, ಕಾರ್ಯ ನಿರ್ವಾಹಣಾ ಧಿಕಾರಿ ಪುಷ್ಪಾ ಎಂ. ಕಮ್ಮಾರ್‌, ಅಧಿಕಾರಿಗಳಾದ ದಿನೇಶ್‌, ಹಾಲೇಶಪ್ಪ, ಬಲರಾಮ್‌, ರಾಜೇಶ್‌ ನಾಯಕ್‌, ಸಂತೋಷ್‌ ಡಿ. ಇನ್ನಿತರರು ಇದ್ದರು. ರಾಜು ಕೆ.ಆರ್‌. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.